ರಾಮಮಂದಿರ ಜಮೀನು ಖರೀದಿಯಲ್ಲಿಯೂ ಭಾರೀ ಭ್ರಷ್ಟಾಚಾರ!
![ram mandir](https://www.mahanayaka.in/wp-content/uploads/2021/06/ram-mandir.jpg)
14/06/2021
ಅಯೋಧ್ಯೆ: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ ಮಾಡಿದ ಜಮೀನು ಖರೀದಿಯಲ್ಲಿ ಕೂಡ ಭಾರೀ ಭ್ರಷ್ಟಾಚಾರ ನಡೆಸಲಾಗಿದೆ ಎಂದು ಎಎಪಿ ರಾಜ್ಯಸಭಾ ಸದಸ್ಯ ಸಂಜಯ್ ಸಿಂಗ್ ಹಾಗೂ ಸಮಾಜವಾದಿ ಪಕ್ಷದ ಮುಖಂಡ ಪವನ್ ಪಾಂಡೆ ಆರೋಪಿಸಿದ್ದಾರೆ.
2 ಕೋಟಿ ಬೆಲೆ ಬಾಳುವ ಈ ಜಮೀನನ್ನು 18.5 ಕೋಟಿಗೆ ಖರೀದಿಸಲಾಗಿದೆ. ಇದು ಅಕ್ರಮ ಹಣ ವರ್ಗಾವಣೆ ಪ್ರಕರಣದಂತಿದ್ದು, ಈ ಬಗ್ಗೆ ಸಿಬಿಐ ತನಿಖೆ ನಡೆಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಇನ್ನೂ ಈ ಬಗ್ಗೆ ಮಾಧ್ಯಮಗಳು ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಅವರನ್ನು ಪ್ರಶ್ನಿಸಿದಾಗ ಈ ಆರೋಪಗಳನ್ನು ಅವರು ತಳ್ಳಿ ಹಾಕಿದ್ದಾರೆ.