ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ಇಳಿಯುತ್ತಾರಾ ನಳಿನ್ ಕುಮಾರ್ ಕಟೀಲ್? - Mahanayaka
1:46 AM Tuesday 10 - December 2024

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ಇಳಿಯುತ್ತಾರಾ ನಳಿನ್ ಕುಮಾರ್ ಕಟೀಲ್?

naleen kumar kateel
20/08/2021

ಬೆಂಗಳೂರು: 2023ರ ಕರ್ನಾಟಕ ವಿಧಾನ ಸಭಾ ಚುನಾವಣೆಗೆ ಬಿಜೆಪಿ ಈಗಲೇ ಸಿದ್ಧವಾಗುತ್ತಿದ್ದು, ಇದರ ಹಿನ್ನೆಲೆಯಲ್ಲಿ ಪಕ್ಷದೊಳಗೆ ಮೇಜರ್ ಸರ್ಜರಿ ನಡೆಯುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. ಇದರೊಂದಿಗೆ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನದಿಂದ ಸಂಸದ ನಳಿನ್ ಕುಮಾರ್ ಕಟೀಲ್ ಅವರನ್ನು ಇಳಿಸುವ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ.

ಮುಂದಿನ ಚುನಾವಣೆಯಲ್ಲಿ ಬಹುಮತ ಸಾಧಿಸಲು ರಾಜ್ಯ ಬಿಜೆಪಿ ಸಿದ್ಧತೆ ನಡೆಸುತ್ತಿದ್ದು, ಹೀಗಾಗಿ ಈಗಿನಿಂದಲೇ ಆರೆಸ್ಸೆಸ್ ಚಟುವಟಿಕೆ ಆರಂಭಿಸಿದೆ ಎಂದು ಹೇಳಲಾಗುತ್ತಿದೆ. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರನ್ನು ಮುಖ್ಯಮಂತ್ರಿ ಸ್ಥಾನದಿಂದ ಇಳಿಸುವ ಸಂದರ್ಭದಲ್ಲಿಯೇ ನಳಿನ್ ಕುಮಾರ್ ಕಟೀಲ್ ಅವರನ್ನೂ ರಾಜ್ಯಾದ್ಯಕ್ಷ ಸ್ಥಾನದಿಂದ ಇಳಿಸುವ ಬಗ್ಗೆ ಗುಸುಗುಸು ಮಾತುಗಳು ಕೇಳಿ ಬಂದಿದ್ದವು. ಸದ್ಯದ ವರದಿಗಳ ಪ್ರಕಾರ, ನಳಿನ್ ಕುಮಾರ್ ಕಟೀಲ್ ಅವರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ಇಳಿಸುವ ಬಗ್ಗೆ ಆರೆಸ್ಸೆಸ್ ಪ್ರಮುಖರು ಚಿಂತಿಸಿದ್ದಾರೆ ಎಂದು ಹೇಳಲಾಗಿದೆ.

ಈ ವಿಚಾರವನ್ನು ಖುದ್ದಾಗಿ ನಳಿನ್ ಕುಮಾರ್ ಕಟೀಲ್ ಅವರ ಬಳಿಯಲ್ಲಿ ಆರೆಸ್ಸೆಸ್ ನಾಯಕರು ಚರ್ಚಿಸಿದ್ದಾರೆ ಎಂದೂ ಹೇಳಲಾಗುತ್ತಿದೆ. 2023ರ ಸಾರ್ವತ್ರಿಕ ಚುನಾವಣೆಯ ಹಿತದೃಷ್ಟಿಯಿಂದ ಪಕ್ಷದೊಳಗೆ ಬದಲಾವಣೆ ಮಾಡುವುದಾಗಿ ತಿಳಿಸಲಾಗಿದೆ. ಆರೆಸ್ಸೆಸ್ ಬೈಠಕ್ ನಲ್ಲಿ ಈ ಬಗ್ಗೆ ನಿರ್ಧಾರ ಕೈಗೊಂಡರೆ, ಅದಕ್ಕೆ ನೀವು ಸಿದ್ಧರಾಗಬೇಕು ಎಂದು ಸೂಕ್ಷ್ಮವಾಗಿ ತಿಳಿಸಲಾಗಿದೆ ಎಂದು ಹೇಳಲಾಗುತ್ತಿದೆ. ಮುಂದಿನ ದಿನಗಳಲ್ಲಿ ಈ ಬಗ್ಗೆ ಸ್ಪಷ್ಟವಾದ ಚಿತ್ರಣ ದೊರೆಯುವ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ.

ಇನ್ನಷ್ಟು ಸುದ್ದಿಗಳು…

ಬದುಕಿದ್ದ ಯೋಧನ ಮನೆಗೆ ಹೋಗಿ ಸಾಂತ್ವನ ಹೇಳಿದ ಕೇಂದ್ರ ಸಚಿವ: ಜನಾಶೀರ್ವಾದ ಯಾತ್ರೆಯಲ್ಲಿ ಯಡವಟ್ಟು

ಗುಂಪುಗೂಡಬಾರದು ಎನ್ನುತ್ತಲೇ ಬಿಜೆಪಿ ಜನಾಶೀರ್ವಾದ ಜಾತ್ರೆಯ ಬಗ್ಗೆ ಮೌನ ವಹಿಸಿದ ಸಿಎಂ ಬೊಮ್ಮಾಯಿ

ಓವೈಸಿಯನ್ನು ಅಫ್ಘಾನಿಸ್ತಾನಕ್ಕೆ ಕಳುಹಿಸುವುದು ಉತ್ತಮ | ಸಚಿವೆ ಶೋಭಾ ಕರಂದ್ಲಾಜೆ

ದೇವರಾಜ ಅರಸರ ದುರಂತ ಅಂತ್ಯಕ್ಕೆ ಕಾಂಗ್ರೆಸ್ ಕಾರಣ | ರಘು ಆರ್.ಕೌಟಿಲ್ಯ ಆರೋಪ

ನರ್ಸ್ ನ ನಗ್ನ ಚಿತ್ರ ತೆಗೆದು ಲೈಂಗಿಕ ಕ್ರಿಯೆ ನಡೆಸಲು ಬ್ಲ್ಯಾಕ್ ಮೇಲ್ | ವೈದ್ಯನ ವಿರುದ್ಧ ದೂರು

ವಿಮಾನದಿಂದ ಬಿದ್ದ ಅಫ್ಘಾನ್ ನ ಇಬ್ಬರು ನಾಗರಿಕರ ಸಾವು ಎಷ್ಟೊಂದು ಭೀಕರವಾಗಿತ್ತು ಗೊತ್ತೆ? | ಸಾವನ್ನು ಕಣ್ಣಾರೆ ಕಂಡವರು ಹೇಳಿದ್ದೇನು?

ಇತ್ತೀಚಿನ ಸುದ್ದಿ