ಗಾಯದ ಮೇಲೆ ಬರೆ: ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಮತ್ತೆ ಏರಿಕೆ
ನವದೆಹಲಿ: ಗ್ಯಾಸ್ ಸಿಲಿಂಡರ್ ಬೆಲೆಯನ್ನು ಬುಧವಾರದಿಂದ ಜಾರಿಗೆ ಬರುವಂತೆ ಪ್ರತಿ ಲೀಟರ್ ಗೆ 25 ರೂ. ಹೆಚ್ಚಳ ಮಾಡಲಾಗಿದ್ದು, ವಾಣಿಜ್ಯ ಎಲ್ ಪಿಜಿ ಸಿಲಿಂಡರ್ ನ ಬೆಲೆಯನ್ನು 75 ರೂ.ನಷ್ಟು ಹೆಚ್ಚಿಸಲಾಗಿದೆ.
ತುಂಬಿದ 14.2 ಕೆಜಿ ಸಬ್ಸಿಡಿ ರಹಿತ ದ್ರವೀಕೃತ ಪೆಟ್ರೋಲಿಯಂ ಗ್ಯಾಸ್ (ಎಲ್‌ಪಿಜಿ) ಸಿಲಿಂಡರ್ ಈಗ ರಾಷ್ಟ್ರೀಯ ರಾಜಧಾನಿ ದೆಹಲಿಯಲ್ಲಿ 884.50 ರೂ.ಆಗಿದೆ. ಸಬ್ಸಿಡಿ ರಹಿತ ಎಲ್.ಪಿ.ಜಿ. ಸಿಲಿಂಡರ್ ಬೆಲೆಯನ್ನು ಆಗಸ್ಟ್ 17 ರಿಂದ ಜಾರಿಗೆ ಬರುವಂತೆ ಪ್ರತಿ ಸಿಲಿಂಡರ್ ಗೆ 25 ರೂಪಾಯಿ ಹೆಚ್ಚಿಸಲಾಗಿತ್ತು. ಈ ಹಿಂದೆ ಜುಲೈ 1 ರಂದು ಎಲ್ಪಿಜಿ ಸಿಲಿಂಡರ್ ಬೆಲೆಯನ್ನು 25.50 ರೂಪಾಯಿ ಹೆಚ್ಚಳ ಮಾಡಲಾಗಿತ್ತು. ಈಗ ಮತ್ತೆ 25 ರೂ. ಜಾಸ್ತಿಯಾಗಿದೆ.
LPG ಬೆಲೆಗಳು ಕಳೆದ 7 ವರ್ಷಗಳಲ್ಲಿ ದ್ವಿಗುಣಗೊಂಡಿದೆ. 2014 ರ ಮಾರ್ಚ್ 1 ರಂದು ಪ್ರತಿ ಸಿಲಿಂಡರ್‌ಗೆ 410.50 ರೂ. ಇದ್ದ ಎಲ್‌ಪಿಜಿ ಸಿಲಿಂಡರ್ ದರ ಈಗ 859.50 ರೂ.ಗಳಷ್ಟು ಆಗಿದೆ. ಸರ್ಕಾರವು ಪ್ರತಿ ವರ್ಷ ಒಂದು ಮನೆಗೆ 12 ಸಬ್ಸಿಡಿ ಎಲ್‌ಪಿಜಿ ಸಿಲಿಂಡರ್ ಗಳನ್ನು ನೀಡುತ್ತದೆ. 12 ಮರುಪೂರಣಗಳ ವಾರ್ಷಿಕ ಕೋಟಾದ ಮೇಲೆ ಸರ್ಕಾರವು ನೀಡುವ ಸಬ್ಸಿಡಿಯ ಮೊತ್ತವು ತಿಂಗಳಿಂದ ತಿಂಗಳಿಗೆ ಬದಲಾಗುತ್ತದೆ.
ಇನ್ನಷ್ಟು ಸುದ್ದಿಗಳು…
ಮಹಿಳೆಯ ನಗ್ನ ಚಿತ್ರ ಇಟ್ಟುಕೊಂಡು ಬ್ಲ್ಯಾಕ್ ಮೇಲ್ | ಆರೋಪಿ ಅರೆಸ್ಟ್
ನ್ಯಾಯಾಲಯದ 6ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಶರಣಾದ ಫೋಕ್ಸೋ ಪ್ರಕರಣದ ಆರೋಪಿ
ಅಪಘಾತದಲ್ಲಿ ಶಾಸಕರ ಪುತ್ರ ಸೇರಿದಂತೆ 7 ಮಂದಿ ಸಾವು | ಅಪಘಾತಕ್ಕೂ ಮೊದಲು ಎಚ್ಚರಿಕೆ ನೀಡಿದ್ದ ಪೊಲೀಸರು
ಏಳೆಂಟು ವರ್ಷದ ಪ್ರೀತಿ ನಡು ರಸ್ತೆಯಲ್ಲಿ ದುರಂತ ಅಂತ್ಯ! | ಪ್ರಿಯತಮೆಯ ಕತ್ತು ಸೀಳಿ, ತನ್ನ ಕತ್ತನ್ನೂ ಸೀಳಿಕೊಂಡ!
ಮಗುವಿಗೆ ಚಪ್ಪಲಿಯಲ್ಲಿ ಹೊಡೆದು ಚಿತ್ರ ಹಿಂಸೆ ನೀಡಿದ್ದ ತಾಯಿ ಅರೆಸ್ಟ್!