ಆನ್ ಲೈನ್ ಶಿಕ್ಷಣದ ನಡುವೆ ಅಶ್ಲೀಲ ವಿಡಿಯೋ ವೀಕ್ಷಣೆ ಹೆಚ್ಚಳ: ಸೈಬರ್ ಅಪರಾಧ ವಿಭಾಗದಿಂದ ಹದ್ದಿನ ಕಣ್ಣು - Mahanayaka
1:17 AM Wednesday 11 - December 2024

ಆನ್ ಲೈನ್ ಶಿಕ್ಷಣದ ನಡುವೆ ಅಶ್ಲೀಲ ವಿಡಿಯೋ ವೀಕ್ಷಣೆ ಹೆಚ್ಚಳ: ಸೈಬರ್ ಅಪರಾಧ ವಿಭಾಗದಿಂದ ಹದ್ದಿನ ಕಣ್ಣು

online class
02/07/2021

ಬೆಂಗಳೂರು: ಕೊರೊನಾ ಲಾಕ್ ಡೌನ್ ಸಂದರ್ಭದಲ್ಲಿ ಆನ್ ಲೈನ್  ಶಿಕ್ಷಣಕ್ಕಾಗಿ ಪೋಷಕರು ತಮ್ಮ ಮಕ್ಕಳಿಗೆ ಸ್ಮಾರ್ಟ್ ಫೋನ್  ನೀಡಿದ್ದು, ಇದೇ ಸಂದರ್ಭದಲ್ಲಿ ಲಾಕ್ ಡೌನ್ ಅವಧಿಯಲ್ಲಿ ಅಶ್ಲೀಲ ವಿಡಿಯೋ ವೀಕ್ಷಣೆಯ ಸಂಖ್ಯೆ ಹೆಚ್ಚಳವಾಗಿದೆ ಎಂದು ವರದಿಯಾಗಿದ್ದು, ಈ ಬಗ್ಗೆ ಸಿಐಡಿ ಸೈಬರ್ ಅಪರಾಧ ವಿಭಾಗದ ಅಧಿಕಾರಿಗಳು ಕಟ್ಟೆಚ್ಚರ ವಹಿಸಿದ್ದಾರೆ.

ಲಾಕ್ ಡೌನ್ ಅವಧಿಯಲ್ಲಿ ಮಕ್ಕಳೇ ಹೆಚ್ಚಿನ ಸಂಖ್ಯೆಯಲ್ಲಿ ಅಶ್ಲೀಲ ವಿಡಿಯೋ  ನೋಡುತ್ತಿದ್ದಾರೆ ಎನ್ನುವ ಶಂಕೆ ಉಂಟಾಗಿದ್ದು, ಈ ಸಂಬಂಧ ರಾಜ್ಯಾದ್ಯಂತ 200ಕ್ಕೂ ಅಧಿಕ ಜನರನ್ನು ವಿಚಾರಣೆ ನಡೆಸಲು ಪೊಲೀಸರು ಮುಂದಾಗಿದ್ದಾರೆ ಎಂದು ಹೇಳಲಾಗಿದೆ. ಈ ಪೈಕಿ ಬೆಂಗಳೂರಿನಲ್ಲಿ 60ಕ್ಕೂ ಅಧಿಕ ಜನರನ್ನು ವಿಚಾರಣೆ ನಡೆಸಿದ್ದಾರೆ.

ಯಾವ ನಂಬರ್ ನಿಂದ ಅಶ್ಲೀಲ ವಿಡಿಯೋ ವೀಕ್ಷಣೆ ಮಾಡುತ್ತಿದ್ದಾರೆ. ಆ ಮೊಬೈಲ್ ಮಾಲಿಕರ ಬಂಧನವಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ.  18 ವರ್ಷದೊಳಗಿನ ಮಕ್ಕಳು ಮೊಬೈಲ್ ನಲ್ಲಿ ಅಶ್ಲೀಲ ವಿಡಿಯೋ ವೀಕ್ಷಣೆ ಮಾಡಿದರೆ, ಪೋಷಕರಿಗೆ ಸಂಕಷ್ಟ ಉಂಟಾಗುವ ಸಾಧ್ಯತೆಗಳಿಗೆ ಎಂದು ವರದಿಯಾಗಿದೆ.

ಇತ್ತೀಚಿನ ಸುದ್ದಿ