ಜಾತಿ ಜನಗಣತಿ ಸಮೀಕ್ಷೆಯನ್ನು ಕೊಂದದ್ದು ಸಿದ್ದರಾಮಯ್ಯ, ಹೂತದ್ದು ಡಿ.ಕೆ.ಶಿವಕುಮಾರ್ | ಕೆ.ಎಸ್.ಈಶ್ವರಪ್ಪ - Mahanayaka
4:13 PM Wednesday 5 - February 2025

ಜಾತಿ ಜನಗಣತಿ ಸಮೀಕ್ಷೆಯನ್ನು ಕೊಂದದ್ದು ಸಿದ್ದರಾಮಯ್ಯ, ಹೂತದ್ದು ಡಿ.ಕೆ.ಶಿವಕುಮಾರ್ | ಕೆ.ಎಸ್.ಈಶ್ವರಪ್ಪ

eshwarappa
13/09/2021

ಬಳ್ಳಾರಿ: ಸಿದ್ದರಾಮಯ್ಯನವರು ತಮ್ಮದೇ ಸರ್ಕಾರ ಅಧಿಕಾರದಲ್ಲಿದ್ದಾಗ ಜಾತಿ ಸಮೀಕ್ಷೆ ವರದಿಯನ್ನು ಯಾಕೆ ಬಿಡುಗಡೆ ಮಾಡಲಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಪ್ರಶ್ನಿಸಿದ್ದು, ಜಾತಿ ಸಮೀಕ್ಷೆ ವರದಿಯ ಬಗ್ಗೆ ಸತ್ಯ ಹೇಳಿದರೆ ಸಿದ್ದರಾಮಯ್ಯನವರಿಗೆ ಸಿಟ್ಟು ಬರುತ್ತದೆ ಎಂದು ಅವರು ಹೇಳಿದರು.

ಕಾಂಗ್ರೆಸ್ ನವರಿಗೆ ಜಾತಿ ಸಮೀಕ್ಷೆಯ ವರದಿಯ ಮೇಲೆ ನಂಬಿಕೆ ಇದ್ದಿದ್ದರೆ, ಯಾಕೆ ಅವರು ಬಿಡುಗಡೆ ಮಾಡಲಿಲ್ಲ. ಅಂದು ಚುನಾವಣೆ ಸೋಲಿನ ಭೀತಿಯಿಂದ ಜಾತಿಗಣತಿ ವರದಿ ಬಹಿರಂಗಪಡಿಸಲು ಕಾಂಗ್ರೆಸ್ ಹಿಂದಕ್ಕೆ ಸರಿದಿತ್ತು. ಆದರೆ, ಈಗ ನಮ್ಮ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಈಶ್ವರಪ್ಪ ಕಿಡಿಕಾರಿದರು.

ಜಾತಿ ಜನಗಣತಿಗಾಗಿ 180 ಕೋಟಿ ಖರ್ಚಾಗಿದ್ದು,  ಇದಕ್ಕೆ ಯಾರು ಹೊಣೆ ಎಂದು ಪ್ರಶ್ನಿಸಿದ ಅವರು,  ಇಡೀ ವರದಿಯನ್ನು ಸಿದ್ದರಾಮಯ್ಯನವರೇ ಸಾಯಿಸಿದರು. ಅದನ್ನು ಡಿ.ಕೆ.ಶಿವಕುಮಾರ್ ಹೂತುಹಾಕಿದ್ದಾರೆ. ಇದೀಗ ಮಾಜಿ ಮುಖ್ಯಮಂತ್ರಿ ಮೊಯ್ಲಿ ನೇತೃತ್ವದಲ್ಲಿ ಸಮಿತಿ ಮಾಡಿದ್ದಾರೆ ಎಂದು ಈಶ್ವರಪ್ಪ ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ಸುದ್ದಿಗಳು…

ವಿಧಾನಸೌಧಕ್ಕೆ ಎತ್ತಿನಗಾಡಿಯಲ್ಲಿ ಬಂದ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್

ಅಡಿಕೆ ಬೇಯಿಸುವ ಹಂಡೆಗೆ ಬಿದ್ದು ನಾಲ್ಕು ವರ್ಷ ವಯಸ್ಸಿನ ಬಾಲಕನ ದಾರುಣ ಸಾವು!

ಮಹಿಳೆಯನ್ನು ಬೆತ್ತಲೆಗೊಳಿಸಿ ಥಳಿಸಿ, ಅಂಗಾಂಗ ಮುಟ್ಟಿ ವಿಕೃತವಾಗಿ ಥಳಿಸಿದ ತಂಡ: ವಿಡಿಯೋ ವೈರಲ್

ಸಂಸದ ಪ್ರತಾಪ್ ಸಿಂಹ ಅವರ ಕಚೇರಿ ಮುಂದೆ ಬಳೆ ಇಟ್ಟು, ಯುವ ಕಾಂಗ್ರೆಸ್ ನಿಂದ ಪ್ರತಿಭಟನೆ

ಮುಂಬೈ: ಸ್ನೇಹಿತರೊಂದಿಗೆ ನಡೆದುಕೊಂಡು ಹೋಗುತ್ತಿದ್ದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ!

ಕೇವಲ ಐದು ರೂಪಾಯಿಗಾಗಿ ಬುಡಕಟ್ಟು ಸಮುದಾಯದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ!

ಮಮತಾ ಬ್ಯಾನರ್ಜಿಯ ಸಾಧನೆಯನ್ನು ತನ್ನ ಸಾಧನೆ ಎಂದು ಜಾಹೀರಾತು ನೀಡಿದ ಯೋಗಿ ಆದಿತ್ಯನಾಥ್

ಅರ್ಜುನ್ ಸರ್ಜಾ ವಿರುದ್ಧದ ‘ಮಿ ಟೂ’  ಪ್ರಕರಣಕ್ಕೆ ಮರುಜೀವ:  ವಿಸ್ಮಯ ಸಿನಿಮಾ ಚಿತ್ರೀಕರಣದ ವೇಳೆಯಲ್ಲೂ ಲೈಂಗಿಕ ದೌರ್ಜನ್ಯ?

ಇತ್ತೀಚಿನ ಸುದ್ದಿ