ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರಾ ರಮೇಶ್ ಜಾರಕಿಹೊಳಿ?
25/06/2021
ಬೆಳಗಾವಿ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎನ್ನುವ ವಿಚಾರ ಇದೀಗ ಚರ್ಚೆಯಾಗುತ್ತಿದೆ. ಈ ನಡುವೆ ಇಂದು ರಮೇಶ್ ಜಾರಕಿಹೊಳಿ ಇಂದು ಸುತ್ತೂರು ಶಾಖಾ ಮಠಕ್ಕೆ ತೆರಳಿದ್ದಾರೆ.
ಮಠಕ್ಕೆ ಭೇಟಿಯ ಸಂದರ್ಭದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಲು ನಿರಾಕರಿಸಿದ ರಮೇಶ್ ಜಾರಕಿಹೊಳಿ, ವಾಪಸ್ ಬಂದು ಎಲ್ಲವನ್ನೂ ಮಾತನಾಡುತ್ತೇನೆ ಎಂದು ಹೇಳಿದರು.
ಇನ್ನೂ ಜೊತೆಗಿದ್ದ ಸಹೋದರ ಲಖನ್, ಇಂದು ಶ್ರೀಗಳನ್ನು ಭೇಟಿ ಮಾಡುತ್ತೇವೆ ಎಂದು ಹೇಳಿದರು. ಇನ್ನೂ ರಮೇಶ್ ಜಾರಕಿಹೊಳಿ ರಾಜೀನಾಮೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ನೋಡೋಣ ಈ ಬಗ್ಗೆ ಹೇಳ್ತೀವಿ, ಇದರ ಬಗ್ಗೆ ರಮೇಶ್ ಜಾರಕಿಹೊಳಿ ಅವರೇ ಮಾತನಾಡುತ್ತಾರೆ ಎಂದು ಅವರು ಹೇಳಿದರು.