ಶಾಕಿಂಗ್ ನ್ಯೂಸ್: ಭಾರತದಲ್ಲಿ ಪ್ರತಿದಿನ 80 ಕೊಲೆ, 77 ಅತ್ಯಾಚಾರ ಪ್ರಕರಣಗಳು ದಾಖಲಾಗ್ತಿವೆ!
ನವದೆಹಲಿ: ಭಾರತದಲ್ಲಿ 2020ರಲ್ಲಿ ಪ್ರತಿ ದಿನ ಸರಾಸರಿ 80 ಕೊಲೆ ಮತ್ತು 77 ಅತ್ಯಾಚಾರ ಪ್ರಕರಣಗಳು ದಾಖಲಾಗುತ್ತಿವೆ ಎಂದು ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ(NCRB) ವರದಿಯಲ್ಲಿ ಬಹಿರಂಗ ಪಡಿಸಿದೆ.
ರಾಸ್ಥಾನದಲ್ಲಿ ಅತ್ಯಧಿಕ ಅತ್ಯಾಚಾರ ಪ್ರಕರಣಗಳು ದಾಖಲಾಗಿದ್ದು, ಎರಡನೇ ಸ್ಥಾನದಲ್ಲಿ ಉತ್ತರಪ್ರದೇಶ ರಾಜ್ಯವಿದೆ ಎಂದು ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ ಬಹಿರಂಗಪಡಿಸಿದೆ. ರಾಜಸ್ಥಾನದಲ್ಲಿ 5,310 ಅತ್ಯಾಚಾರ ಪ್ರಕರಣಗಳು ದಾಖಲಾಗಿದ್ದು, ಉತ್ತರ ಪ್ರದೇಶದಲ್ಲಿ 2,769 ಅತ್ಯಾಚಾರ ಪ್ರಕರಣಗಳು ದಾಖಲಾಗಿದೆ. ಮಧ್ಯಪ್ರದೇಶದಲ್ಲಿ 2,339 ಮತ್ತು ಮಹಾರಾಷ್ಟ್ರದಲ್ಲಿ 2,061 ಪ್ರಕರಣಗಳು ದಾಖಲಾಗಿವೆ.
2020ರಲ್ಲಿ ಸರಾಸರಿ ಪ್ರತೀ ದಿನ ಸುಮಾರು 77 ಅತ್ಯಾಚಾರ ಪ್ರಕರಣಗಳು ದಾಖಲಾಗುತ್ತಿವೆ. ಒಟ್ಟು 28,047 ಅತ್ಯಾಚಾರ ಪ್ರಕರಣಗಳು ದಾಖಲಾಗಿದೆ. ಮಹಿಳೆಯರ ವಿರುದ್ಧದ ಅಪರಾಧಗಳ ಒಟ್ಟಾರೆ ಪ್ರಕರಣಗಳ ಸಂಖ್ಯೆಯು 2020 ರಲ್ಲಿ 3,71,503 ಪ್ರಕರಣಗಳು ದಾಖಲಾಗಿದ್ದು, ಇದು 2019 ರಲ್ಲಿ 4,05,326 ಮತ್ತು 2018 ರಲ್ಲಿ 3,78,236 ಕ್ಕೆ ಇಳಿದಿದೆ.
ಮಧ್ಯಪ್ರದೇಶದಲ್ಲಿ ಅಪ್ರಾಪ್ತ ವಯಸ್ಕರ ಮೇಲಿನ ಅತ್ಯಾಚಾರ ಪ್ರಕರಣಗಳ ಸಂಖ್ಯೆ 3,259 ಆಗಿದ್ದು ಮಹಾರಾಷ್ಟ್ರದಲ್ಲಿ 2,785 ಮತ್ತು ಉತ್ತರ ಪ್ರದೇಶದಲ್ಲಿ 2,630 ಪ್ರಕರಣಗಳು ವರದಿಯಾಗಿವೆ ಎಂದು NCRB ಹೇಳಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ.
ಇನ್ನಷ್ಟು ಸುದ್ದಿಗಳು…
ಕಬಡ್ಡಿ ತರಬೇತಿ ಕೇಂದ್ರದಲ್ಲಿ ತಂದೆ, ಮಗನಿಂದ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ!
ಜನರ ಭಾವನೆಗಳನ್ನು ಕೆಡವಿದವರು ಈಗ ದೇವಸ್ಥಾನವನ್ನೂ ಕೆಡವಿದ್ದಾರೆ | ಯು.ಟಿ.ಖಾದರ್ ಆಕ್ರೋಶ
ಮಹಿಳೆ ಮೃತಪಟ್ಟು ನಾಲ್ಕು ತಿಂಗಳ ಬಳಿಕ ಕೊರೊನಾ ಲಸಿಕೆ ನೀಡಿದ ಆರೋಗ್ಯ ಕೇಂದ್ರ!
ದೇವಸ್ಥಾನ ತೆರವು ವಿಚಾರ: ಬಿಜೆಪಿ, ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ
ಬಿಜೆಪಿ ಮತ್ತು ಆರೆಸ್ಸೆಸ್ ನವರು ನಕಲಿ ಹಿಂದೂಗಳು | ರಾಹುಲ್ ಗಾಂಧಿ ವಾಗ್ದಾಳಿ
ಬೆಲೆ ಏರಿಕೆ ವಿಚಾರ ಪ್ರಸ್ತಾಪಿಸುತ್ತಿದ್ದಂತೆಯೇ ಸಿದ್ದರಾಮಯ್ಯ ಮೇಲೆ ಮುಗಿಬಿದ್ದ ಬಿಜೆಪಿ ಸದಸ್ಯರು!
6 ವರ್ಷದ ಬಾಲಕಿಯ ಅತ್ಯಾಚಾರ, ಹತ್ಯೆ ಆರೋಪಿಯನ್ನು ಎನ್ ಕೌಂಟರ್ ಮಾಡುತ್ತೇವೆ | ತೆಲಂಗಾಣ ಸಚಿವ ಬಹಿರಂಗ ಹೇಳಿಕೆ
ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಗೆ ಪರ್ಯಾಯ ರಾಜಕೀಯ ಪಕ್ಷ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ | ಡಾ.ಎಂ.ವೆಂಕಟಸ್ವಾಮಿ