ಖಾಸಗಿ ವಾಹಿನಿ, ವೆಬ್ ಪೋರ್ಟಲ್, ಸಾಮಾಜಿಕ ಮಾಧ್ಯಮಗಳಲ್ಲಿ ಕೋಮುಸೌಹಾರ್ದಕ್ಕೆ ಧಕ್ಕೆ ತರುವಂತಹ ಸುದ್ದಿಗಳನ್ನು ಹರಡಲಾಗುತ್ತಿದೆ | ಸುಪ್ರೀಂ ಕೋರ್ಟ್ ಕಳವಳ - Mahanayaka
9:45 AM Friday 20 - September 2024

ಖಾಸಗಿ ವಾಹಿನಿ, ವೆಬ್ ಪೋರ್ಟಲ್, ಸಾಮಾಜಿಕ ಮಾಧ್ಯಮಗಳಲ್ಲಿ ಕೋಮುಸೌಹಾರ್ದಕ್ಕೆ ಧಕ್ಕೆ ತರುವಂತಹ ಸುದ್ದಿಗಳನ್ನು ಹರಡಲಾಗುತ್ತಿದೆ | ಸುಪ್ರೀಂ ಕೋರ್ಟ್ ಕಳವಳ

supreme court
02/09/2021

ನವದೆಹಲಿ: ಖಾಸಗಿ ಸುದ್ದಿವಾಹಿನಿಗಳು,  ವೆಬ್ ಪೋರ್ಟಲ್ ಗಳಲ್ಲಿ ಹಾಗೂ ಸಾಮಾಜಿಕ ಮಾಧ್ಯಮಗಳಲ್ಲಿ ಕೋಮುಸೌಹಾರ್ದಕ್ಕೆ ಧಕ್ಕೆ ತರುವಂತಹ ಸುದ್ದಿಗಳನ್ನು ಹರಡಲಾಗುತ್ತಿದೆ. ಕೆಲವು ಚಾನೆಲ್ ಗಳು ಬಿತ್ತರಿಸುವ ಸುದ್ದಿಗಳಿಗೂ ಕೋಮು ಬಣ್ಣ ಬಳಿಯಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್ ಕಳವಳ ವ್ಯಕ್ತಪಡಿಸಿದೆ.

ಜಮಿಯಾತ್‌ ಉಲೇಮಾ-ಐ-ಹಿಂದ್‌ ಸಂಘಟನೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯನ್ಯಾಯಮೂರ್ತಿ ಎನ್‌.ವಿ.ರಮಣ, ನ್ಯಾಯಮೂರ್ತಿಗಳಾದ ಸೂರ್ಯಕಾಂತ ಹಾಗೂ ಎ.ಎಸ್‌.ಬೋಪಣ್ಣ ಅವರಿರುವ ನ್ಯಾಯಪೀಠ ಈ ಅಭಿಪ್ರಾಯ ವ್ಯಕ್ತಪಡಿಸಿದ್ದು, ದೆಹಲಿಯ ಮರ್ಕಜ್‌ ನಿಜಾಮುದ್ದೀನ್‌ನಲ್ಲಿ ನಡೆದಿದ್ದ ಧಾರ್ಮಿಕ ಸಮಾವೇಶಕ್ಕೆ ಸಂಬಂಧಿಸಿದಂತೆ ಸುಳ್ಳು ಸುದ್ದಿಗಳನ್ನು ಪ್ರಸಾರ ಮಾಡದಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕು. ಸುಳ್ಳು ಸುದ್ದಿಗಳನ್ನು ಹರಡಿದವರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಬೇಕು ಎಂದು ಸಂಸ್ಥೆ ಮನವಿ ಮಾಡಿಕೊಂಡಿತ್ತು.

ಖಾಸಗಿ ವಾಹಿನಿಗಳಲ್ಲಿ ಬಿತ್ತರವಾಗುತ್ತಿರುವ ಸುದ್ದಿಗಳಿಗೆ ಕೋಮುಬಣ್ಣವನ್ನು ಬಳಿಯಲಾಗುತ್ತಿದ್ದು,  ಇದರಿಂದಾಗಿ ದೇಶಕ್ಕೆ ಕೆಟ್ಟ ಹೆಸರು ಬರುತ್ತದೆ ಎಂದು ನ್ಯಾಯಪೀಠ ಹೇಳಿದ್ದು, ಖಾಸಗಿ ವಾಹಿನಿಗಳ ನಿಯಂತ್ರಣಕ್ಕೆ ಏನಾದರೂ ಕ್ರಮಗಳನ್ನು ಕೈಗೊಳ್ಳಲಾಗಿದೆಯೇ ಎಂದು ಕೇಂದ್ರ ಸರ್ಕಾರವನ್ನು ಕೋರ್ಟ್ ಪ್ರಶ್ನಿಸಿದೆ.


Provided by

ಸಾಮಾಜಿಕ ಮಾಧ್ಯಮಗಳಲ್ಲಿ ನ್ಯಾಯಾಧೀಶರುಗಳ ಬಗ್ಗೆ, ಸಂಸ್ಥೆಗಳ ಬಗ್ಗೆಯೂ ಬರೆಯಲಾಗುತ್ತಿದೆ. ಇಂತಹ ಕೃತ್ಯಗಳಿಗೆ ಉತ್ತರದಾಯಿತ್ವವೇ ಇರುವುದಿಲ್ಲ. ಯೂಟ್ಯೂಬ್ ಚಾನೆಲ್ ಗಳಲ್ಲಿ ಪ್ರಸಾರವಾಗುವ ಸುದ್ದಿಗಳ ಮೇಲೆ ಯಾವುದೇ ನಿಯಂತ್ರಣವೇ ಇಲ್ಲ. ಯಾರು ಬೇಕಾದರೂ ಯೂಟ್ಯೂಬ್ ಚಾನೆಲ್ ಆರಂಭಿಸಬಹುದಾಗಿದೆ ಎಂದು ನ್ಯಾಯಪೀಠ ಅಸಮಾಧಾನ ವ್ಯಕ್ತಪಡಿಸಿದೆ.

ಇನ್ನಷ್ಟು ಸುದ್ದಿಗಳು…

 

ದಲಿತ ಯುವಕನಿಗೆ ಮೂತ್ರ ಕುಡಿಸಿದ ಪ್ರಕರಣ: ತಲೆಮರೆಸಿಕೊಂಡಿದ್ದ ಪಿಎಸ್ ಐ ಅರ್ಜುನ್ ನನ್ನು ಬಂಧಿಸಿದ ಸಿಐಡಿ ಪೊಲೀಸರು

ಆತ್ಮಹತ್ಯೆ ಮಾಡಲು ನೀರಿಗೆ ಹಾರಿದ ಕುಡುಕನ ರಕ್ಷಣೆಗೆ ಹೋದ ಇಬ್ಬರು ಸಾವು | ಕುಡುಕ ಸೇಫ್!

ಎಣ್ಣೆ ಪಾರ್ಟಿಯ ಬಳಿಕ ಡಬ್ಬಲ್ ಮರ್ಡರ್ | ಸ್ನೇಹಿತರಿಂದಲೇ ನಡೆಯಿತು ದುಷ್ಕೃತ್ಯ!

ಬಿಗ್ ಬಾಸ್ ವಿನ್ನರ್ ಸಿದ್ಧಾರ್ಥ್ ಶುಕ್ಲಾ ಹೃದಯಾಘಾತದಿಂದ ನಿಧನ

ನೀರಿನ ಬಾಟಲಿಯೇ ಬೆಂಗಳೂರಿನ ಅಪಘಾತಕ್ಕೆ ಕಾರಣವಾಯ್ತೆ? | ಅಪಘಾತದ ವೇಳೆ ನಡೆದದ್ದೇನು?

ನ್ಯಾಯಾಲಯದ 6ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಶರಣಾದ ಫೋಕ್ಸೋ ಪ್ರಕರಣದ ಆರೋಪಿ

ಇತ್ತೀಚಿನ ಸುದ್ದಿ