ನಸುಕಿನ ವೇಳೆ ಕಳ್ಳರಂತೆ ಬಂದು ಜಿಲ್ಲಾಡಳಿತ ದೇಗುಲ ತೆರವು ಮಾಡುತ್ತಿದೆ | ಸಂಸದ ಪ್ರತಾಪ್ ಸಿಂಹ ಆಕ್ರೋಶ - Mahanayaka
10:55 PM Wednesday 11 - December 2024

ನಸುಕಿನ ವೇಳೆ ಕಳ್ಳರಂತೆ ಬಂದು ಜಿಲ್ಲಾಡಳಿತ ದೇಗುಲ ತೆರವು ಮಾಡುತ್ತಿದೆ | ಸಂಸದ ಪ್ರತಾಪ್ ಸಿಂಹ ಆಕ್ರೋಶ

prathap simha
12/09/2021

ಮೈಸೂರು: ಸಾರ್ವಜನಿಕ ಸ್ಥಳಗಳಲ್ಲಿರುವ ದೇಗುಲಗಳ ತೆರವು ಕಾರ್ಯಾಚರಣೆ ಮುಂದುವರಿಸಿದರೆ, ದೇವಸ್ಥಾನ ಉಳಿಸಿ ಎಂಬ ಜನಾಂದೋಲನ ರೂಪಿಸಲಾಗುವುದು ಎಂದು ಸಂಸದ ಪ್ರತಾಪ್ ಸಿಂಹ ಜಿಲ್ಲಾಡಳಿತವನ್ನು ಎಚ್ಚರಿಸಿದ್ದು, ಜನರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ ಹಾಗೂ ಸುಪ್ರೀಂ ಕೋರ್ಟ್ ಆದೇಶವನ್ನು ಸಮರ್ಪಕವಾಗಿ ಅರ್ಥೈಸಿಕೊಳ್ಳದೇ ಜಿಲ್ಲಾಡಳಿತ ಕೇವಲ ದೇಗುಲಗಳನ್ನಷ್ಟೇ ತೆರವುಗೊಳಿಸುತ್ತಿರುವುದು ಸರಿಯಲ್ಲ ಎಂದು ಅವರ ಹೇಳಿದ್ದಾರೆ.

ಭಾನುವಾರ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾರ್ವಜನಿಕ ಸ್ಥಳಗಳಲ್ಲಿ ತಲೆ ಎತ್ತಿರುವ ಧಾರ್ಮಿಕ ಸ್ಥಳಗಳನ್ನು ಪ್ರತ್ಯೇಕವಾಗಿ ಪರಿಗಣಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಸ್ಪಷ್ಟವಾಗಿ ಹೇಳಿದೆ. ಆದರೆ, ಜಿಲ್ಲಾಡಳಿತ ಈ ಅಂಶವನ್ನು ಕೈ ಬಿಟ್ಟು ನಸುಕಿನಲ್ಲಿ ಬರುವ ಕಳ್ಳರಂತೆ ತೆರವು ಮಾಡುತ್ತಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಸಾರ್ವಜನಿಕ ಸ್ಥಳಗಳಲ್ಲಿರುವ ಧಾರ್ಮಿಕ ಸ್ಥಳಗಳನ್ನು ತೆರವು ಮಾಡಬೇಕು ಎಂದು ಸರ್ಕಾರ 2010ರಲ್ಲಿ ಹೊರಡಿಸಿರುವ ಆದೇಶವನ್ನು ವಾಪಸ್ ಪಡೆದುಕೊಳ್ಳಬೇಕು. ಪ್ರತಿ ದೇಗುಲವನ್ನು ಪ್ರತ್ಯೇಕವಾಗಿ ಪರಿಗಣಿಸಿ, ಬದಲಿ ಸ್ಥಳ ನೀಡಬೇಕು. ಸಾಧ್ಯವಾದರೆ, ಸಕ್ರಮಗೊಳಿಸುವುದು ಸೇರಿದಂತೆ ಹಲವು ಕ್ರಮಗಳನ್ನು ಕೈಗೊಳ್ಳುವ ಮೂಲಕ ಜನರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು ಎಂದು ಅವರು ಅವರು ಒತ್ತಾಯಿಸಿದರು.

2009ರ ನಂತರ ಸಾರ್ವಜನಿಕ ಸ್ಥಳಗಳಲ್ಲಿ ಯಾವುದೇ ಅಕ್ರಮ ಧಾರ್ಮಿಕ ಕಟ್ಟಡಗಳನ್ನು ನಿರ್ಮಿಸಲು ಬಿಡಬಾರದು ಎಂದು ಸುಪ್ರೀಂ ಕೋರ್ಟ್ ಹೇಳಿದ್ದರೂ, ಕ್ಯಾತಮಾರನಗಳ್ಳಿ ವಸತಿ ಪ್ರದೇಶದಲ್ಲಿ ಹಾಗೂ ಎನ್.ಆರ್.ಕ್ಷೇತ್ರದಲ್ಲಿ ಹಲವು ಮಸೀದಿಗಳು ಅನಧಿಕೃತವಾಗಿ ತಲೆ ಎತ್ತಿವೆ. ದೇವರಾಜ ಅರಸು ರಸ್ತೆಗಳಲ್ಲಿ ಗೋರಿಗಳು ಇದೆ. ಈ ಎಲ್ಲ ಕಟ್ಟಡ ತಲೆ ಎತ್ತಲು ಅವಕಾಶ ಮಾಡಿಕೊಟ್ಟಿರುವುದು ಸುಪ್ರೀಂ ಕೋರ್ಟ್ ಆದೇಶದ ಉಲ್ಲಂಘನೆ ಅಲ್ಲವೇ? ಎಂದು ಪ್ರತಾಪ್ ಸಿಂಹ ಪ್ರಶ್ನಿಸಿದರು.

ಇನ್ನೂ ಮಸೀದಿಗಳ ತಂಡೆಗೆ ಬಂದರೆ ನಾವೇನೂ ಬಳೆ ತೊಟ್ಟಿಲ್ಲ ಎಂದು ಶಾಸಕ ತನ್ವೀರ್ ಸೇಠ್ ಹೇಳುವ ಮೂಲಕ ಮಹಿಳೆಯರಿಗೆ ಅವಗೌರವ ತೋರಿದ್ದಾರೆ. ಸೋನಿಯಾ ಗಾಂಧಿ, ಇಂದಿರಾಗಾಂಧಿ, ಒನಕೆ ಓಬವ್ವ ಎಲ್ಲರೂ ಮಹಿಳೆಯರು ಎಂಬುವುದನ್ನು ಅವರು ಮರೆಯಬಾರದು ಎಂದರು.

ಇನ್ನಷ್ಟು ಸುದ್ದಿಗಳು…

ನಸುಕಿನ ವೇಳೆ ಕಳ್ಳರಂತೆ ಬಂದು ಜಿಲ್ಲಾಡಳಿತ ದೇಗುಲ ತೆರವು ಮಾಡುತ್ತಿದೆ | ಸಂಸದ ಪ್ರತಾಪ್ ಸಿಂಹ ಆಕ್ರೋಶ

ಅರ್ಜುನ್ ಸರ್ಜಾ ವಿರುದ್ಧದ ‘ಮಿ ಟೂ’  ಪ್ರಕರಣಕ್ಕೆ ಮರುಜೀವ:  ವಿಸ್ಮಯ ಸಿನಿಮಾ ಚಿತ್ರೀಕರಣದ ವೇಳೆಯಲ್ಲೂ ಲೈಂಗಿಕ ದೌರ್ಜನ್ಯ?

ಸಿಗರೇಟ್ ನ ಕಪಿ ಮುಷ್ಠಿಯಲ್ಲಿ ಸಿಲುಕಿ ಒದ್ದಾಡಿ ಬಿಟ್ಟಿದ್ದೆ | ಮರೆಯಲಾರದ ಘಟನೆ

ರಸ್ತೆಯಲ್ಲಿ ಮಹಿಳೆಯ ಕೈ ಹಿಡಿದೆಳೆದ ಜೆಡಿಎಸ್ ಮುಖಂಡ!

ಜೈಲಿನಲ್ಲಿ ಮಹಿಳಾ ಪೊಲೀಸ್ ಮುಂದೆ ಬಟ್ಟೆ ಬಿಚ್ಚಿ ನಿಂತು ಕೈದಿಯಿಂದ ಅನುಚಿತ ವರ್ತನೆ!

ಉದನೆ ಗಣಪತಿ ಕಟ್ಟೆ ಧ್ವಂಸ: ಓರ್ವ ಆರೋಪಿಯನ್ನು ಬಂಧಿಸಿದ ಪೊಲೀಸರು

ವಿಧಾನಸಭೆಯ ಅಧಿವೇಶನದಲ್ಲಿ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಚರ್ಚಿಸಿ ಹಿಂಪಡೆಯದಿದ್ದಲ್ಲಿ ವಿಧಾನಸೌಧಕ್ಕೆ ಮುತ್ತಿಗೆ: ಕ್ಯಾಂಪಸ್ ಫ್ರಂಟ್

ಇತ್ತೀಚಿನ ಸುದ್ದಿ