ಮಹಿಳಾ ಹಾಕಿ ತಂಡಕ್ಕೆ ಪ್ರಧಾನಿಯಿಂದ ವಿಡಿಯೋ ಕಾಲ್ | ಕಣ್ಣೀರು ಹಾಕಿದ ಆಟಗಾರ್ತಿಯರು - Mahanayaka
4:00 AM Thursday 14 - November 2024

ಮಹಿಳಾ ಹಾಕಿ ತಂಡಕ್ಕೆ ಪ್ರಧಾನಿಯಿಂದ ವಿಡಿಯೋ ಕಾಲ್ | ಕಣ್ಣೀರು ಹಾಕಿದ ಆಟಗಾರ್ತಿಯರು

modi call to indian womens hockey team
06/08/2021

ಟೋಕಿಯೊ: ಒಲಿಂಪಿಕ್ಸ್ ನಲ್ಲಿ ಕಂಚಿನ ಪದಕ ಗೆಲ್ಲುವಲ್ಲಿ ವಿಫಲವಾದ ಭಾರತೀಯ ಹಾಕಿ ಮಹಿಳಾ ತಂಡದ ಆಟಗಾರ್ತಿಯರಿಗೆ ಪ್ರಧಾನಿ ನರೇಂದ್ರ ಮೋದಿ ಕರೆ ಮಾಡಿ ಅಭಿನಂದನೆ ಸಲ್ಲಿಸಿದ್ದು, ನೀವೆಲ್ಲರೂ ಅದ್ಭುತವಾಗಿ ಆಟವಾಡಿದ್ದೀರಿ ಎಂದು ಪ್ರೋತ್ಸಾಹಿಸಿದ್ದಾರೆ.

 ಮೂರನೇ ಸ್ಥಾನಕ್ಕಾಗಿ ಬ್ರಿಟನ್ ವಿರುದ್ಧ ನಡೆದ ಪಂದ್ಯದಲ್ಲಿ ಎದುರಾದ ಸೋಲಿನಿಂದ ಆಘಾತಕ್ಕೊಳಗಾಗಿರುವ ಆಟಗಾರ್ತಿಯರು ತೀವ್ರವಾಗಿ ನೊಂದಿದ್ದರು. ಪ್ರಧಾನಿ ಮೋದಿ ಕರೆ ಮಾಡಿದ ವೇಳೆ ಆಟಗಾರ್ತಿಯರು ಬಿಕ್ಕಿ ಬಿಕ್ಕಿ ಅತ್ತಿದ್ದಾರೆ. ಈ ವೇಳೆ ಪ್ರಧಾನಿ ಮೋದಿ, ನೀವು ಅಳಬಾರದು, ನಿಮ್ಮ ಸಾಧನೆಯ ಬಗ್ಗೆ ದೇಶಕ್ಕೆ ಹೆಮ್ಮೆ ಇದೆ ಎಂದು ಹೇಳುವ ಮೂಲಕ ಸಂತೈಸಿದ್ದಾರೆ.

5-6 ವರ್ಷಗಳಿಂದ ನೀವು ಪರಿಶ್ರಮಪಟ್ಟಿದ್ದೀರಿ. ಈ ಮೂಲಕ ಕೋಟ್ಯಂತರ ಹೆಣ್ಣುಮಕ್ಕಳಿಗೆ ನೀವು ಪ್ರೇರಣೆಯಾಗಿದ್ದೀರಿ.  ಇದಕ್ಕಾಗಿ ತಂಡದ ಎಲ್ಲ ಆಟಗಾರ್ತಿಯರು ಹಾಗೂ ಕೋಚ್ ಗೆ ಅಭಿನಂದನೆ ಸಲ್ಲಿಸುವುದಾಗಿ  ಪ್ರಧಾನಿ ಮೋದಿ ಇದೇ ಸಂದರ್ಭದಲ್ಲಿ ತಿಳಿಸಿದರು.




ಇನ್ನಷ್ಟು ಸುದ್ದಿಗಳು…

 

ರಾಜ್ಯಾದ್ಯಂತ ನೈಟ್ ಕರ್ಫ್ಯೂ ಜಾರಿ | ದ.ಕ.ಸೇರಿದಂತೆ 8 ಗಡಿ ಜಿಲ್ಲೆಗಳಲ್ಲಿ ವಾರಾಂತ್ಯ ಕರ್ಫ್ಯೂ

ವಿದ್ಯಾರ್ಥಿನಿ ಜೊತೆಗೆ ರಾಸಲೀಲೆ ನಡೆಸುತ್ತಿರುವಾಗಲೇ ಪತ್ನಿಯ ಕೈಗೆ ಸಿಕ್ಕಿ ಬಿದ್ದ ಪ್ರಾಧ್ಯಾಪಕ! | “ರೇಪ್ ಮಾಡ್ದ” ಎಂದಿದ್ದ ವಿದ್ಯಾರ್ಥಿನಿ ಯೂಟರ್ನ್!?

ಎಲ್ಲ ವಿದ್ಯಾರ್ಥಿಗಳು ಪಾಸ್, ಶಿಕ್ಷಣ ಸಚಿವರು ಫೇಲ್! | ರಿ ಎಕ್ಸಾಮ್ ಬರೀತಾರಾ ಸುರೇಶ್ ಕುಮಾರ್?

ತಾಯಿಯೇ ಮಗನಿಗೆ ಮೋಸ ಮಾಡಿದಾಗ ಮಗ ಅನಾಥನಾಗಿದ್ದ | ಬಿಜೆಪಿ ಸೇರ್ಪಡೆಗೆ ಎನ್.ಮಹೇಶ್ ಪ್ರತಿಕ್ರಿಯೆ

“ಕೋತಿ ತಾನು ಕೆಡುವುದಲ್ಲದೇ ವನವನ್ನೆಲ್ಲ ಕೆಡಿಸ್ತು” | ಎನ್.ಮಹೇಶ್ ಬಿಜೆಪಿ ಸೇರ್ಪಡೆಗೆ ಎಸ್ ಡಿಪಿಐ ಆಕ್ರೋಶ

ಇತ್ತೀಚಿನ ಸುದ್ದಿ