ದಲಿತ ಯುವಕನಿಗೆ ಮೂತ್ರ ಕುಡಿಸಿದ ಪ್ರಕರಣ: ತಲೆಮರೆಸಿಕೊಂಡಿದ್ದ ಪಿಎಸ್ ಐ ಅರ್ಜುನ್ ನನ್ನು ಬಂಧಿಸಿದ ಸಿಐಡಿ ಪೊಲೀಸರು
ಚಿಕ್ಕಮಗಳೂರು: ದಲಿತ ಯುವಕನನ್ನು ವಿಚಾರಣೆಯ ನೆಪದಲ್ಲಿ ಪೊಲೀಸ್ ಠಾಣೆಗೆ ಕರೆದೊಯ್ದು, ಚಿತ್ರ ಹಿಂಸೆ ನೀಡಿ, ಮತ್ತೋರ್ವ ಆರೋಪಿ ಮೂತ್ರ ಕುಡಿಸಿ ವಿಕೃತಿ ಮೆರೆದಿದ್ದ ಚಿಕ್ಕಮಗಳೂರು ಜಿಲ್ಲೆಯ ಗೋಣಿಬೀಡು ಠಾಣೆಯ ಸಬ್ ಇನ್ಸ್ ಪೆಕ್ಟರ್ ಅರ್ಜುನ್ ನನ್ನು ಸಿಐಡಿ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.
ಮಹಿಳೆಯೋರ್ವರಿಗೆ ಕರೆ ಮಾಡಿದ್ದಾರೆ ಎಂದು ಆರೋಪಿಸಿ ದಲಿತ ಯುವಕನನ್ನ ಬಂಧಿಸಿದ್ದ ಪಿಎಸ್ ಐ ಅರ್ಜುನ್ , ಪೊಲೀಸ್ ಠಾಣೆಗೆ ಕರೆತಂದು ಚಿತ್ರಹಿಂಸೆ ನೀಡಿ ಅಮಾನವೀಯವಾಗಿ ವರ್ತಿಸಿದ್ದರು. ಈ ಘಟನೆಗೆ ಸಂಬಂಧಿಸಿದಂತೆ ಅವರ ವಿರುದ್ಧ ಎಫ್ ಐಆರ್ ದಾಖಲಾಗಿತ್ತು.
ಘಟನೆ ಮೇ 10ರಂದು ನಡೆದಿದ್ದರೂ, ಮೇ 22ರಂದು ಅರ್ಜುನ್ ವಿರುದ್ಧ ದೂರು ದಾಖಲಾಗಿತ್ತು. ಆ ಬಳಿಕ ಅರ್ಜುನ್ ತಲೆ ಮರೆಸಿಕೊಂಡಿದ್ದರು. ಆ ಬಳಿಕ ಚಿಕ್ಕಮಗಳೂರಿನ 1ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯಕ್ಕೆ ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ತಿರಸ್ಕೃತಗೊಂಡಿತ್ತು.
ಇದೊಂದು ಗಂಭೀರವಾದ ಘಟನೆಯಾಗಿದ್ದರಿಂದ ತನಿಖೆಯನ್ನು ಸಿಐಡಿಗೆ ವಹಿಸಲಾಗಿತ್ತು. ಇದೀಗ ಸಿಐಡಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಈ ಮೂಲಕ ಅಮಾನವೀಯ ದಾಳಿಗೊಳಗಾದ ಸಂತ್ರಸ್ತ ಯುವಕನಿಗೆ ಮೊದಲ ಹಂತದಲ್ಲಿ ನ್ಯಾಯ ದೊರಕಿದಂತಾಗಿದೆ. ಆರೋಪಿಗೆ ಕಠಿಣಾತಿ ಕಠಿಣ ಶಿಕ್ಷೆಯನ್ನು ನೀಡಬೇಕು ಎನ್ನುವ ಆಗ್ರಹಗಳು ಕೇಳಿ ಬಂದಿವೆ.
ಈ ಪ್ರಕರಣದ ಹಿನ್ನೆಲೆ ಏನು? ಈ ಕೆಳಗಿನ ಸುದ್ದಿಯನ್ನು ಓದಿ…
ಮನು ಕುಲವನ್ನೇ ಬೆಚ್ಚಿ ಬೀಳಿಸಿದ ದಲಿತ ಯುವಕನಿಗೆ ಮೂತ್ರ ಕುಡಿಸಿದ ಪ್ರಕರಣ | ಅರ್ಜುನ್ ಎಂಬ ವಿಕೃತ PSI ತಲೆದಂಡವಾಗಲೇಬೇಕು
ಇನ್ನಷ್ಟು ಸುದ್ದಿಗಳು…
ಆತ್ಮಹತ್ಯೆ ಮಾಡಲು ನೀರಿಗೆ ಹಾರಿದ ಕುಡುಕನ ರಕ್ಷಣೆಗೆ ಹೋದ ಇಬ್ಬರು ಸಾವು | ಕುಡುಕ ಸೇಫ್!
ಆಟವಾಡುತ್ತಿದ್ದ ಬಾಲಕನ ಮೇಲೆ ಪೈಪ್ ಉರುಳಿಬಿದ್ದು ಬಾಲಕ ಸಾವು!
ಎಣ್ಣೆ ಪಾರ್ಟಿಯ ಬಳಿಕ ಡಬ್ಬಲ್ ಮರ್ಡರ್ | ಸ್ನೇಹಿತರಿಂದಲೇ ನಡೆಯಿತು ದುಷ್ಕೃತ್ಯ!
ನೀರಿನ ಬಾಟಲಿಯೇ ಬೆಂಗಳೂರಿನ ಅಪಘಾತಕ್ಕೆ ಕಾರಣವಾಯ್ತೆ? | ಅಪಘಾತದ ವೇಳೆ ನಡೆದದ್ದೇನು?
ಕೈಕೊಟ್ಟ ಕೇಂದ್ರ ಸರ್ಕಾರ: ಈ ಪ್ರಮುಖ 10 ಯೋಜನೆಗಳಿಗೆ ಬಿಡಿಗಾಸೂ ಬಿಡುಗಡೆಯಾಗಿಲ್ಲ!
ಎಣ್ಣೆ ಪಾರ್ಟಿಯ ಬಳಿಕ ಡಬ್ಬಲ್ ಮರ್ಡರ್ | ಸ್ನೇಹಿತರಿಂದಲೇ ನಡೆಯಿತು ದುಷ್ಕೃತ್ಯ!
ನ್ಯಾಯಾಲಯದ 6ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಶರಣಾದ ಫೋಕ್ಸೋ ಪ್ರಕರಣದ ಆರೋಪಿ