“ಸೈಕಲ್ ತುಳಿಯುವುದು ಉತ್ತಮ” ಎಂದ ಸನ್ನಿಲಿಯೋನ್
08/07/2021
ಮುಂಬೈ: ಬಾಲಿವುಡ್ ನಟಿ ಸನ್ನಿಲಿಯೋನ್ ಅವರು ಪೆಟ್ರೋಲ್ ಬೆಲೆ ಏರಿಕೆ ವಿರುದ್ಧ ವಿನೂತನವಾಗಿ ಧ್ವನಿಯೆತ್ತಿದ್ದು, ಎರಡು ಹೊಸ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುವ ಮೂಲಕ ಪೆಟ್ರೋಲ್ ಬೆಲೆ ಏರಿಕೆಯನ್ನು ಪ್ರಸ್ತಾಪಿಸಿ ನಯವಾಗಿ ವಿರೋಧ ವ್ಯಕ್ತಪಡಿಸಿದ್ದಾರೆ.
ದೇಶದಲ್ಲಿ ಇಂಧನ ಬೆಲೆ ನೂರರ ಗಡಿದಾಟಿದಾಗ ನಾವು ನಮ್ಮ ಆರೋಗ್ಯದ ಬಗ್ಗೆ ಗಮನ ಕೊಡಬೇಕು. ಅದಕ್ಕಾಗಿ ಸೈಕಲ್ ತುಳಿಯುವುದು ಉತ್ತಮ ಎಂದು ಹೇಳಿದ್ದಾರೆ. ಈ ಪೋಸ್ಟ್ ಜೊತೆಗೆ ತಮ್ಮ ಹೊಸ ಸೈಕಲ್ ನ ಫೋಟೋವನ್ನು ಹಂಚಿಕೊಂಡಿದ್ದಾರೆ.
ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲಗಳ ಬೆಲೆ ಏರಿಕೆ ವಿರುದ್ಧ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಹಲವಾರು ಗಣ್ಯರು ಬೆಲೆ ಏರಿಕೆ ವಿರುದ್ಧ ಬಹಿರಂಗವಾಗಿ ಆಕ್ರೋಶ ಹೊರ ಹಾಕಿದ್ದಾರೆ. ಸಾಮಾಜಿಕ ಸೇವೆಯಲ್ಲಿ ಯಾವಾಗಲೂ ಮುಂಚೂಣಿಯಲ್ಲಿರುವ ಸನ್ನಿ ಲಿಯೋನ್ ಅವರು ಇದೀಗ ಪೆಟ್ರೋಲ್ ಬೆಲೆ ಏರಿಕೆ ವಿರುದ್ಧ ನಯವಾಗಿ ವಿರೋಧ ವ್ಯಕ್ತಪಡಿಸಿದ್ದಾರೆ.