ಟ್ರಕ್-ಬಸ್ ನಡುವೆ ಭೀಕರ ಅಪಘಾತ: 18 ಮಂದಿ ಸ್ಥಳದಲ್ಲಿಯೇ ಸಾವು
ಲಕ್ನೋ: ಟ್ರಕ್ ಹಾಗೂ ಬಸ್ ನ ನಡುವೆ ನಡೆದ ಭೀಕರ ಅಪಘಾತದಲ್ಲಿ 18 ಮಂದಿ ಸ್ಥಳದಲ್ಲಿಯೇ ಮೃತಪಟ್ಟು ಹಲವರು ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಲಕ್ನೋ ವಲಯದ ಬಾರಾಬಂಕಿಯ ರಾಮ್ ಸನೆಹಿ ಘಾಟ್ ಬಳಿಯಲ್ಲಿ ಕಳೆದ ತಡರಾತ್ರಿ ಸಂಭವಿಸಿದೆ.
ಘಟನೆಯಲ್ಲಿ 19 ಪ್ರಯಾಣಿಕರಿಗೆ ತೀವ್ರ ಸ್ವರೂಪದ ಗಾಯಗಳಾಗಿವೆ ಎಂದು ವರದಿಯಾಗಿದ್ದು, ಇವರನ್ನು ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಲಕ್ನೋ ವಲಯ ಎಡಿಜಿ ನಾರಾಯಣ್ ಸಬತ್ ತಿಳಿಸಿದ್ದಾರೆ.
ಇನ್ನೂ ಅಪಘಾತದಲ್ಲಿ ಮಡಿದವರ ಕುಟುಂಬಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದು, ಕುಟುಂಬಸ್ಥರಿಗೆ ಕುಟುಂಬಸ್ಥರಿಗೆ ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂಪಾಯಿ ಹಾಗೂ ಗಾಯಗೊಂಡವರಿಗೆ ತಲಾ 50 ಸಾವಿರ ರೂಪಾಯಿ ಪರಿಹಾರ ಘೋಷಿಸಿದ್ದಾರೆ.
ಇನ್ನಷ್ಟು ಸುದ್ದಿಗಳು…
ಯಡಿಯೂರಪ್ಪಗೆ ವಯಸ್ಸಾಗಿಲ್ಲ, ಮದುವೆ ಮಾಡಿಸಿದ್ರೆ ಮಕ್ಕಳಾಗ್ತವೆ | ಸಿ.ಎಂ.ಇಬ್ರಾಹಿಂ
ನಟ ವಿಜಯ್ ಗೆ ದಂಡ ಆದೇಶಕ್ಕೆ ತಡೆಯಾಜ್ಞೆ ನೀಡಿದ ಮದ್ರಾಸ್ ಹೈಕೋರ್ಟ್ | ಕಾರಣ ಏನು?
ಬಿ.ಎಲ್.ಸಂತೋಷ್ ಗೆ ಸಿಎಂ ಸ್ಥಾನ ಇಲ್ಲ? | ಸಿಎಂ ಸ್ಥಾನ ಕೈತಪ್ಪಲು ಜವಾಬ್ದಾರಿಗಳೇ ಕಾರಣವಾಗುತ್ತಾ?
ಯಡಿಯೂರಪ್ಪ ಮೇಲೆ ಮೃಧು ಧೋರಣೆ, ಕಾಂಗ್ರೆಸ್ ತೋರುತ್ತಿರುವ ನಾಟಕ | ಹೆಚ್.ಡಿ.ಕುಮಾರಸ್ವಾಮಿ
ಪತ್ನಿಯ ಜೊತೆಗೆ ದೈಹಿಕ ಸಂಬಂಧ ಹೊಂದಿದ್ದ ಯುವಕನ ಖಾಸಗಿ ಅಂಗಕ್ಕೆ ಗುಂಡು ಹಾರಿಸಿದ ಪತಿ!