ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಶಾಕ್: ಪರೀಕ್ಷೆ ಇಲ್ಲದೇ ಪಾಸ್ ಆದೇಶಕ್ಕೆ ತಡೆ - Mahanayaka
6:05 AM Thursday 12 - December 2024

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಶಾಕ್: ಪರೀಕ್ಷೆ ಇಲ್ಲದೇ ಪಾಸ್ ಆದೇಶಕ್ಕೆ ತಡೆ

high court karnataka
15/06/2021

ಬೆಂಗಳೂರು: ಕೊವಿಡ್ ಹಿನ್ನೆಲೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ರದ್ದು ಮಾಡಿ, ಪರೀಕ್ಷೆ ಇಲ್ಲದೇ ಪಾಸ್ ಮಾಡಿ ರಾಜ್ಯ ಸರ್ಕಾರ ಆದೇಶ ನೀಡಿತ್ತು. ಆದರೆ ಈ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದೆ.

ಸಾಮಾನ್ಯ ವಿದ್ಯಾರ್ಥಿಗಳಿಗೂ ಹಾಗೂ ರಿಪೀಟರ್ಸ್ ಗಳಿಗೂ ತಾರತಮ್ಯವೆಸಗಲಾಗುತ್ತಿದೆ. ರಿಪೀಟರ್ಸ್ ಗೂ ಪರೀಕ್ಷೆ ಇಲ್ಲದೇ ಪಾಸ್ ಮಾಡುವಂತೆ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ದ್ವಿತೀಯ ಪಿಯು ವಿದ್ಯಾರ್ಥಿಗಳ ಫಲಿತಾಂಶಕ್ಕೆ ತಾತ್ಕಾಲಿಕ ತಡೆ ನೀಡಿದೆ.

ರೆಗ್ಯೂಲರ್ ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೇ ಪಾಸ್ ಮಾಡಿ, ರಿಪೀಟರ್ಸ್ ಗೆ ಮಾತ್ರ ಪರೀಕ್ಷೆ ನಡೆಸುತ್ತಿರುವುದು ಸರಿಯಲ್ಲ. ಪಾಸ್ ಮಾಡುವುದಾದರೆ ಎಲ್ಲ ವಿದ್ಯಾರ್ಥಿಗಳನ್ನೂ ಪಾಸ್ ಮಾಡಬೇಕು. ತಾರತಮ್ಯ ಮಾಡುತ್ತಿರುವ ಉದ್ದೇಶವೇನು ಎಂಬ ಬಗ್ಗೆ ಎಜಿಗೆ ಮಾಹಿತಿ ನೀಡಿ, ಗುರುವಾರದೊಳಗೆ ನ್ಯಾಯಾಲಯಕ್ಕೆ ವಿವರಿಸುವಂತೆ ಕೋರ್ಟ್ ಆದೇಶ ನೀಡಿದೆ ಎಂದು ವರದಿಯಾಗಿದೆ.

ಇತ್ತೀಚಿನ ಸುದ್ದಿ