ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿನಿಯರು, ಪೋಷಕರ ಮೇಲೆ ಮಾರಣಾಂತಿಕ ಹಲ್ಲೆ: ವ್ಯಾಪಕ ಆಕ್ರೋಶ - Mahanayaka

ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿನಿಯರು, ಪೋಷಕರ ಮೇಲೆ ಮಾರಣಾಂತಿಕ ಹಲ್ಲೆ: ವ್ಯಾಪಕ ಆಕ್ರೋಶ

protest
10/09/2021

ಶ್ರೀನಿವಾಸಪುರ: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿನಿಯರು ಹಾಗೂ ಅವರ ಪೋಷಕರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದವರ ವಿರುದ್ಧ ಕಾನೂನು ಕ್ರಮ ಜರಗಿಸಬೇಕು ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಆಗ್ರಹಿಸಿದ್ದು, ವಿದ್ಯಾರ್ಥಿನಿಯರು ಹಾಗೂ ಅವರ ಪೋಷಕರ ಮೇಲೆ ವಿನಾ ಕಾರಣವಾಗಿ ಹಲ್ಲೆ ನಡೆಸಲಾಗಿದೆ ಎಂದು ಅವರು ಹೇಳಿದರು.


Provided by

ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ಗುರುವಾರ ಭೇಟಿ ನೀಡಿ ತಾಲ್ಲೂಕಿನ ತಾಡಿಗೋಳ್ ಗ್ರಾಮದ ಸಮೀಪ ನಡೆದ ಘರ್ಷಣೆಯಲ್ಲಿ ಹಲ್ಲೆಗೊಳಗಾಗಿ ಚಿಕಿತ್ಸೆ ಪಡೆಯುತ್ತಿರುವ ವಿದ್ಯಾರ್ಥಿನಿಯರು ಹಾಗೂ ಪೋಷಕರಿಗೆ ಸಾಂತ್ವನ ಹೇಳಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೆಲವು ಪುಂಡರ ಗುಂಪು ಗೌರವಯುತವಾಗಿ ಕಾಲೇಜಿಗೆ ಹೋಗುವ ವಿದ್ಯಾರ್ಥಿನಿಯರ ಮೇಲೆ ವಿನಾಕಾರಣ ಅಮಾನವೀಯವಾಗಿ ಹಲ್ಲೆ ನಡೆಸಿದೆ. ಪರಿಸ್ಥಿತಿ ಹೀಗಾದರೆ ದಲಿತ ಸಮುದಾಯಕ್ಕೆ ಸೇರಿದ ಹೆಣ್ಣು ಮಕ್ಕಳು ಶಾಲಾ, ಕಾಲೇಜಿಗೆ ಹೋಗು ವುದಾದರೂ ಹೇಗೆ, ಪೊಲೀಸರು ಸಕಾಲಿಕ ಕ್ರಮ ಕೈಗೊಳ್ಳಲು ಇನ್ನೇನು ನಡೆಯಬೇಕು ಎಂದು ಪ್ರಶ್ನಿಸಿದರು.

ಹಲ್ಲೆ ನಡೆದು ನಾಲ್ಕು ದಿನಗಳಾದರೂ, ಪರಿಚಿತ ಹಲ್ಲೆಕೋರರನ್ನು ಬಂಧಿಸಿಲ್ಲ. ಮೈಸೂರಿನ ಘಟನೆಯಲ್ಲಿ ಅಪರಿಚಿತ ಆರೋಪಿಗಳನ್ನು ಪೊಲೀಸರು ಸಲೀಸಾಗಿ ಹಿಡಿದರು. ಆದರೆ, ಇಲ್ಲಿ ಹಾಗೆ ಮಾಡಿಲ್ಲ. ಪೊಲೀಸರ ಕಾರ್ಯವೈಖರಿಯನ್ನು ಏನೆಂದು ತಿಳಿಯಬೇಕು ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಇನ್ನೂ ಹಲ್ಲೆಗೊಳಗಾಗಿರುವ ವಿದ್ಯಾರ್ಥಿನಿಯರನ್ನು ಕೂಡ ಕೇಸ್ ನಲ್ಲಿ ಸೇರಿಸಿರುವುದು ದುರದೃಷ್ಟಕರವಾಗಿದೆ. ಅವರನ್ನು ಬೆದರಿಸಿ ಮೊಕದ್ದಮೆ ಹಿಂಪಡೆಯಲು ಒತ್ತಡ ಹಾಕಲಾಗಿದೆ ಎಂದು ಅವರು ಇದೇ ಸಂದರ್ಭದಲ್ಲಿ ಆರೋಪಿಸಿದರು.


Provided by

ತಹಶೀಲ್ದಾರ್ ಎಸ್.ಎಂ.ಶ್ರೀನಿವಾಸ್, ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಎಸ್. ಆನಂದ್, ಡಿವೈಎಸ್ಪಿ ಕೆ.ಸಿ. ಗಿರಿ, ತಾಲ್ಲೂಕು ವೈದ್ಯಾಧಿಕಾರಿ ಡಾ.ಎಂ.ಸಿ. ವಿಜಯ, ಆಸ್ಪತ್ರೆ ಆಡಳಿತಾಧಿಕಾರಿ ಡಾ.ಶ್ರೀನಿವಾಸ್, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಎಂ. ಶ್ರೀನಿವಾಸನ್, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ದಿಂಬಾಲ ಅಶೋಕ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಂಜಯ್ ರೆಡ್ಡಿ, ತಾಲ್ಲೂಕು ದಲಿತ ಸಂಘರ್ಷ ಸಮಿತಿ ಸಂಚಾಲಕ ವೆಂಕಟೇಶ್ ಇದ್ದರು.

ಆರ್ ಪಿಐ, ಸಮತಾ ಸೈನಿಕ ದಳ ಪ್ರತಿಭಟನೆ:

ಘಟನೆ ಖಂಡಿಸಿ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ಹಾಗೂ ಸಮತಾ ಸೈನಿಕ ದಳದ ಜಿಲ್ಲಾ ಘಟಕದ ಸದಸ್ಯರು ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು. ಆರೋಪಿಗಳನ್ನು ಕೂಡಲೇ ಬಂಧಿಸಬೇಕು. ಹಲ್ಲೆಗೊಳಗಾಗಿರುವ ವಿದ್ಯಾರ್ಥಿನಿಯರು ಹಾಗೂ ಅವರ ಕುಟುಂಬಗಳಿಗೆ ಪೊಲೀಸ್ ರಕ್ಷಣೆ ನೀಡಬೇಕು. ಜಿಮ್ ಅನಿಲ್ ಮತ್ತು ಆತನ ಸಹಚರರನ್ನು ಗಡಿಪಾರು ಮಾಡಬೇಕು. ದಲಿತರ ಮೇಲೆ ದೌರ್ಜನ್ಯ ಕಾಯ್ದೆಯಡಿ ನಿಯಮಿತವಾಗಿ ಸಭೆ ನಡೆಸಬೇಕು. ಇಂಥ ಘಟನೆಗಳು ಸಂಭವಿಸಿದಾಗ ಕೇಸ್ ಮತ್ತು ಕೌಂಟರ್ ಕೇಸ್ ದಾಖಲಿಸುವುದನ್ನು ಬಿಡಬೇಕು ಎಂದು ಆಗ್ರಹಿಸಿದರು.

ಸುಗುಣಮ್ಮ, ಪಿಳ್ಳರಾಜು ಬೋಸಪ್ಪ, ಹಿಂಡ್ಲವಾಡಿ ಬಸವರಾಜ್, ಡಿ.ಎಂ. ಅಂಬರೀಶ್, ಎಂ. ಪಾಪಣ್ಣ, ಎಂ. ನಾಗೇಶ್, ರವಿ ಯಾದವ್, ವೆಂಕಟೇಶ್, ರಾಮಾಪುರ ಮುನಿರಾಜು ಹಾಜರಿದ್ದರು.

ಇನ್ನಷ್ಟು ಸುದ್ದಿಗಳು…

ಪೊಲೀಸರ ಎದುರೇ ಬೆತ್ತಲಾಗಿ ಗಾಲ್ಫ್ ಕಾರ್ಟ್ ಓಡಿಸಿ ಶಾಕ್ ನೀಡಿದ ಯುವತಿ!

ಗಣೇಶೋತ್ಸವದ ಶುಭಾಶಯ ಕೋರಿದ ಗಣ್ಯರು: ಕೊರೊನಾ ತೊಲಗಲಿ ಎಂದು ಪ್ರಾರ್ಥಿಸಲು ಕರೆ

ಸಾಬಿಯಾ ಸೈಫಿ ಅತ್ಯಾಚಾರ, ಬರ್ಬರ ಹತ್ಯೆ ವಿರುದ್ಧ ಎಸ್ ಡಿಪಿಐ ಬೃಹತ್ ಹಕ್ಕೊತ್ತಾಯ

ಸಹೋದರಿಗೆ ಬಾಗಿನ ನೀಡಿ ಪುತ್ರಿಯೊಂದಿಗೆ ಬೈಕ್ ನಲ್ಲಿ ಬರುತ್ತಿದ್ದ ಸಹೋದರ, ಪುತ್ರಿ ಇಬ್ಬರೂ ಅಪಘಾತಕ್ಕೆ ಬಲಿ

ದಂಪತಿಯನ್ನು ಅಡ್ಡಗಟ್ಟಿ, ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ಚಿನ್ನಾಭರಣ ದೋಚಿದ ದರೋಡೆಕೋರರು

ಚೌತಿಗೂ ಮೊದಲೇ ಬಿಬಿಎಂಪಿ ಕಚೇರಿ ಆವರಣಕ್ಕೆ ಬಂದ ಗಣಪ! |  ಗಣೇಶೋತ್ಸವಕ್ಕೆ ನಿರ್ಬಂಧದ ವಿರುದ್ಧ ಪ್ರತಿಭಟನೆ

 

ಇತ್ತೀಚಿನ ಸುದ್ದಿ