ಶಶಿಕಲಾಗೆ ಮತ್ತೆ ಶಾಕ್: 100 ಕೋಟಿ ರೂಪಾಯಿ ಬೆಲೆ ಬಾಳುವ 11 ಆಸ್ತಿಗಳು ಜಪ್ತಿ
ಚೆನ್ನೈ: ಎಐಎಡಿಎಂಕೆ ಉಚ್ಚಾಟಿತ ನಾಯಕಿ ಶಶಿಕಲಾ ಅವರಿಗೆ ಸಂಬಂಧಪಟ್ಟ 11 ಆಸ್ತಿಗಳನ್ನು ಆದಾಯ ತೆರಿಗೆ ಇಲಾಖೆ ಜಪ್ತಿ ಮಾಡಿದ್ದು, ಈ ಆಸ್ತಿಗಳೆಲ್ಲವೂ ಜಯಲಲಿತಾ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಖರೀದಿ ಮಾಡಲಾಗಿದ್ದ ಆಸ್ತಿಗಳು ಎಂದು ತಿಳಿದು ಬಂದಿದೆ.
ಚೆನ್ನೈನ ಪಯನೂರು ಗ್ರಾಮದಲ್ಲಿ ಸುಮಾರು 24 ಎಕರೆ ಪ್ರದೇಶಗಳಷ್ಟಿದ್ದ 11 ಆಸ್ತಿಗಳನ್ನು ಆದಾಯ ತೆರಿಗೆ ಇಲಾಖೆ ಬೇನಾಮಿ ನಿಷೇಧ ಕಾಯ್ದೆಯಡಿಯಲ್ಲಿ ಮುಟ್ಟುಗೋಲು ಹಾಕಿದೆ. ಇವೆಲ್ಲವೂ ಜಯಲಲಿತಾ 1991 – 1996ರ ಅವಧಿಯಲ್ಲಿ ಖರೀದಿ ಮಾಡಲಾಗಿತ್ತು ಎಂದು ಹೇಳಲಾಗಿದೆ.
ಈ ಆಸ್ತಿಯನ್ನು ಖರೀದಿ ಮಾಡುವ ಸಂದರ್ಭದಲ್ಲಿ ಇದರ ಬೆಲೆ ಕೇವಲ 20 ಲಕ್ಷ ರೂಪಾಯಿ ಆಗಿತ್ತು. ಈಗ 100 ಕೋಟಿ ರೂಪಾಯಿ ಬೆಲೆ ಬಾಳುತ್ತವೆ. 2014ರಲ್ಲಿ ಕರ್ನಾಟಕ ವಿಶೇಷ ಕೋರ್ಟ್ ನ ಅಂದಿನ ನ್ಯಾಯಾಧೀಶರಾಗಿದ್ದ ಜಾನ್ ಮೈಕೆಲ್ ಅವರು ನೀಡಿದ ತೀರ್ಪಿನಲ್ಲಿ ಈ 11 ಆಸ್ತಿಗಳು ನ್ಯಾಯ ಸಮ್ಮತವಾದ ಆಸ್ತಿ ಅಲ್ಲ ಎಂದು ಹೇಳಿದ್ದಾರೆ.
ಇನ್ನೂ ಈ ತೀರ್ಪನ್ನು ಆಧರಿಸಿ ಐಟಿ ಇಲಾಖೆ ಆಸ್ತಿಯನ್ನು ಜಪ್ತಿ ಮಾಡಿದೆ. ಅದರ ಅನ್ವಯ, ಶಶಿಕಲಾ ಇನ್ನು ಈ ಆಸ್ತಿಯನ್ನು ಬಳಕೆ ಮಾಡಬಾರದು ಮಾತ್ರವಲ್ಲ, ಇದರ ಹೆಸರಿನಲ್ಲಿ ಯಾವುದೇ ವ್ಯವಹಾರವನ್ನೂ ಮಾಡಬಾರದು ಎಂದು ಹೇಳಲಾಗಿದೆ. ಶಶಿಕಲಾ ಅವರ ಆಸ್ತಿ ಜಪ್ತಿಯಾಗುತ್ತಿರುವುದು ಇದೇ ಮೊದಲೇನಲ್ಲ. 2019ರಲ್ಲಿ ಶಶಿಕಲಾ ಅವರ 1600 ಕೋಟಿ ಮೌಲ್ಯದ ಆಸ್ತಿಯನ್ನು ಐಟಿ ಇಲಾಖೆ ಮುಟ್ಟುಗೋಲು ಮಾಡಿದೆ.
ಇನ್ನಷ್ಟು ಸುದ್ದಿಗಳು…
ಅನುಶ್ರೀ ವಿರುದ್ಧ ಮತ್ತೆ ವಿಚಾರಣೆ ನಡೆಯುವ ಸಾಧ್ಯತೆ ಕಡಿಮೆ | ಮಂಗಳೂರು ಪೊಲೀಸ್ ಆಯುಕ್ತ ಎನ್.ಶಶಿಕುಮಾರ್
ಹೆದ್ದಾರಿಯ ಉದ್ದಕ್ಕೂ ಕಿಲೋ ಮೀಟರ್ ಗಟ್ಟಲೆ ಕಾಂಡಮ್ ಪತ್ತೆ | ಅಷ್ಟಕ್ಕೂ ನಡೆದದ್ದೇನು?
ಜಾತ್ಯತೀತ ಹೆಸರಿನಲ್ಲಿ ಮುಸ್ಲಿಮರನ್ನು ವಂಚಿಸಲಾಗುತ್ತಿದೆ | ಅಸಾದುದ್ದೀನ್ ಓವೈಸಿ ಆಕ್ರೋಶ
ರವಿಶಂಕರ್ ಗುರೂಜಿ ಆಶ್ರಮದವರಿಗೇ ಮಂಕುಬೂದಿ ಎರಚಿ ವಂಚಿಸಿದ ನಕಲಿ ಐಎಎಸ್ ಅಧಿಕಾರಿ!
ಐದು ರಾಜ್ಯಗಳ ಚುನಾವಣಾ ಉಸ್ತುವಾರಿಗಳ ಹೆಸರು ಪ್ರಕಟಿಸಿದ ಬಿಜೆಪಿ: ಶೋಭಾ ಕರಂದ್ಲಾಜೆಗೂ ಸ್ಥಾನ