ದ.ಕ.ಜಿಲ್ಲೆಯಲ್ಲಿ ಬೆಳಗ್ಗೆ 7ರಿಂದ ಸಂಜೆ 5 ಗಂಟೆವರೆಗೆ ಲಾಕ್ ಡೌನ್ ಸಡಿಲಿಕೆ ಸಾಧ್ಯತೆ!
30/06/2021
ಬೆಳ್ತಂಗಡಿ: ಕೊರೊನಾ ಹಿನ್ನೆಲೆಯಲ್ಲಿ ಜಾರಿಯಲ್ಲಿರುವ ಲಾಕ್ ಡೌನ್ ಹಂತಹಂತವಾಗಿ ಅನ್ ಲಾಕ್ ಆಗುತ್ತಿದೆ. ಇದೇ ಸಂದರ್ಭದಲ್ಲಿ ಜುಲೈ 1ರಂದು ಲಾಕ್ ಡೌನ್ ಸಡಿಲಿಕೆಯ ಇನ್ನೊಂದು ಆದೇಶ ಬರುವ ಸಾಧ್ಯತೆ ಇದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ತಿಳಿಸಿದ್ದಾರೆ.
ಕೊಕ್ಕಡ ಸಮುದಾಯ ಆರೋಗ್ಯ ಕೇಂದ್ರದ ಉದ್ಘಾಟನೆಯ ಬಳಿಕ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಇಳಿಕೆಯಾಗುತ್ತಿದ್ದು, ಜಿಲ್ಲೆಯಲ್ಲೀಗ ಕೊರೊನಾ ಪಾಸಿಟಿವಿಟಿ ದರ ಐದಕ್ಕಿಂತ ಕಡಿಮೆ ಇದೆ. ಈ ನಿಟ್ಟಿನಲ್ಲಿ ಲಾಕ್ ಡೌನ್ ಸಡಿಲಿಕೆಗೆ ಮುಖ್ಯಮಂತ್ರಿಯವರಿಗೆ ಮನವಿ ಮಾಡಲಾಗಿದೆ ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಬೆಳಗ್ಗೆ 7ರಿಂದ ಸಂಜೆ 5 ಗಂಟೆಯವರೆಗೆ ಅಂಗಡಿಗಳನ್ನು ತೆರೆಯಲು ಹಾಗೂ ಬಸ್ ಗಳ ಸಂಚಾರಕ್ಕೆ ಅವಕಾಶ ನೀಡಿ ಲಾಕ್ ಡೌನ್ ಸಡಲಿಕೆ ಮಾಡಲಾಗುವುದು. ಇಂದು ಸಂಜೆ ಅಥವಾ ಗುರುವಾರ ಅಧಿಕೃತ ಆದೇಶ ಹೊರಬೀಳಲಿದೆ ಎಂದು ಅವರು ತಿಳಿಸಿದರು ಎಂದು ವರದಿಯಾಗಿದೆ.