ಮಾಜಿ ಸಿಎಂ ಸಿದ್ದರಾಮಯ್ಯನವರಿಗೆ ಅನಾರೋಗ್ಯ
01/06/2021
ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯನವರಿಗೆ ನಿನ್ನೆ ರಾತ್ರಿಯಿಂದ ತೀವ್ರ ಅನಾರೋಗ್ಯ ಕಾಣಿಸಿಕೊಂಡಿದೆ ಎಂದು ವರದಿಯಾಗಿದ್ದು, ತೀವ್ರ ಜ್ವರದ ಹಿನ್ನೆಲೆಯಲ್ಲಿ ಅವರಿಗೆ ಕೊರೊನಾ ಟೆಸ್ಟ್ ಮಾಡಿಸಲಾಗಿದೆ.
ಸಿದ್ದರಾಮಯ್ಯನವರ ಆಪ್ತ ವೈದ್ಯ ಡಾ.ರವಿ ಕುಮಾರ್ ಅವರು ಸಿದ್ದರಾಮಯ್ಯನವರ ಆರೋಗ್ಯ ತಪಾಸಣೆ ನಡೆಸಿದ್ದು, ಇಂದು ಇಡೀ ದಿನ ವಿಶ್ರಾಂತಿ ಪಡೆದುಕೊಳ್ಳುವಂತೆ ಸಲಹೆ ನೀಡಿದ್ದು, ಹೀಗಾಗಿ ಇಂದು ನಿಗದಿಯಾಗಿದ್ದ ಕಾಂಗ್ರೆಸ್ ನ ಕಾರ್ಯಕ್ರಮಗಳಿಗೆ ಸಿದ್ದರಾಮಯ್ಯನವರು ಗೈರು ಹಾಜರಾಗಲಿದ್ದಾರೆ.
ಬೆಂಗಳೂರಿನ ನಾನಾ ಕ್ಷೇತ್ರಗಳಲ್ಲಿ ಇಂದು ಕಿಟ್ ವಿತರಣೆ ಕಾರ್ಯಕ್ರಮ ನಡೆಯಲಿದ್ದು, ಸಿದ್ದರಾಮಯ್ಯನವರು ಕೂಡ ಭಾಗವಹಿಸಬೇಕಿತ್ತು. ಸಿದ್ದರಾಮಯ್ಯನವರಿಗೆ ಅನಾರೋಗ್ಯ ಕಾಡಿರುವುದರಿಂದ ಅವರ ಅನುಪಸ್ಥಿತಿಯಲ್ಲಿ ಡಿ.ಕೆ.ಶಿವಕುಮಾರ್ ಅವರು ಕಿಟ್ ವಿತರಣೆ ಮಾಡಲಿದ್ದಾರೆ.