ಮಹಿಳೆಯನ್ನು ಬೆತ್ತಲೆಗೊಳಿಸಿ ಥಳಿಸಿ, ಅಂಗಾಂಗ ಮುಟ್ಟಿ ವಿಕೃತವಾಗಿ ಥಳಿಸಿದ ತಂಡ: ವಿಡಿಯೋ ವೈರಲ್ - Mahanayaka
4:14 PM Wednesday 5 - February 2025

ಮಹಿಳೆಯನ್ನು ಬೆತ್ತಲೆಗೊಳಿಸಿ ಥಳಿಸಿ, ಅಂಗಾಂಗ ಮುಟ್ಟಿ ವಿಕೃತವಾಗಿ ಥಳಿಸಿದ ತಂಡ: ವಿಡಿಯೋ ವೈರಲ್

yadagiri
13/09/2021

ಯಾದಗಿರಿ: ಮಹಿಳೆಯೋರ್ವರನ್ನು ಬೆತ್ತಲೆಗೊಳಿಸಿ, ಕಬ್ಬಿನ ಜಲ್ಲೆಯಿಂದ ಥಳಿಸಿ, ಅಂಗಾಂಗ ಮುಟ್ಟಿ ವಿಕೃತವಾಗಿ ವರ್ತಿಸಿದ ಘಟನೆ ಯಾದಗಿರಿ ಜಿಲ್ಲೆಯಲ್ಲಿ ನಡೆದಿದ್ದು, ರಾತ್ರಿ ವೇಳೆ ನಾಲ್ಕೈದು ಜನರ ಗುಂಪು ಟಾರ್ಚ್ ಲೈಟ್ ಬೆಳಕಿನಲ್ಲಿ ಮಹಿಳೆಯನ್ನು ಥಳಿಸುತ್ತಿರುವ ವಿಡಿಯೋ ವೈರಲ್ ಆಗಿದೆ.

ಹಲ್ಲೆ ನಡೆಸಿದವರು ಹಾಗೂ ಹಲ್ಲೆಗೊಳಗಾದವರು ಯಾರು ಎನ್ನುವುದು ಸದ್ಯ ತಿಳಿದು ಬಂದಿಲ್ಲ. ಘಟನೆ ಸಂಬಂಧ ಯಾವುದೇ ದೂರು ಕೂಡ ದಾಖಲಾಗಿಲ್ಲ. ವಿಡಿಯೋದಲ್ಲಿ ಕಂಡು ಬಂದಿರುವ ಸ್ಥಳ ಯಾದಗಿರಿ, ಶಹಾಪುರ ಮಾರ್ಗದ ಹೆದ್ದಾರಿಯ ಬಳಿಯ ಜಮೀನು ಎಂದು ತಿಳಿದು ಬಂದಿದೆ.

ಇನ್ನೂ ದುಷ್ಕರ್ಮಿಗಳು ಮಹಿಳೆಯ ಅಂಗಾಂಗ ಮುಟ್ಟುವುದು ಮತ್ತು ಅಮಾನವೀಯವಾಗಿ ಥಳಿಸುವ ದೃಶ್ಯ ಕಂಡು ಬಂದಿದೆ. ಮೇಲ್ನೋಟಕ್ಕೆ ಇದೊಂದು ಹನಿಟ್ರ್ಯಾಪ್ ಸಂಬಂಧವಾಗಿ ನಡೆದ ಹಲ್ಲೆ ಎಂದು ಹೇಳಲಾಗುತ್ತಿದ್ದು, ವಿಡಿಯೋದಲ್ಲಿ ವ್ಯಕ್ತಿಯೋರ್ವ, ಮಹಿಳೆಗೆ ಇದು ನಿನ್ನ ವಿಡಿಯೋ ತಾನೇ? ಎಂದು ಪ್ರಶ್ನಿಸುತ್ತಿರುವುದು ಕಂಡು ಬಂದಿದೆ. ಜೊತೆಗೆ ವ್ಯಕ್ತಿಯೋರ್ವ ನನ್ನಿಂದ 10 ಸಾವಿರ ರೂಪಾಯಿ ಅವಳು ಪಡೆದುಕೊಂಡಿದ್ದಾಳೆ ಎಂದು ಆರೋಪಿಸಿ ಥಳಿಸುತ್ತಿರುವುದು ಕೂಡ ಕಂಡು ಬಂದಿದೆ ಎಂದು ವರದಿಯಾಗಿದೆ.

ಇನ್ನಷ್ಟು ಸುದ್ದಿಗಳು…

ಸಂಸದ ಪ್ರತಾಪ್ ಸಿಂಹ ಅವರ ಕಚೇರಿ ಮುಂದೆ ಬಳೆ ಇಟ್ಟು, ಯುವ ಕಾಂಗ್ರೆಸ್ ನಿಂದ ಪ್ರತಿಭಟನೆ

ಬಿರಿಯಾನಿ ತಿಂದ ಕೆಲವೇ ಹೊತ್ತಿನಲ್ಲಿ ಬಾಲಕಿ ಸಾವು: 15 ದಿನಗಳ ಹಳೆಯ ಕೋಳಿ ಮಾಂಸದಲ್ಲಿ ಬಿರಿಯಾನಿ ತಯಾರಿಕೆ!

ಮುಂಬೈ: ಸ್ನೇಹಿತರೊಂದಿಗೆ ನಡೆದುಕೊಂಡು ಹೋಗುತ್ತಿದ್ದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ!

ಕೇವಲ ಐದು ರೂಪಾಯಿಗಾಗಿ ಬುಡಕಟ್ಟು ಸಮುದಾಯದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ!

ಮಮತಾ ಬ್ಯಾನರ್ಜಿಯ ಸಾಧನೆಯನ್ನು ತನ್ನ ಸಾಧನೆ ಎಂದು ಜಾಹೀರಾತು ನೀಡಿದ ಯೋಗಿ ಆದಿತ್ಯನಾಥ್

ಗಣೇಶೋತ್ಸವದ ಸಂಭ್ರಮದಲ್ಲಿ ಡಾನ್ಸ್ ಮಾಡುತ್ತಲೇ ಪ್ರಾಣ ಬಿಟ್ಟ ಯುವಕ!

ಲಾರಿಗೆ ಜೀಪು ಡಿಕ್ಕಿ: 7 ಮಂದಿಯ ದಾರುಣ ಸಾವು, 4 ಮಂದಿಗೆ ಗಂಭೀರ ಗಾಯ

ಇತ್ತೀಚಿನ ಸುದ್ದಿ