33 ತಾಸುಗಳ ಜೀವನ್ಮರಣ ಹೋರಾಟದ ಬಳಿಕ ಸಾವಿಗೀಡಾದ ಅತ್ಯಾಚಾರ ಸಂತ್ರಸ್ತೆ! - Mahanayaka

33 ತಾಸುಗಳ ಜೀವನ್ಮರಣ ಹೋರಾಟದ ಬಳಿಕ ಸಾವಿಗೀಡಾದ ಅತ್ಯಾಚಾರ ಸಂತ್ರಸ್ತೆ!

mumbai
11/09/2021

ಮುಂಬೈ: ಮಹಿಳೆಯನ್ನು ಅತ್ಯಾಚಾರ ನಡೆಸಿ, ಖಾಸಗಿ ಅಂಗಕ್ಕೆ ಕಬ್ಬಿಣದ ರಾಡ್ ಹಾಕಿ ಚಿತ್ರ ಹಿಂಸೆ ನೀಡಿದ್ದ ಪ್ರಕರಣದ ಸಂತ್ರಸ್ತೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತಪಟ್ಟಿದ್ದು, ಸುಮಾರು 33ಗಂಟೆಗಳ ಕಾಲ ಜೀವನ್ಮರಣ ಹೋರಾಟ ನಡೆಸಿದ್ದ ಸಂತ್ರಸ್ತೆ ಮಾನವೀಯತೆ ಸತ್ತ ಪ್ರಪಂಚಕ್ಕೆ ವಿದಾಯ ಹೇಳಿದ್ದಾಳೆ.


Provided by

ಮುಂಬೈಯ ಸಾಕಿನಾಕಾ ಏರಿಯಾದಲ್ಲಿ ನಿಂತಿದ್ದ ಟೆಂಪೋದ ಮೇಲೆ  34 ವರ್ಷ ವಯಸ್ಸಿನ ಮಹಿಳೆಯ ಮೇಲೆ ಅತ್ಯಾಚಾರ ಎಸಗಿ ಗುಪ್ತಾಂಗಕ್ಕೆ ರಾಡ್ ನುಗ್ಗಿಸಿ ಅಮಾನವೀಯತೆ ಮೆರೆಯಲಾಗಿತ್ತು.  ಗುರುವಾರ ರಾತ್ರಿಯಿಂದ ಶುಕ್ರವಾರ ಬೆಳಗ್ಗಿನ ಜಾವದೊಳಗೆ ಈ ಘಟನೆ ನಡೆದಿತ್ತು.

ಸಂತ್ರಸ್ತ ಮಹಿಳೆಯನ್ನು ರಕ್ಷಿಸಲು ವೈದ್ಯರು ಸಾಕಷ್ಟು ಪ್ರಯತ್ನಗಳನ್ನು ಮಾಡಿದ್ದಾರೆ. ಒಂದು ಸರ್ಜರಿಯನ್ನು ನಡೆಸಿದರೂ ಆಕೆ ಚೇತರಿಸಿಕೊಂಡಿರಲಿಲ್ಲ. ಕನಿಷ್ಠ ಪಕ್ಷ ಮಹಿಳೆಗೆ ಪ್ರಜ್ಞೆ ಕೂಡ ಮರುಕಳಿಸಲಿಲ್ಲ ಇದೀಗ ಮಹಿಳೆ ಸಾವಿಗೀಡಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ಘಟನೆ ನಡೆದು ಕೆಲವೇ ಹೊತ್ತಿನಲ್ಲಿ ಮುಂಬೈ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಪ್ರಸ್ತುತ ಈ ಪ್ರಕರಣ ಸಂಬಂಧ ತನಿಖೆ ನಡೆಯುತ್ತಿದೆ. ಇನ್ನೂ ಈ ಘಟನೆ ಸಂಬಂಧ ಇಡೀ ದೇಶದಲ್ಲೇ ಆಕ್ರೋಶ ವ್ಯಕ್ತವಾಗಿದೆ.  ಪ್ರಕರಣವು ನಿರ್ಭಯ ಪ್ರಕರಣವನ್ನು ಮತ್ತೊಮ್ಮೆ ನೆನಪಿಸಿದೆ.


Provided by

ಇನ್ನಷ್ಟು ಸುದ್ದಿಗಳು…

ಇಡೀ ತೋಟವನ್ನೇ ನಾಶ ಮಾಡಿದ ಆನೆ, ಪುಟ್ಟ ಹಕ್ಕಿ ಗೂಡು ಇದ್ದ ಬಾಳೆಗಿಡವನ್ನು ಬಿಟ್ಟು ಹೋಯಿತು!

ಬಿಜೆಪಿ ಆಡಳಿತದಲ್ಲಿಯೇ ದೇವಸ್ಥಾನ ನೆಲಸಮ: ಬೇರೆ ಸರ್ಕಾರ ಇದ್ದಿದ್ದರೆ ನಡೆಯುತ್ತಿದ್ದದ್ದೇ ಬೇರೆ!

ಮಮತಾ ಬ್ಯಾನರ್ಜಿ ವಿರುದ್ಧ ಸ್ಪರ್ಧಿಸಿರುವ ಪ್ರಿಯಾಂಕ ಟಿಬ್ರೆವಾಲ್ ಹಿನ್ನೆಲೆ ಏನು ಗೊತ್ತೆ?

ಸ್ಕೂಟಿಯಲ್ಲಿ ಪ್ರಯಾಣಿಸುತ್ತಿರುವ ವೇಳೆಯೇ ಪತ್ನಿಯನ್ನು ಇರಿದು ಕೊಂದ ಪತಿ!

ಬೈಕ್ ಸ್ಕಿಡ್ ಆಗಿ ಖ್ಯಾತ ನಟನಿಗೆ ಗಂಭೀರ ಗಾಯ: ಅಪೋಲೊ ಆಸ್ಪತ್ರೆಗೆ ದೌಡಾಯಿಸಿದ ಹಿರಿಯ ನಟರು

ಮತಾಂತರದ ಸುಳ್ಳು ಆರೋಪ ಹೊರಿಸಿ, ಗುಂಪಿನಿಂದ ದಾಂಧಲೆ: ಕ್ರಮಕ್ಕೆ ಆಗ್ರಹ

ಹುಡುಗಿಯರಿಗೆ ಉಚಿತ ಬ್ಯೂಟಿ ಪಾರ್ಲರ್, ಹಿರಿಯರಿಗೆ ತಂಬಾಕು, ಬೀಡಿ ಫ್ರೀ: ಗ್ರಾಪಂ ಅಭ್ಯರ್ಥಿಯ ಪ್ರಣಾಳಿಕೆ!

ಇತ್ತೀಚಿನ ಸುದ್ದಿ