ನಿನ್ನೆ ಬಂಧಿಸಲಾಗಿದ್ದಅತ್ಯಾಚಾರ ಆರೋಪಿಗಳ ಮೇಲೆ ಪೊಲೀಸರಿಂದ ಫೈರಿಂಗ್
![bangalore rapist](https://www.mahanayaka.in/wp-content/uploads/2021/05/bangalore-rapist.jpg)
28/05/2021
ಬೆಂಗಳೂರು: ಯುವತಿಯನ್ನು ಅತ್ಯಾಚಾರಗೈದು ಗುಪ್ತಾಂಗಕ್ಕೆ ಮದ್ಯದ ಬಾಟಲ್ ಇರಿಸಿ ವಿಕೃತಿ ಮರೆದಿದ್ದ ನಾಲ್ವರು ಆರೋಪಿಗಳನ್ನು ನಿನ್ನೆ ಬೆಂಗಳೂರಿನಲ್ಲಿ ಬಂಧಿಸಲಾಗಿತ್ತು. ಇಂದು ಸ್ಥಳ ಪರಿಶೀಲನೆಗೆ ಕರೆದೊಯ್ಯುತ್ತಿರುವ ವೇಳೇ ಆರೋಪಿಗಳು ತಪ್ಪಿಸಿಕೊಳ್ಳಲು ಯತ್ನಿಸಿದ್ದು, ಈ ವೇಳೆ ಪೊಲೀಸರು ಫೈರಿಂಗ್ ನಡೆಸಿದ್ದಾರೆ.
ಪರಿಶೀಲನೆಗೆ ಆರೋಪಿಗಳಾದ ಸಾಗರ್, ಮೊಹಮ್ಮದ್ ಬಾಬಾ ಶೇಕ್, ರಿದಾಯ್ ಬಾಬು ಹಾಗೂ ಹಕೀಲ್ ಅವರನ್ನು ಕರೆದುಕೊಂಡು ಹೋದಾಗ, ಪೊಲೀಸರ ಮೇಲೆಯೇ ಹಲ್ಲೆ ಮಾಡಲು ಪ್ರಯತ್ನಿಸಿದ್ದಾರೆ ಎಂದು ಹೇಳಲಾಗಿದೆ. ಈ ವೇಳೆ ಪೊಪೊಲೀಸರು ಆತ್ಮರಕ್ಷಣೆಗಾಗಿ ಆರೋಪಿಗಳ ಕಾಲಿಗೆ ಗುಂಡು ಹೊಡೆದಿದ್ದಾರೆ.
10 ದಿನಗಳ ಹಿಂದೆ ಅತ್ಯಾಚಾರದ ವೀಡಿಯೋ ಬಾಂಗ್ಲಾ ದೇಶದಲ್ಲಿ ವೈರಲ್ ಆಗಿತ್ತು ಆ ಬಳಿಕ ಪ್ರಕರಣ ಬೆಳಕಿಗೆ ಬಂದಿದ್ದು, ನಾಲ್ವರು ಕಾಮುಕ ಆರೋಪಿಗಳಿಗೆ ಇಬ್ಬರು ಯುವತಿಯರು ಸಾಥ್ ನೀಡಿದ್ದಾರೆ ಎಂಬ ವಿಷಯವೂ ಬೆಳಕಿಗೆ ಬಂದಿದೆ.