ದೇವಸ್ಥಾನ ತೆರವಿನಿಂದ ಕೋಟ್ಯಂತರ ಜನರ ಮನಸ್ಸಿಗೆ ನೋವಾಗಿದೆ: ಸಿ.ಟಿ.ರವಿ - Mahanayaka

ದೇವಸ್ಥಾನ ತೆರವಿನಿಂದ ಕೋಟ್ಯಂತರ ಜನರ ಮನಸ್ಸಿಗೆ ನೋವಾಗಿದೆ: ಸಿ.ಟಿ.ರವಿ

c t ravi
14/09/2021

ಬೆಂಗಳೂರು: ಪುರಾತನ ಹಿಂದೂ ದೇವಾಲಯಗಳನ್ನು ಏಕಾಏಕಿ ತೆರವುಗೊಳಿಸಲಾಗುತ್ತಿರುವುದು ಕೋಟ್ಯಂತರ ಜನರ ಮನಸ್ಸಿಗೆ ನೋವಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನಕಾರ್ಯದರ್ಶಿ ಸಿ.ಟಿ. ರವಿ ಹೇಳಿದ್ದು, ತಮ್ಮದೇ ಪಕ್ಷದ ಆಡಳಿತ ಅವಧಿಯಲ್ಲಿ ನಡೆದ ಘಟನೆಯ ಬಗ್ಗೆ ಅವರು ಕಳವಳ ವ್ಯಕ್ತಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರ ಧಾರ್ಮಿಕ ಭಾವನೆಗಳಿಗೆ ಧಕ್ಕೆಯುಂಟುಮಾಡಿ ದೇವಾಲಯ ತೆರವು ಮಾಡುವುದು ಸರಿಯಲ್ಲ. ಈಗಾಗಲೇ ಈ ಬಗ್ಗೆ ಜಿಲ್ಲಾಧಿಕಾರಿಗಳು ಹಾಗೂ ಸಿಎಂ ಬೊಮ್ಮಾಯಿ ಜೊತೆಗೂ ಮಾತನಾಡಿದ್ದೇನೆ. ದೇವಾಲಯ ತೆರವಿನಿಂದ ಎಲ್ಲರ ಮನಸ್ಸಿಗೂ ನೋವಾಗಿದೆ ಎಂದರು.

ಸುಪ್ರೀಂ ಕೋರ್ಟ್ ಆದೇಶವನ್ನು ಪಾಲಿಸಬೇಕು ನಿಜ. ಆದೇಶ ಪಾಲನೆ ಹೇಗೆ ಮಾಡಬೇಕು ಎಂಬುದು ಮುಖ್ಯ. ಈ ನಿಟ್ಟಿನಲ್ಲಿ ದೇವಾಲಯಗಳ ತೆರವು ವಿಚಾರ ಮತ್ತೊಮ್ಮೆ ಪರಿಶೀಲಿಸಬೇಕು. ಏಕಾಏಕಿ ನಿರ್ಧಾರ ಸರಿಯಲ್ಲ ಎಂದು ಹೇಳಿದರು.

rpi

ಇನ್ನಷ್ಟು ಸುದ್ದಿಗಳು…

ಕುಂಭಮೇಳಕ್ಕೆ ಬಂದಿದ್ದ ಯುವತಿಯನ್ನು ಅತ್ಯಾಚಾರ ನಡೆಸಿ, ಚಿಕ್ಕಪ್ಪನಿಂದಲೇ ಬ್ಯ್ಲಾಕ್ ಮೇಲ್ !

ನಾಮಪತ್ರ ಸಲ್ಲಿಸಲು ಎಮ್ಮೆ ಏರಿ ಬಂದ ಪಂಚಾಯತ್ ಅಭ್ಯರ್ಥಿ!

ಹೃದಯ ವಿದ್ರಾವಕ ಘಟನೆ: ತಾಯಿಯೊಂದಿಗೆ ನಡೆದುಕೊಂಡು ಹೋಗುತ್ತಿದ್ದ ಮಕ್ಕಳ ಮೇಲೆಯೇ ಉರುಳಿ ಬಿತ್ತು ಕಟ್ಟಡ!

ಹೈದರಾಬಾದ್: 6 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಕೊಲೆ | ಸಿಡಿದೆದ್ದ ಜನರು

“ಮಗಳನ್ನು ಹೇಗಾದರೂ ಬದುಕಿಸಿ” ಎಂದು ಅತ್ತು ಗೋಗರೆದರೂ ಬಾಗಿಲು ತೆರೆಯದ ಆಸ್ಪತ್ರೆ | 5 ವರ್ಷದ ಬಾಲಕಿ ಸಾವು

ಇತ್ತೀಚಿನ ಸುದ್ದಿ