ನಟ ಜಗ್ಗೇಶ್ ಪುತ್ರ ಯತಿರಾಜ್ ಕಾರು ಅಪಘಾತ - Mahanayaka
1:05 PM Thursday 12 - December 2024

ನಟ ಜಗ್ಗೇಶ್ ಪುತ್ರ ಯತಿರಾಜ್ ಕಾರು ಅಪಘಾತ

jaggesh son car
01/07/2021

ಬೆಂಗಳೂರು: ಕನ್ನಡದ ಹಿರಿಯ ನಟ ಜಗ್ಗೇಶ್ ಅವರ ಪುತ್ರ ಗುರುರಾಜ್ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತವಾಗಿದ್ದು, ಅಪಘಾತದ ತೀವ್ರತೆಗೆ ಕಾರು ನಜ್ಜುಗುಜ್ಜಾಗಿದೆ ಎಂದು ತಿಳಿದು ಬಂದಿದೆ.  ಕಾರಿನಲ್ಲಿ ಜಗ್ಗೇಶ್ ಪುತ್ರ ಪ್ರಯಾಣಿಸುತ್ತಿದ್ದರು ಎಂದು ಹೇಳಲಾಗಿದೆ.

ಬೆಂಗಳೂರು-ಹೈದರಾಬಾದ್ ಹೈವೇಯಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ.  ಇಂದು ಮಧ್ಯಾಹ್ನ 12 ಗಂಟೆಯ ಸುಮಾರಿಗೆ ಈ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದೆ. ಚಿಕ್ಕಬಳ್ಳಾಪುರ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಪ್ರಾಥಮಿಕ ಮಾಹಿತಿಯ ಪ್ರಕಾರ ಕಾರು ಮರಕ್ಕೆ ಡಿಕ್ಕಿ ಹೊಡೆದಿದೆ ಎಂದು ಹೇಳಲಾಗಿದೆ. ಇನ್ನೂ ಕಾರಿನ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.  ಇನ್ನೂ ಕಾರಿನಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ ಎಂದು ಹೇಳಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿಗಳಿಗಾಗಿ ನಿರೀಕ್ಷಿಸಲಾಗುತ್ತಿದೆ.

ಇತ್ತೀಚಿನ ಸುದ್ದಿ