ದೇವಸ್ಥಾನ ತೆರವು ವಿಚಾರ: ಬಿಜೆಪಿ, ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ - Mahanayaka
1:01 AM Wednesday 11 - December 2024

ದೇವಸ್ಥಾನ ತೆರವು ವಿಚಾರ: ಬಿಜೆಪಿ, ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ

nanjanagudu
15/09/2021

ಮೈಸೂರು: ದೇವಸ್ಥಾನ ತೆರವು ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಹಾಗೂ ಕಾರ್ಯಾಕರ್ತರ ನಡುವೆ ಮಾರಾಮಾರಿ ನಡೆದು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಘಟನೆ ನಡೆದಿದ್ದು ಓರ್ವ ಗಾಯಗೊಂಡಿರುವುದಾಗಿ ವರದಿಯಾಗಿದೆ.

ಉಚ್ಚಗಣಿ ಮಹದೇವಮ್ಮ ದೇವಸ್ಥಾನ ತೆರವು ವಿಚಾರವಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವನಾರಾಯಣ್ ಭೇಟಿ ನೀಡಿ ನಿರ್ಗಮಿಸಿದ ಬಳಿಕ ಈ ಘಟನೆ ನಡೆದಿದ ಎಂದು ತಿಳಿದು ಬಂದಿದೆ. ಗಲಾಟೆ ವೇಳೆ ಕಾಂಗ್ರೆಸ್ ಕಾರ್ಯಕರ್ತ ರಾಜು ಅವರ ಪುತ್ರ ರವಿ ಎಂಬಾತ ಬಿಜೆಪಿ ಕಾರ್ಯಕರ್ತ ಉದಯರವಿ ಎಂಬವರಿಗೆ ಮಚ್ಚಿನಿಂದ ಹಲ್ಲೆ ನಡೆಸಿದ್ದಾನೆ ಎಂದು ಹೇಳಲಾಗಿದ್ದು, ಗಾಯಾಳುವನ್ನು ನಂಜನಗೂಡು  ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆಯಿಂದ ಉಚ್ಚಗಣಿ ಗ್ರಾಮದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣ ವಾಗಿದ್ದು, ಉಚ್ಚಗಣಿ ಮಹದೇವಮ್ಮ ದೇಗುಲ ನಿರ್ವಹಣೆ ಸಂಬಂಧ ನಡೆದಿರುವ ಗಲಾಟೆ ಎರಡೂ ಪಕ್ಷದವರ ವೈಯಕ್ತಿಕ ದ್ವೇಷಕ್ಕೆ ಕಾರಣವಾಗಿದೆ ಎಂದು ತಿಳಿದು ಬಂದಿದೆ. ಇನ್ನೂ ಘಟನೆಯ ಮಾಹಿತಿ ಪಡೆದು ಸ್ಥಳಕ್ಕೆ ಆಗಮಿಸಿರುವ ಪೊಲೀಸರು ಪರಿಸ್ಥಿತಿ ಶಾಂತಗೊಳಿಸಲು ಯತ್ನಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ.

ಇನ್ನಷ್ಟು ಸುದ್ದಿಗಳು…

ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಗೆ ಪರ್ಯಾಯ ರಾಜಕೀಯ ಪಕ್ಷ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ | ಡಾ.ಎಂ.ವೆಂಕಟಸ್ವಾಮಿ

ಪ್ರೀತಿಯ ನಾಟಕವಾಡಿ ಬಾಲಕಿಯ ಮೇಲೆ ಅತ್ಯಾಚಾರ | ನಾಲ್ವರು ಆರೋಪಿಗಳು ಅರೆಸ್ಟ್

ಬಿಜೆಪಿ ಮತ್ತು ಆರೆಸ್ಸೆಸ್ ನವರು ನಕಲಿ ಹಿಂದೂಗಳು | ರಾಹುಲ್ ಗಾಂಧಿ ವಾಗ್ದಾಳಿ

6 ವರ್ಷದ ಬಾಲಕಿಯ ಅತ್ಯಾಚಾರ, ಹತ್ಯೆ ಆರೋಪಿಯನ್ನು ಎನ್ ಕೌಂಟರ್ ಮಾಡುತ್ತೇವೆ | ತೆಲಂಗಾಣ ಸಚಿವ ಬಹಿರಂಗ ಹೇಳಿಕೆ

ಕೃಷಿ ಅಧ್ಯಯನಕ್ಕಾಗಿ ಫಾರ್ಮ್ ಹೌಸ್ ಗೆ ಹೋಗಿದ್ದ ವೈದ್ಯೆ ಕೃಷಿ ಹೊಂಡದಲ್ಲಿ ಮುಳುಗಿ ಸಾವು!

RPI: ಡಾ.ಬಿ.ಆರ್.ಅಂಬೇಡ್ಕರ್ ಅವರ ರಾಜಕೀಯ ಚಿಂತನೆ ಮತ್ತು ಪರ್ಯಾಯ ರಾಜಕಾರಣ | ತುಮಕೂರು ಜಿಲ್ಲಾ ಮಟ್ಟದ ಕಾರ್ಯಕರ್ತರ ಕಾರ್ಯಾಗಾರ

ಇತ್ತೀಚಿನ ಸುದ್ದಿ