ಕಾರ್ಮಿಕರಿಗೆ ಸಿಹಿ ಸುದ್ದಿ ನೀಡಿದ ಸಚಿವ ಶಿವರಾಮ್ ಹೆಬ್ಬಾರ್!
ಬೆಂಗಳೂರು: ಕಾರ್ಮಿಕರು, ಆಟೋ ಚಾಲಕರು, ಟಾಕ್ಸಿ, ಟ್ರಕ್, ಬಸ್ ಚಾಲಕರು ಸೇರಿದಂತೆ ಶ್ರಮಿಕ ವರ್ಗದವರಿಗೆ ನೂತನ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಅವರು ಸಿಹಿ ಸುದ್ದಿ ನೀಡಿದ್ದು, ಇವರಿಗಾಗಿ ಹಲವು ಉಪಯುಕ್ತ ಯೋಜನೆಗಳನ್ನು ಘೋಷಿಸಿದ್ದಾರೆ.
ಕಾರ್ಮಿಕರು, ಆಟೋ ಚಾಲಕರು, ಟಾಕ್ಸಿ, ಟ್ರಕ್, ಬಸ್ ಚಾಲಕರು ಸೇರಿದಂತೆ ಮೆಕ್ಯಾನಿಕ್, ಕ್ಲೀನರ್ ಗಳು ಅಪಘಾತದಲ್ಲಿ ಮೃತಪಟ್ಟರೆ, ಅವರ ಕುಟುಂಬದವರಿಗೆ 5 ಲಕ್ಷ ರೂ.ಗಳವರೆಗೆ ಪರಿಹಾರ ನೀಡಲು ಕಾಯ್ದೆ ರೂಪಿಸಲಾಗುವುದು ಎಂದು ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಹೇಳಿದ್ದಾರೆ.
ಈ ಬಗ್ಗೆ ಶುಕ್ರವಾರ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಮಿಕರ ಬದುಕು ಹಸನಾಗಿಸಲು ಹಲವು ಕಲ್ಯಾಣ ಯೋಜನೆಗಳನ್ನು ಅನುಷ್ಠಾನಕ್ಕೆ ತರಲಾಗುವುದು. ಕಾರ್ಮಿಕರ ಸಮಸ್ಯೆಗಳ ಪರಿಹಾರಕ್ಕೆ ಕಾರ್ಮಿಕ ಅದಾಲತ್ ನಡೆಸಲು ನಿರ್ಧರಿಸಲಾಗಿದೆ ಎಂದು ಅವರು ಹೇಳಿದರು.
ಕಾರ್ಮಿಕರಿಗೆ ಸಹಾಯ ಧನ, ಮಕ್ಕಳ ವಿದ್ಯಾಭ್ಯಾಸ, ಮದುವೆ-ಮುಂಜಿಯಂತಹ ಸಂದರ್ಭದಲ್ಲಿ ಧನ ಸಹಾಯ ನೀಡಲು ವಿಶೇಷ ಕಾರ್ಯಕ್ರಮ ರೂಪಿಸಲಾಗುವುದು. ಆಟೋ, ಟಾಕ್ಸಿ, ಟ್ರಕ್, ಬಸ್ ಚಾಲಕರು ಸೇರಿದಂತೆ ಮೆಕ್ಯಾನಿಕ್, ಕ್ಲೀನರ್ ಗಳಿಗೂ ನೆರವಾಗುವುದು ಕಾಯ್ದೆಯ ಗುರಿ ಎಂದ ಅವರು, ಈ ಬಗ್ಗೆ ಮುಂದಿನ ಸಂಪುಟ ಸಭೆಯಲ್ಲಿ ಚರ್ಚಿಸಲಾಗುವುದು ತಿಳಿಸಿದರು.
ಇನ್ನಷ್ಟು ಸುದ್ದಿಗಳು…
ಜಿಯೋ ಫೋನ್ ಸ್ಫೋಟ: ಪ್ಯಾಂಟ್ ನ ಜೇಬಿನಲ್ಲಿದ್ದಾಗಲೇ ಏಕಾಏಕಿ ಸಿಡಿದ ಮೊಬೈಲ್
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವೀಕೆಂಡ್ ಕರ್ಫ್ಯೂ ಜಾರಿ: ಇನ್ನೆರಡು ದಿನ ಏನೇನು ಇರಲಿದೆ?
ಎನ್.ಮಹೇಶ್ ಗೆ ಬಿಎಸ್ ಪಿಯಿಂದ ಅನ್ಯಾಯ ಆಗಿಲ್ಲ | ಬಿಎಸ್ ಪಿ ರಾಜ್ಯಾಧ್ಯಕ್ಷ ಎಂ.ಕೃಷ್ಣಮೂರ್ತಿ
ಬಿಗ್ ನ್ಯೂಸ್: ಕೊರೊನಾ ನಿಯಂತ್ರಣಕ್ಕೆ ಮತ್ತೆ ಜಾರಿಯಾಗುತ್ತಾ ಟಫ್ ರೂಲ್ಸ್?
ಮತಾಂತರದ ಆರೋಪ ಹೊರಿಸಿ ಮುಸ್ಲಿಮ್ ವ್ಯಕ್ತಿಯ ಮೇಲೆ ಬಜರಂಗದಳ ದಾಳಿ!
“ನನ್ನ ಜಾತಿ ನಿಂದನೆ ಮಾಡುತ್ತಿದ್ದಾರೆ” ಎಂದು ಆತ್ಮಹತ್ಯೆಗೆ ಯತ್ನಿಸಿದ ಬಿಲ್ ಕಲೆಕ್ಟರ್!