ಸಿನಿಮಾ, ನಾಟಕ ಪ್ರದರ್ಶನಗಳಿಗೆ ಪೂರ್ಣ ಪ್ರಮಾಣದ ಅವಕಾಶ ನೀಡಿ | ದೇವದಾಸ್ ಕಾಪಿಕಾಡ್ ಒತ್ತಾಯ
ಮಂಗಳೂರು: ಸಿನಿಮಾ, ನಾಟಕ ಪ್ರದರ್ಶನಗಳಿಗೆ ಜಿಲ್ಲೆಯಲ್ಲಿ ಪೂರ್ಣ ಪ್ರಮಾಣದಲ್ಲಿ ಅವಕಾಶ ನೀಡುವ ಮೂಲಕ ಕಷ್ಟದಲ್ಲಿರುವ ಕಲಾವಿದರಿಗೆ ಸರ್ಕಾರ ನೆರವಾಗಬೇಕು ಎಂದು ಕಲಾವಿದರಾದ ದೇವದಾಸ್ ಕಾಪಿಕಾಡ್, ವಿಜಯ್ ಕುಮಾರ್ ಕೊಡಿಯಾಲ್ ಬೈಲ್, ಕಿಶೋರ್ ಡಿ. ಶೆಟ್ಟಿ, ಸಿನಿಮಾ ನಿರ್ಮಾಪಕ ಪ್ರಕಾಶ್ ಪಾಂಡೇಶ್ವರ ಹಾಗೂ ಮೋಹನ್ ಕೊಪ್ಪಲ ಒತ್ತಾಯಿಸಿದರು.
ಗುರುವಾರ ನಗರ ಪತ್ರಕರ್ತರ ಭವನದಲ್ಲಿ ಕರೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋವಿಡ್ ಪ್ರಕರಣಗಳು ಗಣನೀಯವಾಗಿ ಕಡಿಮೆಯಾಗಿ, ಶಾಲೆ-ಕಾಲೇಜುಗಳು ತೆರೆದಿವೆ. ಎಲ್ಲವೂ ಸಹಜ ಸ್ಥಿತಿಗೆ ಬಂದಿದೆ. ಅದರೆ, ಜಿಲ್ಲೆಯಲ್ಲಿ ಸಿನಿಮಾ ಮಂದಿರಗಳನ್ನು ಪೂರ್ಣ ಪ್ರಮಾಣದಲ್ಲಿ ತೆರೆಯಲು ಅವಕಾಶ ನೀಡಿಲ್ಲ. ಇದರಿಂದಲೇ ಜೀವನ ಸಾಗಿಸುವ ಕಲಾವಿದರ ಆರ್ಥಿಕ ಸ್ಥಿತಿ ಹದಗೆಟ್ಟಿದೆ. ಜಿಲ್ಲಾಡಳಿತ ಮಧ್ಯ ಪ್ರವೇಶಿಸಿ, ರಾಜ್ಯ ಸರ್ಕಾರಕ್ಕೆ ವಿಷಯ ಮನವರಿಕೆ ಮಾಡಿಕೊಡಬೇಕು ಎಂದು ಆಗ್ರಹಿಸಿದರು.
ಕಲೆಯನ್ನು ನಂಬಿಕೊಂಡ ನೂರಾರು ಕುಟುಂಬಗಳು ಇವೆ. ಒಂದೂವರೆ ವರ್ಷದಿಂದ ಪ್ರದರ್ಶನ ಇಲ್ಲದೆ, ಕಲಾವಿದರು ನಿರ್ಗತಿಕರಾಗಿದ್ದಾರೆ. ಜಿಲ್ಲೆಯಲ್ಲಿ 30ಕ್ಕೂ ಮಿಕ್ಕಿ ನಾಟಕ ತಂಡಗಳು, 5,000ಕ್ಕೂ ಹೆಚ್ಚು ಕಲಾವಿದರು ಇದ್ದಾರೆ. ಕಲಾವಿದರು ಸಂಕಷ್ಟದಲ್ಲಿದ್ದಾಗ ಸರ್ಕಾರ ನೆರವಾಗಿಲ್ಲ. ನಮಗೆ ನಾಟಕ ಪ್ರದರ್ಶನ, ಸಿನಿಮಾ ಮಂದಿರಗಳಲ್ಲಿ ಪೂರ್ಣ ಪ್ರಮಾಣದ ಅವಕಾಶ ನೀಡಿ, ಕಲಾವಿದರ ಕುಟುಂಬಕ್ಕೆ ನೆರವಾಗಬೇಕು’ ಎಂದು ಕಾಪಿಕಾಡ್ ತಿಳಿಸಿದರು.
ಚಿತ್ರ ಮಂದಿರಗಳಲ್ಲಿ ಪೂರ್ಣ ಪ್ರಮಾಣದಲ್ಲಿ ಸಿನಿಮಾ ಬಿಡುಗಡೆಗೊಳಿಸಲು ಅವಕಾಶ ನೀಡಬೇಕು. ಈಗಾಗಲೇ ಕೆಲವು ಸಿನಿಮಾ ಮಂದಿರಗಳು ಮುಚ್ಚಿವೆ. ಇನ್ನುಳಿದವನ್ನಾದರೂ ಉಳಿಸುವ ಪ್ರಯತ್ನ ಮಾಡಬೇಕು. ಚಿತ್ರಮಂದಿರಗಳಿಗೆ ವಿಧಿಸಿರುವ ನಿರ್ಬಂಧ ತೆರವುಗೊಳಿಸಿ, ಶೇ.100ರ ಸಾಮರ್ಥ್ಯದಲ್ಲಿ ಅವಕಾಶ ನೀಡಬೇಕು ಎಂದು ವಿಜಯಕುಮಾರ್ ಕೊಡಿಯಾಲ್ ಬೈಲ್ ಆಗ್ರಹಿಸಿದರು.
10ರಿಂದ 15 ಸಿನಿಮಾಗಳು ತೆರೆಗೆ ಬರಲು ಸಿದ್ಧವಾಗಿವೆ. ಶೇ.50ರಷ್ಟು ಅವಕಾಶ ನೀಡಿದರೆ ಟಾಕೀಸ್ ಜನರು ಬರುವುದಿಲ್ಲ. ಮಾರುಕಟ್ಟೆಯಲ್ಲಿ ವ್ಯಾಪಾರಕ್ಕೆ ಶೇ.100ರಷ್ಟು ಅವಕಾಶ ನೀಡಲಾಗಿದೆ. ನಾಟಕ-ಸಿನಿಮಾ ವಿಚಾರದಲ್ಲಿ ತಾರತಮ್ಯ ಸಲ್ಲದು. ಸಿನಿಮಾ ನಿರ್ಮಾಪಕರು ಸಾಲ ತಂದು ಸಿನಿಮಾಕ್ಕೆ ಬಂಡವಾಳ ಹಾಕಿ, ಈಗ ಬಡ್ಡಿ ಕಟ್ಟಲಾಗದ ಸ್ಥಿತಿ ತಲುಪಿದ್ದಾರೆ ಎಂದು ನಿರ್ಮಾಪಕ ಪ್ರಕಾಶ್ ಪಾಂಡೇಶ್ವರ್ ತಿಳಿಸಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ.
ಇದನ್ನೂ ಓದಿ…
ದೇವಾಲಯ ತೆರವು: ಸಂಸದ ತೇಜಸ್ವಿ ಸೂರ್ಯ, ಪ್ರತಾಪ್ ಸಿಂಹಗೆ ಹಿಂದೂ ಕಾರ್ಯಕರ್ತರ ಮುತ್ತಿಗೆ
2023ರಲ್ಲಿ ಎರಡೂ ಪಕ್ಷಗಳು ಜೆಡಿಎಸ್ ಮನೆ ಬಾಗಿಲಿಗೆ ಬರುತ್ತದೆ: ಹೆಚ್.ಡಿ.ದೇವೇಗೌಡ ಗುಡುಗು
ಭೀಕರ ಅಪಘಾತ: ಬಸ್, ಟಾಟಾ ಏಸ್ ವಾಹನದ ನಡುವೆ ಸಿಲುಕಿದ ತಂದೆ, ಮಗಳು ಸಾವು
ಮತ್ತೊಂದು ಫ್ಲೈಓವರ್ ನಿರ್ಮಾಣ ಮಾಡುವ ಸಿಹಿ ಸುದ್ದಿ ನೀಡಿದ ನಳಿನ್ ಕುಮಾರ್ ಕಟೀಲ್
ರಾತ್ರೋ ರಾತ್ರಿ ಇಬ್ಬರು ಹುಡುಗರ ಖಾತೆಗೆ ಜಮಾ ಆಯಿತು 900 ಕೋಟಿಗೂ ಅಧಿಕ ಹಣ!
ಟ್ರಾಫಿಕ್ ಸಿಗ್ನಲ್ ನಲ್ಲಿ ಡಾನ್ಸ್ ಮಾಡಿ ಸಂಕಷ್ಟಕ್ಕೀಡಾದ ಯುವತಿ!
ಬಿಜೆಪಿ ಮತ್ತು ಆರೆಸ್ಸೆಸ್ ನವರು ನಕಲಿ ಹಿಂದೂಗಳು | ರಾಹುಲ್ ಗಾಂಧಿ ವಾಗ್ದಾಳಿ