100 ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಕೇಸ್ ದಾಖಲು | ಕಾರಣ ಏನು ಗೊತ್ತಾ?
17/06/2021
ತಿರುವನಂತಪುರಂ: ಕೊರೊನಾ 2ನೇ ಅಲೆ ತಡೆಯಲು ಕೇರಳ ಸರ್ಕಾರ ಲಾಕ್ ಡೌನ್ ಮಾಡಿದೆ. ಇದೇ ಸಂದರ್ಭದಲ್ಲಿ ಕೇರಳ ಕಾಂಗ್ರೆಸ್ ತೀವ್ರ ನಿರ್ಲಕ್ಷ್ಯವಹಿಸಿ, ಮಾರ್ಗಸೂಚಿ ನಿಯಮಗಳನ್ನು ಗಾಳಿಗೆ ತೂರಿ ಜನಸೇರಿಸಿ ಸಮಾವೇಶ ನಡೆಸಿದ್ದು, ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ 100 ಕಾರ್ಯಕರ್ತರ ಮೇಲೆ ಕೇಸ್ ದಾಖಲಾಗಿದೆ.
ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ) ಅಧ್ಯಕ್ಷರಾಗಿ ಕೆ.ಸುಧಾಕರ್ ಅವರನ್ನು ನೇಮಕಮಾಡಲಾಗಿದ್ದು, ಈ ಹಿನ್ನೆಲೆಯಲ್ಲಿ ಪಕ್ಷ ನಡೆಸಿದ ಸಮಾರಂಭದಲ್ಲಿ 100ಕ್ಕೂ ಅಧಿಕ ಕಾರ್ಯಕರ್ತರು ಪಾಲ್ಗೊಂಡಿದ್ದರು.
ಸಭೆಯಲ್ಲಿ ಮಾಸ್ಕ್ ಧರಿಸದೇ, ದೈಹಿಕ ಅಂತರ ಕಾಪಾಡದೆ ಕೊರೊನಾ ನಿಯಮಗಳನ್ನು ಉಲ್ಲಂಘನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದ್ದು, ಈ ಸಂಬಂಧ ಸಾಂಕ್ರಾಮಿಕ ರೋಗ ಹರಡುವಿಕೆಯ ವಿರುದ್ಧದ ಪ್ರಕರಣಗಳನ್ನು ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಪಿಣರಾಯಿ ವಿಜಯನ್ ನೇತೃತ್ವದ ಸರ್ಕಾರ ಜಡಿದಿದೆ.