ಬಿಗ್ ಬ್ರೇಕಿಂಗ್ ನ್ಯೂಸ್: ಸ್ವಾತಂತ್ರ್ಯ ಹೋರಾಟಗಾರ  ದೊರೆಸ್ವಾಮಿ ನಿಧನ - Mahanayaka

ಬಿಗ್ ಬ್ರೇಕಿಂಗ್ ನ್ಯೂಸ್: ಸ್ವಾತಂತ್ರ್ಯ ಹೋರಾಟಗಾರ  ದೊರೆಸ್ವಾಮಿ ನಿಧನ

doreswamy
26/05/2021

ಬೆಂಗಳೂರು: ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ಅವರು ಕೆಲ ದಿನಗಳ ಅನಾರೋಗ್ಯದಿಂದ  ಬಳಲುತ್ತಿದ್ದು, ಬುಧವಾರ ಅವರು ನಿಧನ ಹೊಂದಿದ್ದಾರೆ.

ಕೊವಿಡ್ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಅವರು ಬಳಿಕ ಚೇತರಿಸಿಕೊಂಡಿದ್ದರು. ಆ ಬಳಿಕ ಅವರು ಮತ್ತೆ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಬುಧವಾರ ಅವರು ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ.

104 ವರ್ಷದ ಎಚ್.ಎಸ್.ದೊರೆಸ್ವಾಮಿ, ಹೃಧಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ.  ಕೋವಿಡ್ ಸೋಂಕಿನಿಂದ ಗುಣಮುಖಗೊಂಡ ದೊರೆಸ್ವಾಮಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತ್ತು. ಆದ್ದರಿಂದ, ಜಯದೇವ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

ಸ್ವಾತಂತ್ರ್ಯ ಹೋರಾಟಗಾರರಾಗಿದ್ದ ದೊರೆಸ್ವಾಮಿ ಅವರು ತಮ್ಮ ಜೀವನದುದ್ದಕ್ಕೂ ಹೋರಾಟಗಳನ್ನು ನಡೆಸಿದವರು. ತಮ್ಮ ಇಳಿಯ ವಯಸ್ಸಿನಲ್ಲಿಯೂ ಅವರು ಹೋರಾಟವನ್ನು ಕೈಬಿಟ್ಟಿರಲಿಲ್ಲ

ಇತ್ತೀಚಿನ ಸುದ್ದಿ