ಗುಜರಾತ್ ನ ನೂತನ ಸಿಎಂ ಆಗಿ ಭೂಪೇಂದ್ರ ಪಟೇಲ್ ಹೆಸರು ಅಧಿಕೃತ ಘೋಷಣೆ
ಅಹ್ಮದಾಬಾದ್: ಗುಜರಾತ್ ಸಿಎಂ ಸ್ಥಾನಕ್ಕೆ ಶನಿವಾರ ವಿಜಯ್ ರೂಪಾನಿ ಅವರು ರಾಜೀನಾಮೆ ಸಲ್ಲಿಸಿದ ಬಳಿಕ ಇದೀಗ ನೂತನ ಮುಖ್ಯಮಂತ್ರಿಯಾಗಿ ಭೂಪೇಂದ್ರ ಪಟೇಲ್ ಅವರ ಹೆಸರನ್ನು ಅಧಿಕೃತವಾಗಿ ಘೋಷಿಸಲಾಗಿದೆ.
ಭಾನುವಾರ ಗಾಂಧಿನಗರದಲ್ಲಿರುವ ಭಾರತೀಯ ಜನತಾ ಪಕ್ಷದ ಶಾಸಕಾಂಗ ಸಭೆಯಲ್ಲಿ ನಡೆದ ಸುದೀರ್ಘ ಚರ್ಚೆಯ ಬಳಿಕ ಭೂಪೇಂದ್ರ ಪಟೇಲ್ ಅವರ ಹೆಸರನ್ನು ಅಧಿಕೃತವಾಗಿ ಘೋಷಿಸಲಾಗಿದೆ. ಮುಂದಿನ ಚುನಾವಣೆಯಲ್ಲಿ ಜಾತಿ ಆಧಾರದಲ್ಲಿ ಲಾಭ ಪಡೆಯುವ ಉದ್ದೇಶದಿಂದ ಬಿಜೆಪಿ ಏಕಾಏಕಿ ನಾಯಕತ್ವ ಬದಲಾವಣೆಗೆ ಇಳಿದಿದೆ ಎಂದು ಸದ್ಯ ಹೇಳಲಾಗುತ್ತಿದೆ.
ಗುಜರಾತ್ ವಿಧಾನಸಭಾ ಚುನಾವಣೆಗೆ ಇನ್ನು 15 ತಿಂಗಳುಗಳು ಮಾತ್ರವೇ ಬಾಕಿ ಉಳಿದಿದೆ. ಈ ನಡುವೆ ಬಿಜೆಪಿಯು ಏಕಾಏಕಿ ಸಿಎಂ ಬದಲಾವಣೆ ಮಾಡಿದೆ. ಪಟೇದಾರ್ ಸಮುದಾಯವನ್ನು ಒಲಿಸಿಕೊಳ್ಳುವ ಉದ್ದೇಶದೊಂದಿಗೆ ಬಿಜೆಪಿ ಹೈಕಮಾಂಡ್ ಈ ಲೆಕ್ಕಚಾರ ಹಾಕಿದೆ ಎನ್ನುವ ಮಾತುಗಳು ಇದೀಗ ರಾಜಕೀಯ ವಲಯದಲ್ಲಿ ಕೇಳಿ ಬಂದಿದೆ.
ಇನ್ನಷ್ಟು ಸುದ್ದಿಗಳು…
ನಸುಕಿನ ವೇಳೆ ಕಳ್ಳರಂತೆ ಬಂದು ಜಿಲ್ಲಾಡಳಿತ ದೇಗುಲ ತೆರವು ಮಾಡುತ್ತಿದೆ | ಸಂಸದ ಪ್ರತಾಪ್ ಸಿಂಹ ಆಕ್ರೋಶ
ಸಿಗರೇಟ್ ನ ಕಪಿ ಮುಷ್ಠಿಯಲ್ಲಿ ಸಿಲುಕಿ ಒದ್ದಾಡಿ ಬಿಟ್ಟಿದ್ದೆ | ಮರೆಯಲಾರದ ಘಟನೆ
ಮಂಗಳ ಗ್ರಹದಲ್ಲಿ ಜೀವಿಗಳಿದ್ದವು ಎನ್ನುವುದಕ್ಕೆ ಸಿಕ್ಕಿದೆ ಬಲವಾದ ಸಾಕ್ಷಿ!
ಆನ್ ಲೈನ್ ಗೆಳೆಯನ ಭೇಟಿಗೆ ತೆರಳಿದ ಯುವತಿಗೆ ಡ್ರಗ್ಸ್ ನೀಡಿ, ಐದು ಮಂದಿಯಿಂದ ಸಾಮೂಹಿಕ ಅತ್ಯಾಚಾರ!