ಮೈಸೂರಿನ ಬೆನ್ನಲ್ಲೇ ಮತ್ತೊಂದು ಸಾಮೂಹಿಕ ಅತ್ಯಾಚಾರ: 15 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ
ಬೆಳಗಾವಿ: ಮೈಸೂರಿನಲ್ಲಿ ಸಾಮೂಹಿಕ ಅತ್ಯಾಚಾರ ನಡೆದ ಬೆನ್ನಲ್ಲೇ ಮತ್ತೊಂದು ಸಾಮೂಹಿಕ ಅತ್ಯಾಚಾರ ಪ್ರಕರಣ ಬೆಳಕಿಗೆ ಬಂದಿದ್ದು, ಬೆಳಗಾವಿ ಜಿಲ್ಲೆಯ ಗ್ರಾಮವೊಂದರ ಬಾಲಕಿಯ ಮೇಲೆ ನಾಲ್ವರು ಯುವಕರು ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ನಡೆದಿದೆ.
ಘಟಪ್ರಭಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂತ್ರಸ್ತ ಬಾಲಕಿಯ ಪೋಷಕರು ದೂರು ದಾಖಲಿಸಿದ್ದು, ಈ ಘಟನೆ 20 ದಿನಗಳ ಹಿಂದೆ ನಡೆದಿದೆ ಎಂದು ಪೋಷಕರು ದೂರಿನಲ್ಲಿ ತಿಳಿಸಿದ್ದು, ಪೋಕ್ಸೋ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ವಿಶೇಷ ತಂಡ ರಚಿಸಿ ಆರೋಪಿಗಳಿಗಾಗಿ ಶೋಧ ನಡೆಸಿ ನಾಲ್ವರನ್ನು ಬಂಧಿಸಿದ್ದಾರೆ.
ಬೆಳಗಾವಿಯಲ್ಲಿ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಬಗ್ಗೆ ದೂರು ದಾಖಲಾಗಿ ಕೇವಲ 10 ಗಂಟೆಗಳೊಳಗೆ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ಬೆಳಗಾವಿ ಎಸ್ ಪಿ ಲಕ್ಷ್ಮಣ ನಿಂಬರಗಿ ಮಾಹಿತಿ ನೀಡಿದ್ದಾರೆ ಎಂದು ವರದಿಯಾಗಿದೆ.
ಇನ್ನಷ್ಟು ಸುದ್ದಿಗಳು…
126 ಪ್ರಯಾಣಿಕರನ್ನು ಹೊತ್ತು ಹಾರುತ್ತಿದ್ದ ವಿಮಾನದ ಪೈಲಟ್ ಗೆ ಹೃದಯಾಘಾತ: ಮುಂದೆ ನಡೆದದ್ದೇನು?
ಮೈಸೂರು ಗ್ಯಾಂಗ್ ರೇಪ್: ನನ್ಗೇನು ಗೊತ್ತು? ನಾನೇನು ನೋಡಿದ್ದೀನಾ, ಮಾಡಿದ್ದೀನಾ? | ಬಿಜೆಪಿ ಸಂಸದ ಹೇಳಿಕೆ
ಅನಿಷ್ಟ ಕಾಮುಕರನ್ನು ಬಂಧಿಸುವ, ಶಿಕ್ಷಿಸುವ ಕಾನೂನು ಗಟ್ಟಿಯಾಗಬೇಕು | ನಟಿ ಶೃತಿ
ಕಾನೂನು ಸುವ್ಯವಸ್ಥೆ ಹತೋಟಿಗೆ ಬರಲಿ ಎಂದು ಚಾಮುಂಡಿಯನ್ನು ಬೇಡಿದ್ದೇನೆ ಎಂದ ಗೃಹ ಸಚಿವ ಅರಗ ಜ್ಞಾನೇಂದ್ರ!
ಜಾತಿಯ ಕಾರಣಕ್ಕೆ ಜನರನ್ನು ದೂರವಿಟ್ಟ ಭಾರತದಲ್ಲಿ ಕುಷ್ಠ ರೋಗಿಗಳ ಸೇವೆ ಮಾಡಿದ ಮಹಾತಾಯಿ ಮದರ್ ತೆರೆಸಾ
ಕಾಬೂಲ್ ವಿಮಾನ ನಿಲ್ದಾಣದ ಕಡೆ ಹೋಗಬೇಡಿ | ತನ್ನ ಪ್ರಜೆಗಳಿಗೆ ಎಚ್ಚರಿಕೆ ನೀಡಿದ ಆಸ್ಟ್ರೇಲಿಯಾ