ನಟಿಯ ಮುಖವನ್ನು ಎಡಿಟ್ ಮಾಡಿ ಅಶ್ಲೀಲ ವಿಡಿಯೋ ಹರಿಯಬಿಟ್ಟ ಪಾಪಿಗಳು - Mahanayaka
10:51 PM Wednesday 11 - December 2024

ನಟಿಯ ಮುಖವನ್ನು ಎಡಿಟ್ ಮಾಡಿ ಅಶ್ಲೀಲ ವಿಡಿಯೋ ಹರಿಯಬಿಟ್ಟ ಪಾಪಿಗಳು

cyber crime
03/06/2021

ತಿರುವನಂತಪುರಂ:  ತನ್ನ ಮುಖವನ್ನು ಎಡಿಟ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ವಿಡಿಯೋವನ್ನು ಹರಿಯಬಿಡಲಾಗಿದೆ ಎಂದು ಮಲಯಾಳಂ ನಟಿ ರೆಮ್ಯಾ ಸುರೇಶ್ ಸೈಬರ್ ಕ್ರೈಂಗೆ ದೂರು ನೀಡಿದ್ದಾರೆ.

ಮಹಿಳೆಯೋರ್ವರ ಅಶ್ಲೀಲ ವಿಡಿಯೋಗೆ ರೆಮ್ಯಾ ಸುರೇಶ್ ಅವರ ಮುಖವನ್ನು ಅಳವಡಿಸಿ ಎಡಿಟ್ ಮಾಡಲಾಗಿದ್ದು, ಈ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಡಲಾಗಿದೆ ಎಂದು ನಟಿ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

ನಾನು ನೀಡಿರುವ ದೂರನ್ನು ಅಧಿಕಾರಿಗಳು ಸ್ವೀಕರಿಸಿದ್ದು, ತನಿಖೆ ಆರಂಭಿಸಿದ್ದಾರೆ. ವಾಟ್ಸಾಪ್ ಗ್ರೂಪ್ ಡೇಟಾವನ್ನು ತಕ್ಷಣ ಕಲೆಹಾಕಿದ್ದಾರೆ. ಗ್ರೂಪ್ ನ ಅಡ್ಮೀನ್ ಗಳ ಬಗ್ಗೆಯೂ ಮಾಹಿತಿ ಪಡೆದುಕೊಂಡಿದ್ದಾರೆ ಎಂದು ಅವರು ತಿಳಿಸಿದ್ದಾರೆ. ಜೊತೆಗೆ ಈ ಘಟನೆಯಿಂದ ನಾನು ಮಾನಸಿಕವಾಗಿ ಕುಗ್ಗಿ ಹೋಗಿದ್ದೇನೆ ಎಂದು ಅವರು ನೋವು ತೋಡಿಕೊಂಡಿದ್ದಾರೆ.

ಇತ್ತೀಚಿನ ಸುದ್ದಿ