ಲಾರಿಗೆ ಜೀಪು ಡಿಕ್ಕಿ: 7 ಮಂದಿಯ ದಾರುಣ ಸಾವು, 4 ಮಂದಿಗೆ ಗಂಭೀರ ಗಾಯ
ಚಿಕ್ಕಬಳ್ಳಾಪುರ: ಲಾರಿ ಹಾಗೂ ಜೀಪ್ ನಡುವೆ ನಡೆದ ಅಪಘಾತದಲ್ಲಿ 7 ಮಂದಿ ಸಾವನ್ನಪ್ಪಿ, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಭಾನುವಾರ ನಡೆದಿದೆ.
ಚಿಂತಾಮಣೀ ತಾಡಿಗೊಲ್ ಗೌನಿಪಲ್ಲಿ ಕಡೆಯಿಂದ ಜೀಪಿನಲ್ಇ ಪ್ರಯಾಣಿಕರನ್ನು ಸಾಗಿಸಲಾಗುತ್ತಿತ್ತು. ಈ ವೇಳೆ ಇಲ್ಲಿನ ಮರಿ ನಾಯಕನ ಹಳ್ಳಿ ಬಳಿಯಲ್ಲಿ ಅಪಘಾತ ಸಂಭವಿದೆ ಎಂದು ತಿಳಿದು ಬಂದಿದೆ. ಜೀಪ್ ನಲ್ಲಿ ಒಟ್ಟು 11 ಮಂದಿ ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ.
ಅಪಘಾತದ ತೀವ್ರತೆಗೆ ಜೀಪು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡವರನ್ನು ಚಿಂತಾಮಣಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಇನ್ನಷ್ಟು ಸುದ್ದಿಗಳು…
ಗುಜರಾತ್ ನ ನೂತನ ಸಿಎಂ ಆಗಿ ಭೂಪೇಂದ್ರ ಪಟೇಲ್ ಹೆಸರು ಅಧಿಕೃತ ಘೋಷಣೆ
ನಸುಕಿನ ವೇಳೆ ಕಳ್ಳರಂತೆ ಬಂದು ಜಿಲ್ಲಾಡಳಿತ ದೇಗುಲ ತೆರವು ಮಾಡುತ್ತಿದೆ | ಸಂಸದ ಪ್ರತಾಪ್ ಸಿಂಹ ಆಕ್ರೋಶ
ಜೈಲಿನಲ್ಲಿ ಮಹಿಳಾ ಪೊಲೀಸ್ ಮುಂದೆ ಬಟ್ಟೆ ಬಿಚ್ಚಿ ನಿಂತು ಕೈದಿಯಿಂದ ಅನುಚಿತ ವರ್ತನೆ!
ಮಂಗಳ ಗ್ರಹದಲ್ಲಿ ಜೀವಿಗಳಿದ್ದವು ಎನ್ನುವುದಕ್ಕೆ ಸಿಕ್ಕಿದೆ ಬಲವಾದ ಸಾಕ್ಷಿ!