ನಿರ್ಜನ ಪ್ರದೇಶದಲ್ಲಿ ಮಹಿಳೆಯ ಮೇಲೆ ಕಾರಿನಲ್ಲೇ ಅತ್ಯಾಚಾರ | ಬಾಡಿಗೆ ಮನೆ ಮಾಲಿಕನಿಂದ ಕೃತ್ಯ
ಮಂಗಳೂರು: ಮಹಿಳೆಯೋರ್ವರನ್ನು ಕಾರಿನಲ್ಲಿ ಕರೆದೊಯ್ದು ಅತ್ಯಾಚಾರ ನಡೆಸಿದ ಘಟನೆ ನಡೆದಿದ್ದು, ಅತ್ಯಾಚಾರದ ಬಳಿಕ ಆರೋಪಿಯು ತನ್ನನ್ನು ಮದುವೆಯಾಗು, ಇಲ್ಲವಾದರೆ ಕೊಲೆ ಮಾಡುತ್ತೇನೆ ಎಂದು ಬೆದರಿಕೆ ಹಾಕಿದ್ದಾನೆ ಎಂದು ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ವರದಿಯಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಈ ಘಟನೆ ನಡೆದಿದ್ದು, ಮಂಗಳೂರಿನ ಕೂಳೂರು ನಿವಾಸಿ ಪ್ರಶಾಂತ್ ಅಪ್ಪು ಎಂಬಾತ ಮಹಿಳೆಯ ಮೇಲೆ ಅತ್ಯಾಚಾರ ನಡೆಸಿದ ಆರೋಪಿಯಾಗಿದ್ದಾನೆ ಎಂದು ತಿಳಿದು ಬಂದಿದೆ. ಗಂಡನಿಂದ ವಿಚ್ಛೇದನ ಪಡೆದಿದ್ದ ಮಹಿಳೆಯೊಬ್ಬರು ತಮ್ಮ ತಂದೆ ತಾಯಿಯ ಜೊತೆಗೆ ವಾಸಿಸುತ್ತಿದ್ದರು. ಎರಡು ತಿಂಗಳ ಹಿಂದೆ ಪ್ರತ್ಯೇಕವಾಗಿ ಮನೆ ಮಾಡುವ ಉದ್ದೇಶದಿಂದ ಬಾಡಿಗೆ ಮನೆ ಹುಡುಕುತ್ತಿದ್ದರು.
ಈ ವೇಳೆ ಬೆಂಗರೆ ಕೂಳೂರು ನಿವಾಸಿ ಪ್ರಶಾಂತ್ ಅಪ್ಪು ಎಂಬಾತನಿಂದ ಅವರು ಬಾಡಿಗೆಗೆ ಮನೆಯನ್ನು ಪಡೆದುಕೊಂಡಿದ್ದರು ಎನ್ನಲಾಗಿದೆ. ತಮ್ಮ ಬಟ್ಟೆಗಳನ್ನು ಬಾಡಿಗೆ ಮನೆಯಲ್ಲಿಟ್ಟು ಬಂದಿದ್ದ ಸಂತ್ರಸ್ತೆ, ಜ್ವರದ ಹಿನ್ನೆಲೆಯಲ್ಲಿ ಮತ್ತೆ ಬಾಡಿಗೆ ಮನೆಗೆ ತೆರಳಲು ಸಾಧ್ಯವಾಗಿರಲಿಲ್ಲ ಎಂದು ಹೇಳಲಾಗಿದೆ.
ಈ ನಡುವೆ ಮಹಿಳೆಗೆ ಪ್ರಶಾಂತ್ ಎಡೆಬಿಡದೇ ಕರೆ ಮಾಡಿ ಬಟ್ಟೆಗಳನ್ನು ವಾಪಸ್ ತೆಗೆದುಕೊಂಡು ಹೋಗುವಂತೆ ತಿಳಿಸಿದ್ದಾನೆ. ಬಳಿಕ ಜೂನ್ 8ರಂದು ಕುಂಟಿಕಾನ ಎಂಬಲ್ಲಿಗೆ ಬಟ್ಟೆಯನ್ನು ತೆಗೆದುಕೊಂಡು ಬರುತ್ತೇನೆ ಎಂದು ಆರೋಪಿ ಹೇಳಿದ್ದ ಎನ್ನಲಾಗಿದೆ. ಆದರೆ, ಮಹಿಳೆ ಅಲ್ಲಿಗೆ ಹೋಗುವ ವೇಳೆ ಕಾರಿನಲ್ಲಿ ಬಂದಿದ್ದ ಆರೋಪಿ, ಬಟ್ಟೆ ತರಲು ಮರೆತು ಹೋಯಿತು, ನೀನೇ ಬಂದು ತೆಗೆದುಕೊಂಡು ಹೋಗು ಎಂದು ಕಾರು ಹತ್ತಿಸಿಕೊಂಡಿದ್ದಾನೆ ಎಂದು ಹೇಳಲಾಗಿದೆ.
ಆತನ ಮನೆಗೆ ತೆರಳುವ ದಾರಿಯಲ್ಲಿ ಒಳ ರಸ್ತೆಯಲ್ಲಿ ಕರೆದುಕೊಂಡು ಹೋದ ಆತ ಬಳಿಕ ನಿರ್ಜನ ಪ್ರದೇಶದಲ್ಲಿ ಮಹಿಳೆಯ ಮೇಲೆ ಅತ್ಯಾಚಾರ ನಡೆಸಿದ್ದಾನೆ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ. ಇದಾದ ಬಳಿಕ ತನ್ನನ್ನು ಮದುವೆಯಾಗು ಎಂದು ಒತ್ತಾಯಿಸಿದ್ದು, ಇದಕ್ಕೆ ನಿರಾಕರಿಸಿದಾಗ ಹತ್ಯೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಇನ್ನಷ್ಟು ಸುದ್ದಿಗಳು…
ಬೆಚ್ಚಿ ಬೀಳಿಸಿದ ಘಟನೆ: ಬಹಿರ್ದೆಸೆಗೆ ತೆರಳಿದ್ದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಹತ್ಯೆ!
ಫೋಟೋ ಶೇರ್ ಮಾಡಿದ ಕೆಲವೇ ನಿಮಿಷಗಳಲ್ಲಿ ಸಾವನ್ನಪ್ಪಿದ ಆಯುರ್ವೇದ ವೈದ್ಯೆ!
ಪತ್ನಿಯ ಜೊತೆಗೆ ದೈಹಿಕ ಸಂಬಂಧ ಹೊಂದಿದ್ದ ಯುವಕನ ಖಾಸಗಿ ಅಂಗಕ್ಕೆ ಗುಂಡು ಹಾರಿಸಿದ ಪತಿ!
ಹೊಳೆದಾಟಿದ ಮೇಲೆ ಅಂಬಿಗನ ಹಂಗೇಕೆ? | ಸಿಎಂಗೆ ಕನಿಷ್ಠ ಗೌರವವನ್ನೂ ಕೊಡದೆ ಹೊರಗೆ ತಳ್ಳಲಾಗಿದೆ | ಜಿ.ಪರಮೇಶ್ವರ್
ಷಡ್ಯಂತ್ರಗಳ ಬಾಣಗಳ ಹಾಸಿಗೆಯಲ್ಲಿ ಯಶಸ್ವಿಯಾಗಿ ಭೀಷ್ಮನನ್ನು ಮಲಗಿಸಿಬಿಟ್ಟಿರಿ!