ತೆನೆಇಳಿಸಿ ಕೈ ಹಿಡಿಯುತ್ತಾರಾ ಜೆಡಿಎಸ್ ನ ಮತ್ತೋರ್ವ ಶಾಸಕ?
ಬೆಂಗಳೂರು: ಕೋಲಾರ ಜೆಡಿಎಸ್ ಶಾಸಕ ಶ್ರೀನಿವಾಸ್ ಗೌಡ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡುವ ಮೂಲಕ ಹೊಸ ಚರ್ಚೆಗೆ ಕಾರಣರಾಗಿದ್ದಾರೆ. ತೆನೆ ಇಳಿಸಿ ಕೈ ಹಿಡಿಯುತ್ತಾರಾ? ಜಿ.ಟಿ.ದೇವೇಗೌಡ ಅವರ ಹಾದಿಯನ್ನೇ ಹಿಡಿಯುತ್ತಾರಾ? ಎನ್ನುವ ಪ್ರಶ್ನೆಗಳಿಗೆ ಇದೀಗ ಈ ಭೇಟಿ ಕಾರಣವಾಗಿದೆ.
ಶ್ರೀನಿವಾಸ್ ಗೌಡರ ವಿರುದ್ಧ ಕ್ರಮಕೈಗೊಳ್ಳುವುದಾಗ ಜೆಡಿಎಸ್ ವರಿಷ್ಠ ದೇವೇಗೌಡ ಅವರು ಹೇಳಿದ ಬೆನ್ನಲ್ಲೇ ಶ್ರೀನಿವಾಸ್ ಗೌಡ ಅವರು ಡಿ.ಕೆ.ಶಿವಕುಮಾರ್ ಅವರನ್ನು ಬೆಂಗಳೂರಿನಲ್ಲಿ ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಶ್ರೀನಿವಾಸ್ ಗೌಡ ಕೂಡ ಕಾಂಗ್ರೆಸ್ ಗೆ ಸೇರ್ಪಡೆಗೊಳ್ಳುತ್ತಾರಾ? ಎನ್ನುವ ಅನುಮಾನ ಇದೀಗ ಇನ್ನಷ್ಟು ಗಟ್ಟಿಯಾಗಿದೆ.
ಈಗಾಗಲೇ ಪಕ್ಷದ ವರಿಷ್ಠರ ವಿರುದ್ಧ ಶ್ರೀನಿವಾಸ್ ಗೌಡ ಅವರು ತಿರುಗಿ ಬಿದ್ದಿದ್ದು, ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಅವರ ವಿರುದ್ಧ ಕ್ರಮಕೈಗೊಳ್ಳುವಂತೆ ಹೆಡ್ ಡಿಡಿ ಹೇಳಿದ್ದರು. ಇದರ ಬೆನ್ನಲ್ಲೇ ಇದೀಗ ಡಿ.ಕೆ.ಶಿವಕುಮಾರ್ ಅವರನ್ನು ಅವರು ಭೇಟಿಯಾಗಿರುವುದು ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ಇನ್ನಷ್ಟು ಸುದ್ದಿಗಳು…
ಕಲಾಪದ ವೇಳೆ ಕೊನೆಯ ಸೀಟಿನಲ್ಲಿ ಕುಳಿತು ಮೌನಕ್ಕೆ ಜಾರಿದ ಮಾಜಿ ಸಿಎಂ ಯಡಿಯೂರಪ್ಪ
ಬೆಲೆ ಏರಿಕೆ ವಿಚಾರ ಪ್ರಸ್ತಾಪಿಸುತ್ತಿದ್ದಂತೆಯೇ ಸಿದ್ದರಾಮಯ್ಯ ಮೇಲೆ ಮುಗಿಬಿದ್ದ ಬಿಜೆಪಿ ಸದಸ್ಯರು!
6 ವರ್ಷದ ಬಾಲಕಿಯ ಅತ್ಯಾಚಾರ, ಹತ್ಯೆ ಆರೋಪಿಯನ್ನು ಎನ್ ಕೌಂಟರ್ ಮಾಡುತ್ತೇವೆ | ತೆಲಂಗಾಣ ಸಚಿವ ಬಹಿರಂಗ ಹೇಳಿಕೆ
ಮಂಗಳೂರು: ನಿಫಾ ವೈರಸ್ ಶಂಕೆ ಇದ್ದ ಯುವಕನ ಪರೀಕ್ಷೆ ವರದಿ ನೆಗೆಟಿವ್ | ಆರೋಗ್ಯಾಧಿಕಾರಿ
ರಾಷ್ಟ್ರಧ್ವಜಕ್ಕೆ ಅಗೌರವ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ವಿರುದ್ಧ ಪ್ರಕರಣ ದಾಖಲು
ಫ್ಲೈಓವರ್ ಮೇಲೆ ಬೈಕ್ ಗೆ ಡಿಕ್ಕಿ ಹೊಡೆದ ಕಾರು: 40 ಅಡಿ ಎತ್ತರದಿಂದ ಕೆಳಗೆ ಬಿದ್ದ ಬೈಕ್ ಸವಾರರು