ಗಾಂಧೀಜಿಯ ಮರಿಮೊಮ್ಮಗಳಿಗೆ 7 ವರ್ಷ ಜೈಲು ಶಿಕ್ಷೆ! - Mahanayaka
11:47 PM Wednesday 11 - December 2024

ಗಾಂಧೀಜಿಯ ಮರಿಮೊಮ್ಮಗಳಿಗೆ 7 ವರ್ಷ ಜೈಲು ಶಿಕ್ಷೆ!

jail
08/06/2021

ಜೊಹಾನ್ಸ್ ಬರ್ಗ್: ಹಣಕಾಸು ವಂಚನೆ ಹಾಗೂ ದಾಖಲೆ ಸೃಷ್ಟಿ ಆರೋಪದಲ್ಲಿ ಮಹಾತ್ಮ ಗಾಂಧೀಜಿ ಅವರ ಮರಿಮೊಮ್ಮಗಳಿಗೆ ದಕ್ಷಿಣ ಆಫ್ರಿಕಾದ ಡರ್ಬನ್ ನ್ಯಾಯಾಲಯ 7 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.

ಗಾಂಧಿ ಮರಿ ಮೊಮ್ಮಗಳು 56 ವರ್ಷ ವಯಸ್ಸಿನ ಆಶಿಶ್ ಲತಾ ರಾಮ್‌ ಗೋಬಿನ್ ಈ ಶಿಕ್ಷೆಗೆ ಗುರಿಯಾದವರಾಗಿದ್ದಾರೆ.  ಭಾರತದಿಂದ ದಕ್ಷಿಣ ಆಫ್ರಿಕಾಕ್ಕೆ ತಾವು ಆಮದು ಮಾಡಿಕೊಳ್ಳುತ್ತಿದ್ದ ವಸ್ತುಗಳ ಕಸ್ಟಂ ಸುಂಕಕ್ಕಾಗಿ ದಕ್ಷಿಣ ಆಫ್ರಿಕಾದ ಉದ್ಯಮಿ ಎಸ್‌.ಆರ್‌ ಮಹರಾಜ್‌ ಎಂಬುವವರ ಬಳಿ ಲತಾ 6.2 ದಶಲಕ್ಷ ರಾಂಡ್‌ ಪಡೆದಿದ್ದರು. ತಾವು ಗಳಿಸಿದ ಆದಾಯದಲ್ಲಿ ಪಾಲು ನೀಡುವುದಾಗಿ ಹೇಳಿದ್ದ ಲತಾ ನಂತರದಲ್ಲಿ ಉದ್ಯಮಿಗೆ ವಂಚಿಸಿದ್ದ ಆರೋಪ ಎದುರಿಸುತ್ತಿದ್ದರು.

 ಹೋರಾಟಗಾರ್ತಿ ಎಲಾ ಗಾಂಧಿ ಮತ್ತು ದಿವಂಗತ ಮೇವಾ ರಾಮ್‌ಗೋಬಿನ್‌ ಅವರ ಪುತ್ರಿ ಲತಾ ರಾಮ್‌ಗೋಬಿನ್‌. ಪ್ರಕರಣದಲ್ಲಿ ಲತಾ ಅವರಿಗೆ ಶಿಕ್ಷೆ ವಿಧಿಸಿರುವ ಡರ್ಬನ್‌ ವಾಣಿಜ್ಯ ವ್ಯಾಜ್ಯಗಳ ವಿಶೇಷ ನ್ಯಾಯಾಲಯ, ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಲು ಕಾಲಾವಕಾಶವನ್ನೂ ನಿರಾಕರಿಸಿದೆ. 2015ರಿಂದಲೂ ಈ ಪ್ರಕರಣ ವಿಚಾರಣೆ ನಡೆಸುತ್ತಿದ್ದು, ಇದೀಗ ಅಂತಿಮ ತೀರ್ಪು ಪ್ರಕಟಿಸಿದೆ.

ಇತ್ತೀಚಿನ ಸುದ್ದಿ