ಉಡುಪಿ ಜಿಲ್ಲೆಯಲ್ಲಿ ಲಾಕ್ ಡೌನ್ ಸಡಿಲಿಕೆ | ಯಾವುದಕ್ಕೆಲ್ಲ ಅವಕಾಶ ನೀಡಲಾಗಿದೆ?
![unlock](https://www.mahanayaka.in/wp-content/uploads/2021/06/unlock.jpg)
13/06/2021
ಉಡುಪಿ: ಉಡುಪಿ ಜಿಲ್ಲೆಯಲ್ಲಿ ಸೋಮವಾರದಿಂದ ಲಾಕ್ ಡೌನ್ ಸಡಿಲಿಕೆ ಮಾಡಲಾಗಿದ್ದು, ದಿನಸಿ ವಸ್ತುಗಳು, ಆಹಾರ ಪದಾರ್ಥ, ಮೀನು ಮಾಂಸ, ಅಂಗಡಿಗಳು ಬೆಳಗ್ಗೆ 6ರಿಂದ ಮಧ್ಯಾಹ್ನ 2 ಗಂಟೆಯವರೆಗೂ ತೆರೆಯಲು ಅವಕಾಶ ನೀಡಲಾಗಿದೆ. ಉಳಿದ ಯಾವುದೇ ಅಂಗಡಿಗಳಿಗೆ ಅವಕಾಶವಿಲ್ಲ ಎಂದು ಜಿಲ್ಲಾಡಳಿತ ತಿಳಿಸಿದೆ ಎಂದು ವರದಿಯಾಗಿದೆ.
ರಿಕ್ಷಾ ಹಾಗೂ ಟಾಕ್ಸಿಯಲ್ಲಿ ಇಬ್ಬರಿಗೆ ಪ್ರಯಾಣಕ್ಕೆ ಅವಕಾಶ ನೀಡಲಾಗಿದೆ. ವಾಕಿಂಗ್, ಜಾಗಿಂಗ್ ಗಳಿಗೆ ಅವಕಾಶವಿದೆ. ಬೆಳಗ್ಗೆ 5ರಿಂದ 10 ಗಂಟೆಯವರೆಗೆ ಪಾರ್ಕ್ ಗಳನ್ನು ತೆರೆಯಲು ಹಾಗೂ ಕೃಷಿ, ಬೀದಿ ಬದಿ ವ್ಯಾಪಾರಕ್ಕೆ ಅವಕಾಶ ನೀಡಲಾಗಿದೆ.
ಇನ್ನೂ ಸಾಮಾಜಿಕಮ ರಾಜಕೀಯ, ಸಭೆ ಸಮಾರಂಭಗಳಿಗೆ ಅನುಮತಿ ಇಲ್ಲ. ನಿಯಮ ಮೀರಿ ಕಾರ್ಯಕ್ರಮವನ್ನು ಆಯೋಜಿಸಿದರೆ, ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಡಳಿತ ತಿಳಿಸಿದೆ.
ಪಾನಿಪೂರಿ,ಫಾಸ್ಟ್ ಫುಡ್ ಅಂಗಡಿಗಳಿಗೆ ಅವಕಾಶವಿಲ್ಲ, ಹೊಟೇಲ್ ಗಳಲ್ಲಿ ಪಾರ್ಸೆಲ್ ಗೆ ಅವಕಾಶ ನೀಡಲಾಗಿದೆ. ಜಿಲ್ಲೆಯಲ್ಲಿ ಜೂನ್ 21ರವರೆಗೆ ಸೆಕ್ಷನ್ 144 ಜಾರಿ ಮಾಡಲಾಗಿದೆ.