“ಮಗಳನ್ನು ಹೇಗಾದರೂ ಬದುಕಿಸಿ” ಎಂದು ಅತ್ತು ಗೋಗರೆದರೂ ಬಾಗಿಲು ತೆರೆಯದ ಆಸ್ಪತ್ರೆ | 5 ವರ್ಷದ ಬಾಲಕಿ ಸಾವು
ಲಕ್ನೋ: ಆಸ್ಪತ್ರೆಯ ಮುಂದೆ ಪೋಷಕರು ಡೆಂಗ್ಯೂ ಪೀಡಿತ ಮಗಳನ್ನು ಹಿಡಿದುಕೊಂಡು ಚಿಕಿತ್ಸೆ ಕೊಡಿ ಎಂದು ಅತ್ತು ಗೋಗರೆದರೂ ವೈದ್ಯರಿಗೆ ಕರುಣೆ ಬರಲಿಲ್ಲ. ಸತತ 3 ಗಂಟೆಗಳ ಕಾಲ ಮಗಳನ್ನು ಹಿಡಿದುಕೊಂಡು ಕುಳಿತರೂ ಆಸ್ಪತ್ರೆಯೊಳಕ್ಕೂ ಬರಲು ಬಿಡದೇ ಮೂರು ಗಂಟೆಗಳ ಕಾಲ ಕಾಯುವಂತೆ ಮಾಡಿದ್ದಾರೆ. ಇದೀಗ ಬಾಲಕಿಯು ಸಾವನ್ನಪ್ಪಿದ್ದಾಳೆ.
ಹೌದು…! ಈ ಘಟನೆ ನಡೆದಿರುವುದು, ಉತ್ತರ ಪ್ರದೇಶದಲ್ಲಿ. ಡೆಂಗ್ಯುನಿಂದ ಬಳಲುತ್ತಿದ್ದ ಐದು ವರ್ಷದ ಬಾಲಕಿಯನ್ನು ಇಲ್ಲಿನ ಫಿರೋಝಾಬಾದ್ ನ ಆಸ್ಪತ್ರೆಗೆ ದಾಖಲಿಸಲು ಪೋಷಕರು ಯತ್ನಿಸಿದ್ದಾರೆ. ಬೆಳಗ್ಗೆ 8 ಗಂಟೆಗೆ ಆಸ್ಪತ್ರೆಗೆ ಬಾಲಕಿಯನ್ನು ಕರೆತರಲಾಗಿದ್ದರೂ, ಹಲವು ಗಂಟೆಗಳ ಕಾಲ ಆಸ್ಪತ್ರೆ ಸಿಬ್ಬಂದಿ ಬಾಲಕಿಯನ್ನು ದಾಖಲಿಸಿಕೊಳ್ಳಲು ಆಸ್ಪತ್ರೆ ಸಿಬ್ಬಂದಿ ನಿರಾಕರಿಸಿದ್ದಾರೆ. ಮೂರು ಗಂಟೆಗಳಿಗೂ ಅಧಿಕ ಸಮಯ ಕಾದ ಬಳಿಕ, ಮಧ್ಯಾಹ್ನದ ವೇಳೆಗೆ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಎನ್ ಡಿ ಟಿವಿ ವರದಿ ಮಾಡಿದೆ.
ಉತ್ತರ ಪ್ರದೇಶದ ರಾಜಧಾನಿ ಲಕ್ನೋದಿಂದ 300 ಕಿ.ಮೀ.ದೂರದಲ್ಲಿರುವ ಫಿರೋಝಾಬಾದ್ ನಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗಿವೆ. ಈ ನಡುವೆ ಆಸ್ಪತ್ರೆಗಳ ನಿರ್ಲಕ್ಷ್ಯಗಳು ಸಾರ್ವಜನಿಕರನ್ನು ಚಿಂತೆಗೆ ದೂಡಿದೆ. ಈ ಪ್ರದೇಶದಲ್ಲಿ ಕಳೆದ 48 ಗಂಟೆಗಳಲ್ಲಿ 16ಕ್ಕೂ ಅಧಿಕ ಸಾವುಗಳು ಸಂಭವಿಸಿದೆ ಎಂದು ತಿಳಿದು ಬಂದಿದೆ.
ಇನ್ನಷ್ಟು ಸುದ್ದಿಗಳು…
ಎತ್ತಿನಗಾಡಿಯಿಂದ ಕೆಳಕ್ಕೆ ಉರುಳಿದ ಕಾಂಗ್ರೆಸ್ ನಾಯಕರು
ಕಾಂಗ್ರೆಸ್ ನ ಹಿರಿಯ ನಾಯಕ ಆಸ್ಕರ್ ಫೆರ್ನಾಂಡಿಸ್ ನಿಧನ
ಪ್ರಾಣ ಸ್ನೇಹಿತರು ಜೊತೆಯಾಗಿ ಪ್ರಾಣ ಬಿಟ್ಟರು: ಕೃಷಿ ಹೊಂಡದಲ್ಲಿ ಈಜಲು ಹೋಗಿದ್ದು ಪ್ರಾಣಕ್ಕೆ ಕುತ್ತು ತಂದಿತು!
ಜಾತಿ ಜನಗಣತಿ ಸಮೀಕ್ಷೆಯನ್ನು ಕೊಂದದ್ದು ಸಿದ್ದರಾಮಯ್ಯ, ಹೂತದ್ದು ಡಿ.ಕೆ.ಶಿವಕುಮಾರ್ | ಕೆ.ಎಸ್.ಈಶ್ವರಪ್ಪ
ವಿಧಾನಸೌಧಕ್ಕೆ ಎತ್ತಿನಗಾಡಿಯಲ್ಲಿ ಬಂದ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್
ಮಹಿಳೆಯನ್ನು ಬೆತ್ತಲೆಗೊಳಿಸಿ ಥಳಿಸಿ, ಅಂಗಾಂಗ ಮುಟ್ಟಿ ವಿಕೃತವಾಗಿ ಥಳಿಸಿದ ತಂಡ: ವಿಡಿಯೋ ವೈರಲ್
ಆನ್ ಲೈನ್ ಗೆಳೆಯನ ಭೇಟಿಗೆ ತೆರಳಿದ ಯುವತಿಗೆ ಡ್ರಗ್ಸ್ ನೀಡಿ, ಐದು ಮಂದಿಯಿಂದ ಸಾಮೂಹಿಕ ಅತ್ಯಾಚಾರ!