ಪತ್ನಿಯನ್ನು ಕೊಂದು ಅಪಘಾತದ ಕಥೆ ಕಟ್ಟಿದ | ಕೊನೆಗೂ ಬಯಲಾಯ್ತು ಪತಿಯ ಹೇಯ ಕೃತ್ಯ
ಹಾಸನ: ಪತ್ನಿಯನ್ನು ಕೊಂದು ಅಪಘಾತ ಎಂದು ಬಿಂಬಿಸಲು ಯತ್ನಿಸಿದ ಪತಿಯನ್ನು ಪೊಲೀಸರು ಬಂಧಿಸಿದ ಘಟನೆ ಹಾಸನದಲ್ಲಿ ನಡೆದಿದ್ದು, ಆರೋಪಿಯ ಹೇಳಿಕೆಯಿಂದ ಅನುಮಾನಗೊಂಡ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ವೇಳೆ ಆರೋಪಿಯ ಕೃತ್ಯ ಬಯಲಾಗಿದೆ.
23 ವರ್ಷ ವಯಸ್ಸಿನ ಪ್ರೀತಿ ಹತ್ಯೆಗೀಡಾದ ಮಹಿಳೆಯಾಗಿದ್ದು, 32 ವರ್ಷ ವಯಸ್ಸಿನ ಮಹೇಶ್ ಹತ್ಯೆ ಆರೋಪಿಯಾಗಿದ್ದಾನೆ. ಅಪಘಾತದಲ್ಲಿ ತನ್ನ ಪತ್ನಿ ಸಾವನ್ನಪ್ಪಿದ್ದು, ತನಗೆ ಗಾಯವಾಗಿದೆ ಎಂದು ಮಹೇಶ್ ಆಸ್ಪತ್ರೆಗೆ ದಾಖಲಾಗಿ ಹೈಡ್ರಾಮ ಮಾಡಿದ್ದ. ಇದೀಗ ಆರೋಪಿಯ ಕೃತ್ಯ ಬಯಲಾದ ಹಿನ್ನೆಲೆಯಲ್ಲಿ ಆರೋಪಿಯನ್ನು ಬಂಧಿಸಲಾಗಿದೆ.
ಮೂರು ವರ್ಷಗಳ ಹಿಂದೆ ಅರಕಲಗೂಡು ತಾಲೂಕಿನ ಉಪ್ಪಾರಕೊಪ್ಪಲಿನ ಪ್ರೀತಿ ಹಾಗೂ ಮಹೇಶ್ ಗೆ ವಿವಾಹವಾಗಿತ್ತು. ಆದರೆ ಇವರ ನಡುವೆ ಕೌಟುಂಬಿಕ ಕಲಹ ಇದ್ದು, ಇದೇ ಕಾರಣದಿಂದ ಪತ್ನಿಯನ್ನು ಆರೋಪಿ ಹತ್ಯೆ ಮಾಡಿದ್ದಾನೆ. ಬಳಿಕ ಸಂಬಂಧಿಕರಿಗೆ ಕರೆ ಮಾಡಿ ಅಪಘಾತದಲ್ಲಿ ಪತ್ನಿ ಸಾವನ್ನಪ್ಪಿದ್ದಾಳೆ ಎಂದು ಮಾಹಿತಿ ನೀಡಿದ್ದ. ಮಹೇಶ್ ಹೇಳಿಕೆ ಹಿನ್ನೆಲೆಯಲ್ಲಿ ಅಪಘಾತ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದಾಗ ಮಹೇಶ್ ಸುಳ್ಳು ಹೇಳುತ್ತಿದ್ದಾನೆ ಎಂದು ಪೊಲೀಸರಿಗೆ ಅರಿವಾಗಿದೆ ಎನ್ನಲಾಗಿದೆ.
ಇನ್ನೂ ಪೊಲೀಸರು ತಮ್ಮ ಭಾಷೆಯಲ್ಲಿ ಮಹೇಶ್ ನನ್ನು ವಿಚಾರಿಸಿದಾಗ ಆರೋಪಿಯು ಕೊನೆಗೂ ತಪ್ಪೊಪ್ಪಿಕೊಂಡಿದ್ದಾನೆ. ಘಟನೆ ಸಂಬಂಧ ಅರಕಲಗೂಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.\
ಇನ್ನಷ್ಟು ಸುದ್ದಿಗಳು…
ಸರ್ಕಾರ ಮಾರಾಟದಲ್ಲಿ ನಿರತವಾಗಿದೆ, ನಿಮ್ಮ ಆರೋಗ್ಯ ನೀವೇ ನೋಡಿಕೊಳ್ಳಿ | ರಾಹುಲ್ ಗಾಂಧಿ
ಭಾರತಕ್ಕೆ ಬರಲು ಹಿಂದೇಟು ಹಾಕಿದ ಅಫ್ಘಾನ್ ನ ಹಿಂದೂ ಹಾಗೂ ಸಿಖ್ಖರು | ಕಾರಣ ಏನು ಗೊತ್ತಾ?
ಬಿಜೆಪಿಗೆ ಅತ್ಯಾಚಾರಿಗಳೆಂದರೆ ಹೆಚ್ಚು ಪ್ರೀತಿ ಕಾಂಗ್ರೆಸ್ ನಿಂದ ವಿವಾದಾತ್ಮಕ ಹೇಳಿಕೆ
ಮೈಸೂರು ಸಾಮೂಹಿಕ ಅತ್ಯಾಚಾರ ಪ್ರಕರಣ: ರಾಜ್ಯ ಸರ್ಕಾರವನ್ನು ತರಾಟೆಗೆತ್ತಿಕೊಂಡ ಸಿದ್ದರಾಮಯ್ಯ