ಕುರಿ, ಕೋಳಿ, ಮೀನಿನ ಬದಲು ಗೋಮಾಂಸ ಸೇವಿಸಿ ಎಂದು ಕರೆ ನೀಡಿದ ಬಿಜೆಪಿ ಸಚಿವ! - Mahanayaka
6:01 AM Thursday 12 - December 2024

ಕುರಿ, ಕೋಳಿ, ಮೀನಿನ ಬದಲು ಗೋಮಾಂಸ ಸೇವಿಸಿ ಎಂದು ಕರೆ ನೀಡಿದ ಬಿಜೆಪಿ ಸಚಿವ!

sanbor shullai
31/07/2021

ಶಿಲ್ಲಾಂಗ್: ಕುರಿ, ಕೋಳಿ ಮತ್ತು ಮೀನಿನ ಮಾಂಸಕ್ಕಿಂತಲೂ ಹೆಚ್ಚು ಗೋಮಾಂಸ ಸೇವನೆ ಮಾಡಿ ಎಂದು ಎಂದು ಬಿಜೆಪಿಯ ಹಿರಿಯ ನಾಯಕ ಮೇಘಾಲಯ ಸಚಿವ ಸಣ್ಬೂರ್ ಶುಲ್ಲೈ ಜನರಿಗೆ ಸಲಹೆ ನೀಡಿದ್ದು, ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ  ಪ್ರತಿಯೊಬ್ಬರೂ, ತಮಗೆ ಇಷ್ಟವಾದ ಆಹಾರ ಸೇವಿಸಲು ಸ್ವತಂತ್ರರು ಎಂದು ಅವರು ಹೇಳಿದ್ದಾರೆ.

ಪಶುಸಂಗೋಪನೆ ಮತ್ತು ಪಶು ವೈದ್ಯ ಖಾತೆ ಸಚಿವರಾಗಿರುವ ಸಣ್ಬೂರ್, ಮೇಘಾಲಯದಲ್ಲಿ ಬಿಜೆಪಿಯು ಗೋಮಾಂಸ ನಿಷೇಧ ಕಾನೂನನ್ನು ಜಾರಿಗೊಳಿಸುತ್ತದೆ ಎನ್ನುವ ಆತಂಕ ಇಲ್ಲ ಎನ್ನುವುದನ್ನು ತಿಳಿಸುವ ಉದ್ದೇಶದಿಂದ ಅವರು ಈ ಹೇಳಿಕೆ ನೀಡಿದ್ದಾರೆ ಎಂದು ಹೇಳಲಾಗಿದೆ.

ನೆರೆಯ ರಾಜ್ಯ ಅಸ್ಸಾಂನಲ್ಲಿ ಗೋಹತ್ಯೆ ನಿಷೇಧ ಕಾನೂನು ಜಾರಿಯಾಗಿದೆ. ಆ ಹೊಸ ಕಾನೂನಿನಿಂದ ಮೇಘಾಲಯಕ್ಕೆ ಜಾನುವಾರು ಸಾಗಣೆ ಮೇಲೆ ಯಾವುದೇ ಪರಿಣಾಮ ಬೀರದಂತೆ ನೋಡಿಕೊಳ್ಳಲು ಸಿಎಂ ಶಿಮಂತ ಬಿಸ್ವಾ ಶರ್ಮಾ ಅವರೊಂದಿಗೆ ಚರ್ಚಿಸಲಾಗುವುದು ಎಂದು ಅವರು ಇದೇ ಸಂದರ್ಭದಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ಸುದ್ದಿಗಳು…

ಬಿಜೆಪಿಗೆ ಅಧಿಕಾರ ಮಾತ್ರ ಬೇಕು, ಜನರ ಯೋಗ ಕ್ಷೇಮ ಬೇಡ | ಸತೀಶ್ ಜಾರಕಿಹೊಳಿ

ಕ್ಯಾನ್ಸರ್ ಪೀಡಿತ ಮಕ್ಕಳಿಗಾಗಿ ರಕ್ತದಾನ ಮಾಡಿದ 75 ಪೊಲೀಸರು

ಎರಡು ಮದುವೆಯಾದ ತಂದೆ, ತನ್ನ ಮಗನನ್ನೇ ಕಾಲುವೆಗೆ ತಳ್ಳಿ ಹತ್ಯೆ ಮಾಡಿದ!

ನಡು ರಸ್ತೆಯಲ್ಲಿಯೇ ತಂಗಿಗೆ ಚಾಕುವಿನಿಂದ ಇರಿದು ಕೊಂದ ಅಣ್ಣಂದಿರು!

ಕೋಳಿ ಆಹಾರ ತಯಾರಿಕಾ ಘಟಕದಲ್ಲಿ ಭಾರೀ ಸ್ಫೋಟ | ಕಾರ್ಯಾಚರಣೆಗೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿಗೂ ಗಂಭೀರ ಗಾಯ

ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದಾಗಲೇ ಬಂದಿತ್ತು ಪ್ರವಾಹ | ನೀರಲ್ಲಿ ಕೊಚ್ಚಿ ಹೋದ ಯುವಕ ಬದುಕಿದ್ದು ಹೇಗೆ?

ಇತ್ತೀಚಿನ ಸುದ್ದಿ