ರೈಡಿಂಗ್ ಹೊರಟಿದ್ದ ಬೈಕ್ ಕಂಟೈನರ್ ಗೆ ಡಿಕ್ಕಿ | ಓರ್ವ ಸಾವು, ಇಬ್ಬರಿಗೆ ಗಂಭೀರ ಗಾಯ - Mahanayaka

ರೈಡಿಂಗ್ ಹೊರಟಿದ್ದ ಬೈಕ್ ಕಂಟೈನರ್ ಗೆ ಡಿಕ್ಕಿ | ಓರ್ವ ಸಾವು, ಇಬ್ಬರಿಗೆ ಗಂಭೀರ ಗಾಯ

manoj
06/09/2021

ಉಪ್ಪಿನಂಗಡಿ: ಪುತ್ತೂರಿನಿಂದ ಬೈಕ್ ರೈಡಿಂಗ್ ಗೆ ತೆರಳುತ್ತಿದ್ದ ವೇಳೆ ಇಲ್ಲಿನ ನೆಲ್ಯಾಡಿ ಸಮೀಪದ ಎಂಜಿರ ಬಳಿಯಲ್ಲಿ ಕಂಟೈನರ್ ಗೆ ಡಿಕ್ಕಿ ಹೊಡೆದು ಬೈಕ್ ಸವಾರ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ನಡೆದಿದೆ.

ಪುತ್ತೂರು ತಾಲೂಕಿನ ಕೌಡಿಚ್ಚಾರ್ ಸಿಆರ್ ಸಿ ಕಾಲನಿ ನಿವಾಸಿ ಮನೋಜ್ ಮೃತಪಟ್ಟ ಯುವಕ ಎಂದು ವರದಿಯಾಗಿದೆ. ಸೋಮವಾರ ಬೆಳಗ್ಗೆ 11:30ರ ಸುಮಾರಿಗೆ ಪುತ್ತೂರಿನಿಂದ 8 ಬೈಕ್ ಗಳಲ್ಲಿ ತಂಡವೊಂದು ಹೊರಟಿತ್ತು. ಈ ಪೈಕಿ ಕೆಟಿಎಂ ಬೈಕ್ ಚಲಾಯಿಸುತ್ತಿದ್ದ ಮನೋಜ್ ನ ಬೈಕ್  ಕಂಟೈನರ್ ವಾಹನಕ್ಕೆ ಡಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ.

ಸದ್ಯದ ಮಾಹಿತಿಯ ಪ್ರಕಾರ ವೇಗದ ಚಾಲನೆಯಿಂದಾಗಿ ಅಪಘಾತವಾಗಿದೆ ಎಂದು ಹೇಳಲಾಗಿದೆ. ಕಂಟೈನರ್ ಗೆ ಡಿಕ್ಕಿ ಹೊಡೆದು ಯುವಕ ರಸ್ತೆಗೆ ಬಿದ್ದಿದ್ದು, ಕಂಟೈನರ್ ಯುವಕ ಮೇಲೆ ಹರಿದಿದೆ ಎಂದು ವರದಿಯಾಗಿದೆ. ಈ ವೇಳೆ ಮೃತ ಯುವಕನ ಹಿಂದಿನಿಂದ ಬರುತ್ತಿದ್ದ ಒಬ್ಬ ತಂಡದ ಸದಸ್ಯ ಸೇರಿದಂತೆ ಇಬ್ಬರಿಗೆ ಗಂಭೀರವಾಗಿ ಗಾಯವಾಗಿದ್ದು, ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ಇನ್ನಷ್ಟು ಸುದ್ದಿಗಳು…

ಸ್ನಾನಕ್ಕೆ ಹೋಗಿ 2 ಗಂಟೆಯಾದರೂ ವಿದ್ಯಾರ್ಥಿನಿ ಮರಳಿ ಬರಲಿಲ್ಲ | ಬಾತ್ ರೂಮ್ ಬಾಗಿಲು ಮುರಿದು ನೋಡಿದಾಗ ಕಾದಿತ್ತು ಶಾಕ್

ಕೊವಿಡ್ ಲಸಿಕೆ ಪಡೆದ ಬಳಿಕ ನಮ್ಮ ಮಗ ಮೃತಪಟ್ಟ | ಪೋಷಕರಿಂದ ಗಂಭೀರ ಆರೋಪ

ಪೆರಿಯಾರ್ ಜನ್ಮದಿನವನ್ನು ಸಾಮಾಜಿಕ ನ್ಯಾಯದಿನವನ್ನಾಗಿ ಆಚರಿಸಲು ನಿರ್ಧಾರ | ಎಂ.ಕೆ.ಸ್ಟ್ಯಾಲಿನ್ 

ಕಾನ್ಶಿ ಫೌಂಡೇಶನ್ ಬಗ್ಗೆ ವಿಜಯ ಮಹೇಶ್ ಅಪಾರವಾದ ಕನಸನ್ನು ಹೊಂದಿದ್ದರು | ಯೋಗೇಶ್ ಮಾಸ್ಟರ್

ಪೊಲೀಸರ ಎದುರೇ ಕ್ರೈಸ್ತ ಪಾದ್ರಿ ಸೇರಿದಂತೆ ಮೂವರಿಗೆ ಹಲ್ಲೆ ನಡೆಸಿದ ಬಲಪಂಥೀಯರು!

ತಾಲಿಬಾನಿಗಳ ವಿರುದ್ಧ ಸಿಡಿದೆದ್ದ ಅಮ್ರುಲ್ಲಾ ಸಾಲೇಹ್ ಯಾರು? | ಜೈಲಿನಲ್ಲಿ ತಾಲಿಬಾನಿಗರ ದಂಗೆಯನ್ನು ಇವರು ಎದುರಿಸಿದ್ದು ಹೇಗೆ?

ತಡರಾತ್ರಿ ಫೋನ್ ನಲ್ಲಿ ಮಾತನಾಡಿದ್ದಕ್ಕೆ ಪತ್ನಿಯನ್ನು ಗುಂಡಿಟ್ಟು ಕೊಂದ ಪತಿ!

ಅಫ್ಘಾನಿಸ್ತಾನದ ಮಾಜಿ ಅಧಿಕಾರಗಳ ಇಮೇಲ್ ಗಳನ್ನು ಲಾಕ್ ಮಾಡಿದ ಗೂಗಲ್!

ಇತ್ತೀಚಿನ ಸುದ್ದಿ