ಕಲಾಪದ ವೇಳೆ ಕೊನೆಯ ಸೀಟಿನಲ್ಲಿ ಕುಳಿತು ಮೌನಕ್ಕೆ ಜಾರಿದ ಮಾಜಿ ಸಿಎಂ ಯಡಿಯೂರಪ್ಪ - Mahanayaka
4:12 PM Wednesday 5 - February 2025

ಕಲಾಪದ ವೇಳೆ ಕೊನೆಯ ಸೀಟಿನಲ್ಲಿ ಕುಳಿತು ಮೌನಕ್ಕೆ ಜಾರಿದ ಮಾಜಿ ಸಿಎಂ ಯಡಿಯೂರಪ್ಪ

yediyurappa
15/09/2021

ಬೆಂಗಳೂರು: ಮಾಜಿ ಸಿಎಂ ಯಡಿಯೂರಪ್ಪನವರು ಇಂದಿನ ವಿಧಾನಸಭಾ ಕಲಾಪದಲ್ಲಿ ಭಾಗವಹಿಸಿದ್ದು, ಕಳೆದ ಕೆಲವು ವರ್ಷಗಳಿಂದ ಮುಂದಿನ ಸಾಲಿನಲ್ಲಿ ಕುಳಿತು ಅಧಿವೇಶನದಲ್ಲಿ ಭಾಗವಹಿಸಿದ್ದ, ಯಡಿಯೂರಪ್ಪನವರು ಕೊನೆಯ ಸೀಟಿನಲ್ಲಿ ಕುಳಿತು ಕಲಾಪವನ್ನು ಮೂಕಪ್ರೇಕ್ಷಕರಾಗಿ ನೋಡುತ್ತಿದ್ದರು.

ಒಂದೆಡೆ ವಿಪಕ್ಷ ನಾಯಕ ಸಿದ್ದರಾಮಯ್ಯ ದಾಖಲೆಗಳನ್ನು ಕೈಯಲ್ಲಿಟ್ಟುಕೊಂಡು ಆಡಳಿತ ಪಕ್ಷಕ್ಕೆ ಪಾಯಿಂಟ್ ಗಳ ಮೇಲೆ ಪಾಯಿಂಟ್ ಹಾಕಿ ಜಗ್ಗಿದ್ದಾರೆ.  ಆಯಿಲ್ ಬಾಂಡ್ ವಿಚಾರವನ್ನು ಎತ್ತಿಕೊಂಡು ಸರ್ಕಾರಕ್ಕೆ ತೀವ್ರ ಏಟು ನೀಡುತ್ತಿದ್ದರೆ, ಯಡಿಯೂರಪ್ಪನವರು ಯಾವುದಕ್ಕೂ ತಲೆ ಕೊಡದೇ ಸದನದಲ್ಲಿ ಮೌನವಾಗಿ ಕುಳಿತು ಕಲಾಪವನ್ನು ನೋಡುತ್ತಿದ್ದರು.

ವಿಪಕ್ಷ ನಾಯಕ ಸಿದ್ದರಾಮಯ್ಯ ಸರ್ಕಾರವನ್ನು ತೀವ್ರವಾಗಿ ತರಾಟೆಗೆತ್ತಿಕೊಂಡರೂ, ಮಾಜಿ ಸಿಎಂ ಯಡಿಯೂರಪ್ಪನವರಾಗಲಿ, ಹಾಲಿ ಸಿಎಂ ಬಸವರಾಜ್ ಬೊಮ್ಮಾಯಿ ಅವರಾಗಲಿ ಸರ್ಕಾರವನ್ನು ಸಮರ್ಥನೆ ಮಾಡಿಕೊಳ್ಳಲು ಮುಂದಾಗಲಿಲ್ಲ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ.

ಇನ್ನಷ್ಟು ಸುದ್ದಿಗಳು…

ಬೆಲೆ ಏರಿಕೆ ವಿಚಾರ ಪ್ರಸ್ತಾಪಿಸುತ್ತಿದ್ದಂತೆಯೇ ಸಿದ್ದರಾಮಯ್ಯ ಮೇಲೆ ಮುಗಿಬಿದ್ದ ಬಿಜೆಪಿ ಸದಸ್ಯರು!

6 ವರ್ಷದ ಬಾಲಕಿಯ ಅತ್ಯಾಚಾರ, ಹತ್ಯೆ ಆರೋಪಿಯನ್ನು ಎನ್ ಕೌಂಟರ್ ಮಾಡುತ್ತೇವೆ | ತೆಲಂಗಾಣ ಸಚಿವ ಬಹಿರಂಗ ಹೇಳಿಕೆ

ಕೃಷಿ ಅಧ್ಯಯನಕ್ಕಾಗಿ ಫಾರ್ಮ್ ಹೌಸ್ ಗೆ ಹೋಗಿದ್ದ ವೈದ್ಯೆ ಕೃಷಿ ಹೊಂಡದಲ್ಲಿ ಮುಳುಗಿ ಸಾವು!

ಮಸೀದಿ, ಚರ್ಚ್, ದೇವಸ್ಥಾನ ಅಂತ ಇಲ್ಲ,  ಯಾವುದೇ ಇದ್ದರೂ ತೆರವು ಮಾಡುತ್ತೇವೆ | ರಾಮನಗರ ಡಿಸಿ

RPI: ಡಾ.ಬಿ.ಆರ್.ಅಂಬೇಡ್ಕರ್ ಅವರ ರಾಜಕೀಯ ಚಿಂತನೆ ಮತ್ತು ಪರ್ಯಾಯ ರಾಜಕಾರಣ | ತುಮಕೂರು ಜಿಲ್ಲಾ ಮಟ್ಟದ ಕಾರ್ಯಕರ್ತರ ಕಾರ್ಯಾಗಾರ

ಅವಸರದಿಂದ ದೇವಸ್ಥಾನಗಳನ್ನು ಒಡೆಯಬೇಡಿ: ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ

ಇತ್ತೀಚಿನ ಸುದ್ದಿ