ಜಾತ್ಯತೀತ ಹೆಸರಿನಲ್ಲಿ ಮುಸ್ಲಿಮರನ್ನು ವಂಚಿಸಲಾಗುತ್ತಿದೆ | ಅಸಾದುದ್ದೀನ್ ಓವೈಸಿ ಆಕ್ರೋಶ
ನವದೆಹಲಿ: ದೇಶದ ಅಭಿವೃದ್ಧಿಯಲ್ಲಿಯಲ್ಲಿ ಮುಸ್ಲಿಮ್ ಮುಖಂಡರ ನಾಯಕತ್ವ ಯಾವ ರಾಜಕೀಯ ಪಕ್ಷಗಳಿಗೂ ಅಗತ್ಯವಿಲ್ಲ. ಎಲ್ಲರೂ ಅವರವರ ಪಾಲಿನ ಹಕ್ಕನ್ನು ಪಡೆಯುತ್ತಿದ್ದರೆ, ಮುಸ್ಲಿಮರಿಗೆ ಏನೂ ಸಿಗುತ್ತಿಲ್ಲ. ಮುಸ್ಲಿಮರನ್ನು ಜಾತ್ಯತೀತ ಹೆಸರಿನಲ್ಲಿ ವಂಚಿಸಲಾಗಿದೆ ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಓವೈಸಿ ಉತ್ತರಪ್ರದೇಶದ ಅಯೋಧ್ಯೆಯಲ್ಲಿನ ರುಡೌಲಿ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿ, ಮುಂದಿನ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ 100 ಕ್ಷೇತ್ರಗಳಲ್ಲಿಯೂ ಎಐಎಂಐಎಂ ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದಾಗಿ ಘೋಷಿಸಿದರು.
ಮುಸ್ಲಿಮರು ಯಾರ ನೆರಳಿನಲ್ಲಿಯೂ ಬದುಕಬೇಕಾಗಿಲ್ಲ ಎಂದ ಅವರು ಸಮಾಜವಾದಿ ಪಕ್ಷದ ಮುಖಂಡ ಅಖಿಲೇಶ್ ಯಾದವ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಇಲ್ಲಿ ಶೇ.90ರಷ್ಟು ಮುಸ್ಲಿಮರ ಮತಗಳಿವೆ, ಕೇವಲ ಶೇ.9ರಷ್ಟು ಯಾದವರ ಮತಗಳಿವೆ. ಆದರೆ ಯಾದವ ಸಮುದಾಯದವರು ಮುಖ್ಯಮಂತ್ರಿಯಾಗುತ್ತಾರೆ, ನಮಗೆ ಉತ್ತರಪ್ರದೇಶದಲ್ಲಿ ಜವಾನನ ಕೆಲಸವೂ ಸಿಗುವುದಿಲ್ಲ. ಎಂದು ಆಕ್ರೋಶ ವ್ಯಕ್ತಪಡಿಸಿದರು.
ಉತ್ತರಪ್ರದೇಶದಲ್ಲಿ ಮುಸ್ಲಿಮ್, ಯಾದವರ ಸಹಯೋಗದೊಂದಿಗೆ ರಾಜ್ಯದಲ್ಲಿ ಸಮಾಜವಾದಿ ಪಕ್ಷ ಗೆಲುವು ಸಾಧಿಸುತ್ತಿದೆ. ಆದರೆ ಯಾದವರು ಮುಸ್ಲಿಮ್ ಸಮುದಾಯದ ಅಭ್ಯರ್ಥಿಗಳಿಗೆ ಮತ ಚಲಾಯಿಸುವುದಿಲ್ಲ ಎಂದು ಅವರು ಗಂಭೀರ ಆರೋಪ ಮಾಡಿದರು.
ಇನ್ನಷ್ಟು ಸುದ್ದಿಗಳು…
ಐದು ರಾಜ್ಯಗಳ ಚುನಾವಣಾ ಉಸ್ತುವಾರಿಗಳ ಹೆಸರು ಪ್ರಕಟಿಸಿದ ಬಿಜೆಪಿ: ಶೋಭಾ ಕರಂದ್ಲಾಜೆಗೂ ಸ್ಥಾನ
ಅನುಶ್ರೀ ಮುಖವಾಡ ಕಳಚಿದೆ, ಜೈಲಿಗೆ ಹೋಗೋದು ಪಕ್ಕಾ | ಪ್ರಶಾಂತ್ ಸಂಬರ್ಗಿ
ರವಿಶಂಕರ್ ಗುರೂಜಿ ಆಶ್ರಮದವರಿಗೇ ಮಂಕುಬೂದಿ ಎರಚಿ ವಂಚಿಸಿದ ನಕಲಿ ಐಎಎಸ್ ಅಧಿಕಾರಿ!
ನಿಂತಿದ್ದ ಕಾರಿಗೆ ಡಿಕ್ಕಿ ಹೊಡೆದ ಲಾರಿ | ಕಾರಿನಲ್ಲಿದ್ದ ಇಬ್ಬರ ದುರಂತ ಸಾವು
12 ವರ್ಷದ ಬಾಲಕಿಯ ಮೇಲೆ ಮಲತಂದೆ, ನೆರೆ ಮನೆಯ ವ್ಯಕ್ತಿಯಿಂದ ಅತ್ಯಾಚಾರ!
ನಿಶ್ಚಿತಾರ್ಥವಾದ ಬೆನ್ನಲ್ಲೇ ಗಂಡಿಗೆ ಶಾಕ್ ನೀಡಿದ ಯುವತಿ | ಚಿನ್ನಾಭರಣದೊಂದಿಗೆ ಪರಾರಿ, ತಾಯಿಗೂ ಟೋಪಿ ಹಾಕಿದ ಮಗಳು!
ಪ್ರೀತಿಸಿ ವಿವಾಹವಾಗಿದ್ದವರನ್ನು ಜಾತಿಗಾಗಿ ಬೇರ್ಪಡಿಸಿದರು! | ಫೇಸ್ ಬುಕ್ ಲೈವ್ ಗೆ ಬಂದು ಯುವಕ ಆತ್ಮಹತ್ಯೆ
ದಲಿತ ಯುವಕನಿಗೆ ಮೂತ್ರ ಕುಡಿಸಿದ ಪ್ರಕರಣ: ಪಿಎಸ್ ಐ ಅರ್ಜುನ್ ಗೆ ಜೈಲೇ ಗತಿ
ಕಾನ್ಶಿ ಫೌಂಡೇಶನ್ ಬಗ್ಗೆ ವಿಜಯ ಮಹೇಶ್ ಅಪಾರವಾದ ಕನಸನ್ನು ಹೊಂದಿದ್ದರು | ಯೋಗೇಶ್ ಮಾಸ್ಟರ್