ಬಿಗ್ ಬ್ರೇಕಿಂಗ್ ನ್ಯೂಸ್: ಮುಖ್ಯಮಂತ್ರಿ ಸ್ಥಾನಕ್ಕೆ ಬಿ.ಎಸ್.ಯಡಿಯೂರಪ್ಪ ರಾಜೀನಾಮೆ
ಬೆಂಗಳೂರು: ಭಾರೀ ರಾಜಕೀಯ ಚಟುವಟಿಕೆಗಳ ಬಳಿಕ ಕೊನೆಗೂ ಮುಖ್ಯಮಂತ್ರಿ ಸ್ಥಾನಕ್ಕೆ ಸಿಎಂ ಯಡಿಯೂರಪ್ಪ ರಾಜೀನಾಮೆ ನೀಡುತ್ತಿದ್ದು, ಇಂದು ರಾಜ್ಯಪಾಲರನ್ನು ಭೇಟಿಯಾಗಿ ತಮ್ಮ ರಾಜೀನಾಮೆಯನ್ನು ನೀಡುವುದಾಗಿ ಯಡಿಯೂರಪ್ಪನವರು ಹೇಳಿದರು.
ತಮ್ಮ ಸರ್ಕಾರದ 2 ವರ್ಷಗಳ ಸಾಧನೆಯ ಸಮಾವೇಶದಲ್ಲಿ ಮಾತನಾಡಿದ ಯಡಿಯೂರಪ್ಪನವರು, ತಮ್ಮ ರಾಜೀನಾಮೆಯ ವಿಚಾರವನ್ನು ತಿಳಿಸಿದ್ದು, ಈ ವೇಳೆ ತೀವ್ರವಾಗಿ ಭಾವುಕರಾದರು. ತನಗೆ 75 ವರ್ಷಗಳು ದಾಟಿದ ಬಳಿಕವೂ ಸಿಎಂ ಆಗಿ ಮುಂದುವರಿಯಲು ಅವಕಾಶ ನೀಡಿದ, ಪ್ರಧಾನಿ ನರೇಂದ್ರ ಮೋದಿಗೆ ಅವರಿಗೆ ನಾನು ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಅವರು ಹೇಳಿದರು.
ಊಟದ ಬಳಿಕ ತಾನು ರಾಜಭವನಕ್ಕೆ ತೆರಳಿ ರಾಜೀನಾಮೆಯನ್ನು ನೀಡಲಿದ್ದೇನೆ ಎಂದು ಹೇಳಿದರು. ಇನ್ನೂ ಇದೀಗ ಬಂದಿರುವ ಮಾಹಿತಿಯ ಪ್ರಕಾರ ವಿಧಾನಸೌಧದಿಂದ ರಾಜಭವನಕ್ಕೆ ಸಿಎಂ ಯಡಿಯೂರಪ್ಪನವರು ಕಾಲ್ನಡಿಗೆಯ ಮೂಲಕವೇ ತೆರಳಿ ರಾಜೀನಾಮೆಯನ್ನು ಸಲ್ಲಿಸಲಿದ್ದಾರೆ ಎಂದು ತಿಳಿದು ಬಂದಿದೆ.
ಇನ್ನಷ್ಟು ಸುದ್ದಿಗಳು…
ಫೋಟೋ ಶೇರ್ ಮಾಡಿದ ಕೆಲವೇ ನಿಮಿಷಗಳಲ್ಲಿ ಸಾವನ್ನಪ್ಪಿದ ಆಯುರ್ವೇದ ವೈದ್ಯೆ!
ಮತದಾರರ ಗುರುತಿನ ಚೀಟಿ ಕಳೆದು ಹೋದರೆ ಏನು ಮಾಡಬೇಕು?
ಆತ್ಮಹತ್ಯೆಯ ಕೊನೆಯ ಕ್ಷಣದಲ್ಲಿ ಯುವತಿಯನ್ನು ರಕ್ಷಿಸಿದ ಪೊಲೀಸ್ | ವಿಡಿಯೋ ವೈರಲ್
ಬೆಳಗ್ಗೆ ಅಕ್ಕನ ಯೋಗದ ಭಂಗಿ, ಭಾವನಿಂದ ರಾತ್ರಿಯ ಭಂಗಿ | ಶಿಲ್ಪಾ ಶೆಟ್ಟಿಯ ತಂಗಿ ವಿರುದ್ಧ ಟ್ರೋಲ್
ಬೆಟ್ಟದಿಂದ ಉರುಳಿದ ಬೃಹತ್ ಬಂಡೆಗಳು: 9 ಮಂದಿ ಸಾವು | ಭಯಾನಕ ವಿಡಿಯೋ ವೈರಲ್