“ಕೊರೊನಾದಿಂದ ಮೃತಪಟ್ಟ ಬಿಪಿಎಲ್ ಕುಟುಂಬಸ್ಥರಿಗೆ 1 ಲಕ್ಷ ಪರಿಹಾರ” - Mahanayaka
10:24 PM Thursday 12 - December 2024

“ಕೊರೊನಾದಿಂದ ಮೃತಪಟ್ಟ ಬಿಪಿಎಲ್ ಕುಟುಂಬಸ್ಥರಿಗೆ 1 ಲಕ್ಷ ಪರಿಹಾರ”

yediyurappa
14/06/2021

ಬೆಂಗಳೂರು: ಕೊರೊನಾದಿಂದಾಗಿ ದುಡಿಯುವ ವ್ಯಕ್ತಿಗಳು ಮೃತಪಟ್ಟು ಸಾಕಷ್ಟು ಕುಟುಂಬಗಳು ಅನಾಥವಾಗಿವೆ. ಇದೇ ಸಂದರ್ಭದಲ್ಲಿ ಸಿಎಂ ಯಡಿಯೂರಪ್ಪ ನೇತೃತ್ವದ ಸರ್ಕಾರವು  ಸಂಕಷ್ಟದಲ್ಲಿರುವ ಕುಟುಂಬಗಳಿಗೆ ಪರಿಹಾರ ಘೋಷಿಸಿದೆ.

ಕೊರೊನಾದಿಂದ ಬಿಪಿಎಲ್ ಕುಟುಂಬದ ವಯಸ್ಕರು ಮೃತಪಟ್ಟಿದ್ದರೆ, ಅವರ ಕುಟುಂಬಕ್ಕೆ 1 ಲಕ್ಷ ರೂಪಾಯಿ ಪರಿಗಾರ ನೀಡಲಾಗುವುದು ಎಂದು ಅವರು ತಿಳಿಸಿದ್ದು, ಈ ಬಗ್ಗೆ ಪ್ರಕಟಣೆ ಹೊರಡಿಸಿದ್ದಾರೆ.

ಕೋವಿಡ್-19 ಸೋಂಕಿನಿಂದ ದುಡಿಯುವ ವ್ಯಕ್ತಿಗಳು ಮೃತಪಟ್ಟು ಅನೇಕ ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿದೆ. ಇದನ್ನು ಮನಗಂಡು, ಬಿಪಿಎಲ್ ಕುಟುಂಬಗಳಲ್ಲಿ ಕೋವಿಡ್ ಸೋಂಕಿನಿಂದ ವಯಸ್ಕರು ಮೃತಪಟ್ಟಲ್ಲಿ, ಆ ಕುಟುಂಬಕ್ಕೆ 1 ಲಕ್ಷ ರೂ. ಪರಿಹಾರ ನೀಡಲು ತೀರ್ಮಾನಿಸಲಾಗಿದೆ. ಕುಟುಂಬಕ್ಕೆ ಒಬ್ಬ ವ್ಯಕ್ತಿಯ ಮರಣಕ್ಕೆ ಪರಿಹಾರ ವಿತರಿಸಲಾಗುವುದು ಎಂದು ಯಡಿಯೂರಪ್ಪ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ