ವಾನರ ಸೇನೆಯ ದಾಳಿ: ಎರಡನೇ ಮಹಡಿಯಿಂದ ಬಿದ್ದು ಬಿಜೆಪಿ ನಾಯಕನ ಪತ್ನಿ ಸಾವು
ಶಾಮ್ಲಿ: ವಾನರ ಸೇನೆಯ ದಾಳಿಯಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ಬಿಜೆಪಿ ನಾಯಕನ ಪತ್ನಿ ಎರಡನೇ ಮಹಡಿಯಿಂದ ಕೆಳಕ್ಕೆ ಬಿದ್ದು ಸಾವನ್ನಪ್ಪಿದ ದಾರುಣ ಘಟನೆ ಉತ್ತರಪ್ರದೇಶದ ಶಾಮ್ಲಿಯಲ್ಲಿ ನಡೆದಿದ್ದು, ಮಹಡಿಯಿಂದ ಬಿದ್ದ ಪರಿಣಾಮ ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಬಿಜೆಪಿ ನಾಯಕ, ಮಾಜಿ ಸಂಸದ ಅನಿಲ್ ಕುಮಾರ್ ಚೌಹಾಣ್ ಅವರ ಪತ್ನಿ 50 ವರ್ಷ ವಯಸ್ಸಿನ ಸುಷ್ಮಾದೇವಿ ಸಾವಿಗೀಡಾದ ಮಹಿಳೆಯಾಗಿದ್ದಾರೆ. ಇಲ್ಲಿನ ಕೈರಾನಾ ನಗರದಲ್ಲಿರುವ ತಮ್ಮ ಮನೆಯ ಟೆರೇಸ್ ನಲ್ಲಿ ಇದ್ದ ಸಂದರ್ಭದಲ್ಲಿ ಇವರ ಮೇಲೆ ಏಕಾಏಕಿ ಮಂಗಗಳ ಸೇನೆ ದಾಳಿ ಮಾಡಿದೆ. ಮಂಗಗಳಿಂದ ಪರಾಗಲು ಬೇರೆ ದಾರಿ ಕಾಣದೇ ಟೆರೆಸ್ ನಿಂದ ಕೆಳಗೆ ಹಾರಿದ್ದು, ಪರಿಣಾಮವಾಗಿ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಉತ್ತರ ಪ್ರದೇಶದ ಪಶ್ಚಿಮ ಜಿಲ್ಲೆಗಳಲ್ಲಿ ಮಂಗಗಳ ಹಾವಳಿ ಅತಿಯಾಗದ್ದು, ಮನುಷ್ಯರ ಮೇಲೆಯೇ ದಾಳಿ ನಡೆಸುತ್ತಿದೆ. ಮಥುರಾ ಜಿಲ್ಲೆಯಲ್ಲಿ ಮಂಗಗಳನ್ನು ಹಿಡಿಯುವ ಕೆಲಸ ಸೆ.1ರಿಂದ ಆರಂಭಗೊಂಡಿದೆ. ಈ ನಿಟ್ಟಿನಲ್ಲಿ ಇಲ್ಲಿನ ಮುನ್ಸಿಪಲ್ ಕಾರ್ಪೋರೇಷನ್ ಕಾರ್ಯಾಚರಣೆ ಮಾಡುತ್ತಿದೆ.
ಇನ್ನಷ್ಟು ಸುದ್ದಿಗಳು…
2 ವರ್ಷದ ಮಗು ಕೊವಿಡ್ ಗೆ ಬಲಿ: 3ನೇ ಅಲೆಯ ಮುನ್ಸೂಚನೆಯೇ?
ಹೊಟೇಲ್ ನಲ್ಲಿ 16 ವರ್ಷ ವಯಸ್ಸಿನ ಬಾಲಕಿಯ ಅತ್ಯಾಚಾರ | ಬಿಜೆಪಿ, ಜೆಡಿಯು ಮುಖಂಡರ ಸಹಿತ ಮೂವರ ಬಂಧನ
ದೋಣಿ ಮಗುಚಿ ಮೂವರು ಮಕ್ಕಳು ಸೇರಿದಂತೆ 6 ಮಂದಿ ಜಲಸಮಾಧಿ!
ಪಕ್ಷ ಯಾವುದೇ ಇರಲಿ, ಮುಂದಿನ ಬಾರಿ ರಾಜ್ಯದಲ್ಲಿ ದಲಿತ ಸಿಎಂ ಆಗಬೇಕು | ಜೆಡಿಎಸ್ ಶಾಸಕ ಗೌರಿಶಂಕರ್ ಕರೆ
ಜೆಸಿಬಿ ಅಡಿಗೆ ಸಿಲುಕಿ ಪೌರ ಕಾರ್ಮಿಕ ಸಹಿತ ಇಬ್ಬರು ಸಾವು!
ಹೆದ್ದಾರಿಯ ಉದ್ದಕ್ಕೂ ಕಿಲೋ ಮೀಟರ್ ಗಟ್ಟಲೆ ಕಾಂಡಮ್ ಪತ್ತೆ | ಅಷ್ಟಕ್ಕೂ ನಡೆದದ್ದೇನು?
ತಾಲಿಬಾನ್ ಉಗ್ರನ ಬಂದೂಕಿಗೆ ಎದೆಯೊಡ್ಡಿದ ಅಫ್ಘಾನಿಸ್ತಾನದ ಮಹಿಳೆಯ ಧೈರ್ಯಕ್ಕೆ ಭೇಷ್ ಎಂದ ನೆಟ್ಟಿಗರು!
ದಲಿತ ಯುವಕನಿಗೆ ಮೂತ್ರ ಕುಡಿಸಿದ ಪ್ರಕರಣ: ಪಿಎಸ್ ಐ ಅರ್ಜುನ್ ಗೆ ಜೈಲೇ ಗತಿ