ಒಂಟಿ ಮಹಿಳೆಯನ್ನು ಹಿಂಬಾಲಿಸಿದ ವ್ಯಕ್ತಿಗೆ ಗಂಡ-ಹೆಂಡತಿಯಿಂದ ರಸ್ತೆಯಲ್ಲಿಯೇ ಹಲ್ಲೆ
04/07/2021
ಬೆಳಗಾವಿ: ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಮಹಿಳೆಯನ್ನು ಹಿಂಬಾಲಿಸಿದ ವ್ಯಕ್ತಿಗೆ ಪತಿ-ಪತ್ನಿ ಸೇರಿ ಧರ್ಮದೇಟು ನೀಡಿರುವ ಘಟನೆ ನಗರದ ಎಸ್ ಪಿ ಕಚೇರಿ ಬಳಿಯಲ್ಲಿ ನಡೆದಿದೆ.
ಬೆಳಗಾವಿ ಮಾರ್ಕೆಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಗೋಪಾಲ ಗುರನ್ನವರ ಎಂಬಾತ ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡಿ ಬರುತ್ತಿದ್ದ ಮಹಿಳೆಯನ್ನು ಹಿಂಬಾಲಿಸಿಕೊಂಡು ಬಂದಿದ್ದಾನೆ ಎಂದು ಆರೋಪಿಸಲಾಗಿದೆ.
ಆರೋಪಿ ಮಹಿಳೆಯನ್ನು ಹಿಂಬಾಲಿಸಿಕೊಂಡು ಬರುತ್ತಿದ್ದ ವೇಳೆ ಮಹಿಳೆಯ ಪತಿ ಹಾಗೂ ಸಾರ್ವಜನಿಕ ಸ್ಥಳದಲ್ಲಿಯೇ ವ್ಯಕ್ತಿಯನ್ನು ಥಳಿಸಿದ್ದಾರೆ ಎಂದು ವರದಿಯಾಗಿದೆ.