ಬಿಗ್ ನ್ಯೂಸ್: ರಾಜಕೀಯ ನಿವೃತ್ತಿ ಘೋಷಿಸಿದ ಸಂಸದ ಶ್ರೀನಿವಾಸ್ ಪ್ರಸಾದ್
ಮೈಸೂರು: ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಬಿಜೆಪಿ ಸಂಸದರಾಗಿರುವ ಶ್ರೀನಿವಾಸ್ ಪ್ರಸಾದ್ ಅವರ ರಾಜಕೀಯ ನಿವೃತ್ತಿಯನ್ನು ಘೋಷಿಸಿದ್ದು, ನಾನು ಚುನಾವಣಾ ರಾಜಕಾರಣದಿಂದ ನಿವೃತ್ತಿಯಾಗುತ್ತಿದ್ದೇನೆ ಎಂದು ಘೋಷಿಸಿದ್ದಾರೆ.
ನಾನು ತೃಪ್ತಿಯಿಂದ ನಿವೃತ್ತಿಯಾಗುತ್ತಿದ್ದೇನೆ. ನಾಲ್ಕು ವರ್ಷಗಳ ಹಿಂದೆಯೇ ನಾನು ನಿವೃತ್ತಿ ಬಯಸಿದ್ದೆ. ಆದರೆ ರಾಜಕೀಯ ಬೆಳವಣಿಗೆಯ ಕಾರಣ ಸ್ಪರ್ಧೆ ಮಾಡಿದ್ದೆ. ಇನ್ನು ಮುಂದೆ ನಾನು ಚುನಾವಣೆಗಳಿಗೆ ಸ್ಪರ್ಧಿಸುವುದಿಲ್ಲ ಎಂದು ಶ್ರೀನಿವಾಸ್ ಪ್ರಸಾದ್ ಮೈಸೂರಿನಲ್ಲಿ ತಿಳಿಸಿದ್ದಾರೆ ಎಂದು ವರದಿಯಾಗಿದೆ.
ಕೇಂದ್ರ ಹಾಗೂ ರಾಜ್ಯ ಸರ್ಕಾರದಲ್ಲಿ ಸಚಿವರಾಗಿ ಸೇವೆ ಸಲ್ಲಿಸಿರುವ ಹಿರಿಯ ದಲಿತ ನಾಯಕ ಶ್ರೀನಿವಾಸ್ ಪ್ರಸಾದ್ ಅವರು ಚಾಮರಾಜನಗರ ಕ್ಷೇತ್ರದಿಂದ ಬಿಜೆಪಿಯಿಂದ ಸ್ಪರ್ಧಿಸಿ ಸಂಸದರಾಗಿ ಆಯ್ಕೆಯಾಗಿದ್ದರು.
ಇನ್ನಷ್ಟು ಸುದ್ದಿಗಳು….
ಕೊನೆಗೂ ಕಮಲ ಮುಡಿದ ಕೊಳ್ಳೇಗಾಲ ಶಾಸಕ ಎನ್.ಮಹೇಶ್! | ಮಾಜಿ, ಹಾಲಿ ಸಿಎಂ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆ
ನನ್ನದು ಸ್ವಂತ ದುಡಿಮೆಯ ದುಡ್ಡು, ಹಾಗಾಗಿ ಇಡಿ ಅಧಿಕಾರಿಗಳು ವಾಪಸ್ ಹೋಗಿದ್ದಾರೆ | ಜಮೀರ್ ಅಹ್ಮದ್
“ಬಡ ಮಕ್ಕಳ ಮೊಟ್ಟೆ ತಿಂದ ಜೊಲ್ಲೆಗೆ ಝೀರೋ ಟ್ರಾಫಿಕ್ ರಾಜಮರ್ಯಾದೆ!”
ಸಿಎಂ ರೇಸ್ ನಲ್ಲಿದ್ದ ಬೆಲ್ಲದ್ ಗೆ ಸಚಿವ ಸ್ಥಾನವೂ ಸಿಗಲಿಲ್ಲ | ಶೆಟ್ಟರ್, ಬಿಎಸ್ ವೈಗೆ ಧಿಕ್ಕಾರ ಹೇಳಿದ ಬೆಂಬಲಿಗರು