ಆರೆಸ್ಸೆಸ್, ಬಿಜೆಪಿ ಕಾರ್ಯಕರ್ತರ ಮೇಲಿನ ಪ್ರಕರಣ ವಾಪಸ್ ಪಡೆಯುತ್ತೇವೆ | ದಲಿತ ಸಿಎಂ ಮಾಡ್ತೇವೆ- ಸಚಿವ ಈಶ್ವರಪ್ಪ ಹೇಳಿಕೆ
ಬೆಳಗಾವಿ: ಬಿಜೆಪಿ ಮತ್ತು ಆರೆಸ್ಸೆಸ್ ಕಾರ್ಯಕರ್ತರ ಮೇಲೆ ಹಾಕಿರುವ ಸುಳ್ಳು ಪ್ರಕರಣಗಳನ್ನು ವಾಪಸ್ ಪಡೆದೇ ತೀರುತ್ತೇವೆ ಎಂದು ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದು, ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ನಮ್ಮವರ ಮೇಲೆ ಹಲವೆಡೆ ಸುಳ್ಳು ಪ್ರಕರಣಗಳನ್ನು ಹಾಕಲಾಗಿದೆ. ಈಗ ನಮಗೂ ಶಕ್ತಿ ಇದೆ. ವಾಪಸ್ ತಗೊತೀವಿ ಎಂದು ಹೇಳಿದರು.
ಬುಧವಾರ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಅಧಿಕಾರಕ್ಕೆ ಬಂದ್ರೆ ಮೀಸಲಾತಿ ತೆಗೆಯುತ್ತಾರೆ, ಮುಸ್ಲಿಮರನ್ನು ಪಾಕಿಸ್ತಾನಕ್ಕೆ ಓಡಿಸ್ತಾರೆ ಎಂದೆಲ್ಲಾ ಕಾಂಗ್ರೆಸ್ ನವರು ಹಬ್ಬಿಸಿದ್ದರು. ಆದರೆ ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ಎಷ್ಟು ಜನ ಮುಸ್ಲಿಮರು ಪಾಕಿಸ್ತಾನಕ್ಕೆ ಹೋದರು? ಮೀಸಲಾತಿ ಕಿತ್ತುಕೊಂಡಿದ್ದೇವೆಯೇ? ವೈದ್ಯಕೀಯ ಶಿಕ್ಷಣದಲ್ಲಿ ಇತರ ಹಿಂದುಳಿದ ವರ್ಗದವರಿಗೆ ಮೀಸಲಾತಿ ಕೊಟ್ಟಿದ್ದೇವೆ. ಹಿಂದುಳಿದ ವರ್ಗದವರು ಹಾಗೂ ಪರಿಶಿಷ್ಟರಿಗೆ ಸಚಿವ ಸಂಪುಟದಲ್ಲಿ ಆದ್ಯತೆ ಸಿಕ್ಕಿದೆ ಅಲ್ಲವೇ ಎಂದು ಕಾಂಗ್ರೆಸ್ ಗೆ ತಿರುಗೇಟು ನೀಡಿದರು.
ಬಿ.ಎಸ್. ಯಡಿಯೂರಪ್ಪ ರಾಜೀನಾಮೆ ನೀಡಿದಾಗ ದಲಿತ ಮುಖ್ಯಮಂತ್ರಿ ಮಾಡಿ ಎಂದು ಸಿದ್ದರಾಮಯ್ಯ ಹೇಳಿದರು. ಪುಕ್ಸಟ್ಟೆ ಹೇಳೋಕೇನು? ಸ್ವಾತಂತ್ರ್ಯ ಬಂದಾಗಿನಿಂದ ಆಡಳಿತ ನಡೆಸಿದ ಕಾಂಗ್ರೆಸ್ ನವರು ಎಷ್ಟು ಜನ ದಲಿತರನ್ನು ಮುಖ್ಯಮಂತ್ರಿ ಮಾಡಿದರು? ನಾವು ಈಗ ಕಣ್ಣು ಬಿಡುತ್ತಿದ್ದೇವೆ. ನಮಗೆ ಪೂರ್ಣ ಬಹುಮತವನ್ನು ಜನರು ಕೊಟ್ಟಿಲ್ಲ. ಅವರಿವರನ್ನು ತಗೊಂಡು ಸರ್ಕಾರ ರಚಿಸಿದ್ದೇವೆ. ಅವಕಾಶ ಬಂದಾಗ ದಲಿತ ಮುಖ್ಯಮಂತ್ರಿ ಮಾಡೇ ಮಾಡುತ್ತೇವೆ ಎಂದು ಈಶ್ವರಪ್ಪ ಹೇಳಿದರು.
ದಲಿತರು ಕಾಂಗ್ರೆಸ್ ನ್ನು ನಂಬಿ ಬಹಳ ವರ್ಷದಿಂದಲೂ ನಂಬಿ ಮತ ಕೊಟ್ಟರು. ಅವರೀಗ ನಿಮ್ಮಿಂದ ದೂರಾಗುತ್ತಿದ್ದಾರೆ. ಸ್ವಲ್ಪ ಮುಸ್ಲಿಮರು ಕಾಂಗ್ರೆಸ್‌ನವರನ್ನು ಅಂಟಿಕೊಂಡಿದ್ದಾರೆ. ಅವರೂ ಬಿಡುತ್ತಾರೆ. ಮುಂಚೆ ನಮ್ಮದು ಬ್ರಾಹ್ಮಣರ ಪಕ್ಷ ಎಂದು ಕರೆಯುತ್ತಿದ್ದರು. ಈಗ ಇಡೀ ಹಿಂದೂ ಸಮಾಜ ನಮ್ಮ ಜೊತೆಗಿದೆ ಎಂದು ಅವರು ಹೇಳಿದರು.
ಇನ್ನಷ್ಟು ಸುದ್ದಿಗಳು…
ನೀರಜ್ ಚೋಪ್ರಾರನ್ನು ಅನುಕರಿಸಿ ರೋಡಲ್ಲಿ ನಿಂತು ಈಟಿ ಎಸೆದ ರಾಖಿ ಸಾವಂತ್ | ಮುಂದೇನಾಯ್ತು?
ಮಾತುಬಾರದ, ಕಿವಿ ಕೇಳದ ಮಹಿಳೆಯ ಮೇಲೆ ಆಸ್ಪತ್ರೆಯಲ್ಲೇ ಅತ್ಯಾಚಾರ!
ದೇವಸ್ಥಾನದಿಂದ ಬರುತ್ತಿದ್ದ ಮಹಿಳೆಯನ್ನು ಹೊತ್ತೊಯ್ದು ಸಾಮೂಹಿಕ ಅತ್ಯಾಚಾರ!
ಕಾಂಗ್ರೆಸ್ ನವರು ಕುಡುಕ ಸೂ*** ಮಕ್ಕಳು ಎಂದು ಹೇಳಿಕೆ ನೀಡಿದ ಸಚಿವ ಈಶ್ವರಪ್ಪ
“ಮಾತಾಡಿ ಪ್ರಧಾನಿಗಳೇ ಮಾತನಾಡಿ” | ಆ.10ರಿಂದ 15ರವರೆಗೆ ಆನ್ ಲೈನ್ ಅಭಿಯಾನ
ಮೊಘಲರ ಆಳ್ವಿಕೆಯ 600 ವರ್ಷಗಳ ಕಾಲ ಪ್ರಮುಖ ಹುದ್ದೆ ಅಲಂಕರಿಸಿದ್ದವರು ಬ್ರಾಹ್ಮಣರು | ಸಿದ್ದರಾಮಯ್ಯ