ಏಳನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ 70ರ ಅಜ್ಜಿ | ಕಾರಣ ಕೇಳಿದರೆ ನಿಮ್ಮ ಕಣ್ಣು ಒದ್ದೆಯಾಗಬಹುದು
05/06/2021
ಉಡುಪಿ: ವೃದ್ಧೆಯೊಬ್ಬರು ತಾವು ವಾಸಿಸುತ್ತಿದ್ದ ಕಟ್ಟಡದ ಏಳನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ನಡೆದಿದ್ದು, ಪತಿ ಅನಾರೋಗ್ಯದಿಂದ ನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಹೇಳಲಾಗಿದೆ.
ಚಿತ್ರದುರ್ಗ ಮೂಲದ 70 ವರ್ಷ ವಯಸ್ಸಿನ ಗಂಗಮ್ಮನವರು ಆತ್ಮಹತ್ಯೆಗೆ ಶರಣಾದವರಾಗಿದ್ದು, ನಗರದ ಬಿಗ್ ಬಜಾರ್ ಸಮೀಪದ ಮಗನ ಮನೆಯಲ್ಲಿ ಕಳೆದ ಕೆಲವು ತಿಂಗಳುಗಳಿಂದ ವಾಸವಿದ್ದರು ಎಂದು ತಿಳಿದು ಬಂದಿದೆ.
ಕೆಲವು ದಿನಗಳ ಹಿಂದೆಯಷ್ಟೇ ಅವರು ಕೊರೊನಾ ಸೋಂಕಿಗೆ ಬಲಿಯಾಗಿದ್ದರು. ಆದರೆ ಆ ಬಳಿಕ ಅವರು ಗುಣಮುಖರಾಗಿದ್ದರು. ಇವರ ಪತಿಗೆ ಕೊವಿಡ್ ಪಾಸಿಟಿವ್ ಇದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎಂದು ತಿಳಿದು ಬಂದಿದೆ.
ಪತಿಯ ಅನಾರೋಗ್ಯದ ಹಿನ್ನೆಲೆಯಲ್ಲಿ ಅವರು ನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಇದೆ ಎಂದು ಸದ್ಯ ಹೇಳಲಾಗಿದೆ. ಈ ಬಗ್ಗೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.