ಶೋಭಾ ಕರಂದ್ಲಾಜೆಗೆ ಸಚಿವ ಸ್ಥಾನ ಖಚಿತ? | ಮೋದಿ ಸಂಪುಟಕ್ಕೆ ಈ ನಾಲ್ವರು ಸಂಸದರ ಸೇರ್ಪಡೆ ಸಾಧ್ಯತೆ - Mahanayaka

ಶೋಭಾ ಕರಂದ್ಲಾಜೆಗೆ ಸಚಿವ ಸ್ಥಾನ ಖಚಿತ? | ಮೋದಿ ಸಂಪುಟಕ್ಕೆ ಈ ನಾಲ್ವರು ಸಂಸದರ ಸೇರ್ಪಡೆ ಸಾಧ್ಯತೆ

shobha karandlaje
07/07/2021

ನವದೆಹಲಿ: ಇಂದು ಕೇಂದ್ರ ಸಚಿವ ಸಂಪುಟ ವಿಸ್ತರಣೆಯಾಗುತ್ತಿದೆ. ಪ್ರಧಾನಿ ಮೋದಿ ಸಂಪಟಕ್ಕೆ ಕರ್ನಾಟಕದಿಂದ ಯಾರು ಸೇರ್ಪಡೆಗೊಳ್ಳಲಿದ್ದಾರೆ ಎನ್ನುವ ವಿಚಾರಗಳಿ ಚರ್ಚೆಯಾಗುತ್ತಿದೆ. ಈ ಪೈಕಿ ಓರ್ವರಿಗೆ ಸಚಿವ ಸ್ಥಾನ ಖಚಿತ ಎಂದೂ ಹೇಳಲಾಗುತ್ತಿದೆ.

ಸದ್ಯ ರಾಜ್ಯದಲ್ಲಿ ರಾಜ್ಯದ ನಾಲ್ವರು ಸಂಸದರ ಹೆಸರುಗಳು ಮುಖ್ಯವಾಗಿ ಕೇಳಿ ಬಂದಿದೆ. ಉಡುಪಿ ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ, ಚಿತ್ರದುರ್ಗಾ ಸಂಸದ ನಾರಾಯಣಸ್ವಾಮಿ, ಬೀದರ್ ಸಂಸದ ಭಗವಂತ ಖೂಬಾ, ರಾಜ್ಯಸಭಾ ಸಂಸದ ರಾಜೀವ್ ಚಂದ್ರಶೇಖರ್ ಅವರು ಕೇಂದ್ರ ಸಚಿವರಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಈ ಸಂಭಾವ್ಯ ನಾಲ್ವರ ಪಟ್ಟಿಯ ಪೈಕಿ  ಶೋಭಾ ಕರಂದ್ಲಾಜೆ ಅವರಿಗೆ ಸಚಿವ ಸ್ಥಾನ ಖಚಿತವಾಗಿದೆ ಎನ್ನುವ ಮಾತುಗಳು ಸದ್ಯ ಕೇಳಿ ಬಂದಿದೆ. ಇಂದು ಸಂಜೆ 6 ಗಂಟೆಗೆ ನೂತನ ಸಚಿವರ ಪಟ್ಟಿ ಬಿಡುಗಡೆಯಾಗಲಿದೆ.

ಹಿಂದಿನ ಸಚಿವರ ಮೌಲ್ಯಮಾಪನ ನಡೆಸಿದ ಬಳಿಕ, ಅವರನ್ನು ಸಚಿವ ಸಂಪುಟದಲ್ಲಿ ಇಟ್ಟುಕೊಳ್ಳಬೇಕೋ, ಬೇಡವೋ ಎಂಬ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ. ಇನ್ನೂ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಅವರು ಇಂದು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅವರು ಮತ್ತೆ ಸಚಿವ ಸಂಪುಟದಲ್ಲಿ ಮುಂದುವರಿಯುತ್ತಾರೆಯೇ ಎನ್ನುವುದು ತಿಳಿದು ಬಂದಿಲ್ಲ. ಈ ಎಲ್ಲಾ ಕುತೂಹಲಕ್ಕೂ ಇಂದು ಸಂಜೆ ತೆರೆ ಬೀಳಲಿದೆ.

ಇತ್ತೀಚಿನ ಸುದ್ದಿ